Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ...

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ23 May 2025 5:07 PM IST
share
ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ : ಡಿಸಿಎಂ ಡಿ.ಕೆ.ಶಿವಕುಮಾರ್

ವಿಜಯಪುರ : "ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಜಯಪುರ ಜಿಲ್ಲೆಯ ಕೊಲ್ಹಾರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನೆರವೇರಿಸಿ ಮಾತನಾಡಿದರು.

"ಬಸವಣ್ಣನವರು ಹುಟ್ಟಿದ ನಾಡಿಗೆ ಬಂದು, ಇಲ್ಲಿನ ಶರಣರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯ. ಬುದ್ಧ, ಪ್ರೀತಿ ಹಾಗೂ ಶಾಂತಿ ಎಂದು ಹೇಳುತ್ತಾನೆ. ದುರ್ಯೋಧನ, ಹಠ ಹಾಗೂ ಛಲ ಎಂದು ಹೇಳುತ್ತಾನೆ. ಏಕಲವ್ಯ ಮತ್ತು ಅರ್ಜುನ, ಗುರಿ ಎಂದು ಹೇಳುತ್ತಾರೆ. ಧರ್ಮರಾಯ, ಸುಧರ್ಮ ಎನ್ನುತ್ತಾನೆ. ಕೃಷ್ಣ ತಂತ್ರ ಎಂದರೆ, ಭೀಷ್ಮ ಪ್ರತಿಜ್ಞೆ ಎನ್ನುತ್ತಾನೆ, ಸಂತರು ನಮ್ಮದು ಭಕ್ತಿ ಎನ್ನುತ್ತಾರೆ. ಅಲೆಕ್ಸಾಂಡರ್ ಯುದ್ಧ ಎನ್ನುತ್ತಾನೆ. ಬಸವಣ್ಣ ಸಮಾನತೆ, ಸರ್ವರಿಗೂ ಸಮಬಾಳು, ಸಮಪಾಲು ಎಂದು ಹೇಳುತ್ತಾರೆ" ಎಂದರು.

"ಶ್ರೀಮಂತರು ಆಸ್ತಿ ಬಗ್ಗೆ ಆಲೋಚಿಸುತ್ತಾರೆ. ಹಸಿದವರು ಉದ್ಯೋಗ, ಊಟದ ಬಗ್ಗೆ ಚಿಂತಿಸುತ್ತಾರೆ. ಶಾಂತಿ, ಪ್ರೀತಿ, ಭಕ್ತಿ, ಸಮಾನತೆ, ಅನ್ನ ನೀಡುವುದು ಕಾಂಗ್ರೆಸ್ ಪಕ್ಷದ ನಂಬಿಕೆ. ನೀವು ಶಿವಾನಂದ ಪಾಟೀಲ್ ಅವರನ್ನು ಸತತವಾಗಿ ಆಯ್ಕೆ ಮಾಡುತ್ತಿದ್ದೀರಿ. ಅವರು ಸೇರಿದಂತೆ ಈ ರಾಜ್ಯದಲ್ಲಿ 136 ಶಾಸಕರನ್ನು ಆಯ್ಕೆ ಮಾಡಿ ಬಲಿಷ್ಠ ಸರಕಾರವನ್ನು ಅಧಿಕಾರಕ್ಕೆ ತಂದಿದ್ದೀರಿ. ಅದಕ್ಕಾಗಿ ನಿಮ್ಮೆಲ್ಲರ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಅರ್ಪಿಸುತ್ತೇನೆ" ಎಂದರು.

"ನಾವು ಬಡವರ ಬದುಕಿನ ಬಗ್ಗೆ ಆಲೋಚಿಸುತ್ತೇವೆ. ಬಡವರ ನೋವು ಹಂಚಿಕೊಳ್ಳಲು ಬಯಸುತ್ತೇವೆ. ಬಸವಣ್ಣನವರ ಆಶಯದಂತೆ ಸರ್ವರಿಗೂ ಸಮಬಾಳು, ಸಮಪಾಲು ಎಂದು ಸರಕಾರ ನಡೆಸುತ್ತಿದ್ದೇವೆ. ನಮ್ಮ ಸರಕಾರ ಬಸವಣ್ಣ ಅವರನ್ನು ನಮ್ಮ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ನಿಮ್ಮ ಬದುಕನ್ನು ಉದ್ಧಾರ ಮಾಡಬೇಕು ಎಂಬ ಹಂಬಲ ನಮ್ಮ ಶಿವಾನಂದ ಪಾಟೀಲ್ ಅವರಿಗಿದೆ. ಅವರು ನನ್ನನ್ನು ಭೇಟಿ ಮಾಡಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೆ" ಎಂದು ತಿಳಿಸಿದರು.

"ದೇವರು ನಮಗೆ ವರ ಅಥವಾ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಸಾಧಿಸುತ್ತೇವೆ ಎಂಬುದು ಮುಖ್ಯ" ಎಂದರು.

