ಕುವೈತ್ ನ ಅಮೀರ್ ಶೇಖ್ ನವಾಫ್ ನಿಧನ ಹಿನ್ನೆಲೆ: ಇಂದು ರಾಜ್ಯದಲ್ಲಿ ಶೋಕಾಚರಣೆ

ಕುವೈತ್ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ (Photo: X/@TRTWorldNow)
ಬೆಂಗಳೂರು, ಡಿ.17: ಕುವೈತ್ ನ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ ಶನಿವಾರ ನಿಧನರಾಗಿದ್ದು, ಅಗಲಿದ ಗಣ್ಯರ ಗೌರವಾರ್ಥ ಡಿ.17(ರವಿವಾರ)ರಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆಗೆ ಭಾರತ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಡಿ.17ರಂದು ಶೋಕಾಚರಣೆ ನಡೆಸಲಾಗುವುದು ಎಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಇಂದು(ಡಿ.17) ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿ(ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ) ಜಯಸುಧಾ ಡಿ. ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Next Story





