Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಶಿಷ್ಟ ಪಂಗಡಕ್ಕೆ ಅಂಬಿಗ ಸಮುದಾಯ; ...

ಪರಿಶಿಷ್ಟ ಪಂಗಡಕ್ಕೆ ಅಂಬಿಗ ಸಮುದಾಯ; ಶೀಘ್ರದಲ್ಲಿಯೇ ಕೇಂದ್ರಕ್ಕೆ ಸ್ಪಷ್ಟೀಕರಣ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 Jan 2024 8:09 PM IST
share
ಪರಿಶಿಷ್ಟ ಪಂಗಡಕ್ಕೆ ಅಂಬಿಗ ಸಮುದಾಯ;  ಶೀಘ್ರದಲ್ಲಿಯೇ ಕೇಂದ್ರಕ್ಕೆ ಸ್ಪಷ್ಟೀಕರಣ ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ

ಹಾವೇರಿ: ಅಂಬಿಗ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರಕಾರವೂ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. ಅಲ್ಲದೆ, ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಪರಿಶೀಲಿಸಿ ಸ್ಪಷ್ಟೀಕರಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು, 1996-97ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಈ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದ ಶ್ರಮವನ್ನು ಮರೆಯಬಾರದು ಎಂದರು.

ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ ಮಾಡಿದ್ದರ ವಿರುದ್ಧ ಬಸವಾದಿ ಶರಣರು ಹೋರಾಟ ಮಾಡಿದರು ಎಂದು ಅವರು ಹೇಳಿದರು.

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಹಿಂದೆ ನಮ್ಮ ಅವಧಿಯಲ್ಲಿಯೇ ಮಾಡಲಾಯಿತು. ಆರ್ಥಿಕ ಶಕ್ತಿ ಇಲ್ಲದ ಸಮಾಜ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಸಮಸಮಾಜದ ಕನಸು ನನಸಾಗಲು ಆರ್ಥಿಕ, ಸಾಮಾಜಿಕ ಶಕ್ತಿ ಪ್ರತಿಯೊಬ್ಬರೂ ಬರಬೇಕು. ಬಸವಾದಿ ಶರಣರು ಕಾಯಕ ಮತ್ತು ದಾಸೋಹ ಎಂಬ ಎರಡು ತತ್ವಗಳನ್ನು ನೀಡಿದ್ದಾರೆ.

ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಕಾಯಕದಲ್ಲಿ ಎಲ್ಲರೂ ತೊಡಗಿ ಉತ್ಪಾದನೆಯನ್ನು ಎಲ್ಲರೂ ಹಂಚಿಕೊಳ್ಳಬೇಕು ಎನ್ನುವುದು ಇದರ ಅರ್ಥ. ಇನ್ನೂಬ್ಬರ ಗಳಿಕೆಯನ್ನು ಕುಳಿತು ಅನುಭವಿಸಬಾರದು. ಜಾತಿ ವ್ಯವಸ್ಥೆ ಗೆ ಚಾಲನೆ ಇಲ್ಲದಿರುವುದು ಆರ್ಥಿಕ, ಸಾಮಾಜಿಕ ಚಟುವಟಿಕೆ ಇಲ್ಲದಿರುವುದರಿಂದ. ಇದಕ್ಕೆ ಚಾಲನೆ ನೀಡಬೇಕೆಂದು ಬಸವಾದಿ ಶರಣರು ಹೇಳಿದ್ದರು ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X