"ಬಂಜಾರ ಸಮುದಾಯ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ನಿಮ್ಮ ನೋವು ನಮಗೆ ಅರ್ಥವಾಗುತ್ತದೆ. ನೀವು ಯಾವುದೇ ಅಪಪ್ರಚಾರಕ್ಕೆ ಈಡಾಗಬೇಡಿ. ರಾಜ್ಯದಲ್ಲಿ ಬಲಿಷ್ಠ ಸರಕಾರ ಅಧಿಕಾರದಲ್ಲಿದೆ. ಎಲ್ಲಾ ಸಮಾಜಕ್ಕೂ ನ್ಯಾಯವನ್ನು ಒದಗಿಸುವ ಕೆಲಸವನ್ನು ನಾವು ಮಾಡುತ್ತೇವೆ. ಎಲ್ಲರಿಗೂ ಸಮಾನತೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಹೀಗಾಗಿ ಯಾರೂ ಚಿಂತಿಸುವ ಅಗತ್ಯವಿಲ್ಲ" ಎಂದು ಭರವಸೆ ತುಂಬಿದರು.

"ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಎತ್ತರಿಸಲು ನಮ್ಮ ಸರಕಾರ ಸಂಕಲ್ಪ ಮಾಡಿದೆ. ಈ ವಿಚಾರವಾಗಿ ಶಾಸಕರ ಜತೆ ಚರ್ಚೆ ಮಾಡಿದ್ದು, ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ. ಇತ್ತೀಚೆಗೆ ನಾನು ಹಾಗೂ ಸಿಎಂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಿ ಈ ಬಗ್ಗೆ ಅಧಿಸೂಚನೆ ಹೊರಡಿಸಲು ಒತ್ತಡ ಹಾಕಿದ್ದೇವೆ. ಇದಕ್ಕಾಗಿ ಕೇಂದ್ರ ಸಚಿವರು ಸಭೆಯನ್ನು ಕರೆದಿದ್ದರು. ಆದರೆ ಕಾರಣಾಂತರಗಳಿಂದ ಅದನ್ನು ಮುಂದಕ್ಕೆ ಹಾಕಲಾಗಿದೆ" ಎಂದು ಮಾಹಿತಿ ನೀಡಿದರು.

"ಮಂಡ್ಯ ನಂತರ ಈ ಭಾಗದ ಜಿಲ್ಲೆಗಳು ಸಕ್ಕರೆ ನಾಡಾಗಿ ಮಾರ್ಪಟ್ಟಿವೆ. ಈ ಭಾಗದ ರೈತರ ಬದುಕು ಹಸನಾಗಿಸಲು ನಾವು ಬದ್ಧರಾಗಿದ್ದೇವೆ. ಈ ಭಾಗದಲ್ಲಿ ಕಾರ್ಖಾನೆಗಳು ಆರಂಭವಾಗಿ, ಉದ್ಯೋಗಗಳು ಸೃಷ್ಟಿಯಾಗುತ್ತಿವೆ" ಎಂದರು.

"ಬಿಜೆಪಿ ಸರಕಾರದ ಅವಧಿಯಲ್ಲಿ ನೀವೆಲ್ಲರೂ ಬೆಲೆ ಏರಿಕೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ತತ್ತರಿಸಿದ್ದೀರಿ. ನಿಮಗೆ ಸಹಾಯ ಮಾಡಲು ಗ್ಯಾರಂಟಿ ಯೋಜನೆ ತರಲಾಗಿದೆ. ಬಡ ಕುಟುಂಬದ ಮಹಿಳೆಗೆ 2 ಸಾವಿರ, 200 ಯೂನಿಟ್ ವರೆಗೂ ಉಚಿತ ವಿದ್ಯುತ್, ಉಚಿತ ಬಸ್ ಪ್ರಯಾಣ, 10 ಕೆ.ಜಿ ಅಕ್ಕಿ, ನಿರುದ್ಯೋಗ ಭತ್ಯೆ ನೀಡಿದ್ದೇವೆ. ಆ ಮೂಲಕ ಬಸವಣ್ಣನವರ ಮಾರ್ಗದರ್ಶನದಂತೆ ನುಡಿದಂತೆ ನಡೆದಿದ್ದೇವೆ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ" ಎಂದು ಹೇಳಿದರು.

ಕೊಲ್ಹಾರ ಪಟ್ಟಣದ ಅಭಿವೃದ್ಧಿಗೆ ₹50 ಕೋಟಿ!

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆ. ಸಚಿವರು ಹಾಗೂ ಸ್ಥಳೀಯ ಶಾಸಕರಾದ ಶ್ರೀ ಶಿವಾನಂದ ಪಾಟೀಲ್ ಅವರು ಸೇರಿದಂತೆ ಇನ್ನಿತರೆ ಸಚಿವರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.… pic.twitter.com/DxCkNpucOF

— DK Shivakumar (@DKShivakumar) May 23, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X