ಅನಂತ್ ನಾಗ್ಗೆ ʼದಾದಾಸಾಹೇಬ್ ಫಾಲ್ಕೆ ಪ್ರಶಸ್ತಿʼ : ಸಿಎಂ, ಡಿಸಿಎಂ ಸಹಿತ ಗಣ್ಯರಿಂದ ಅಭಿನಂದನೆ

ಅನಂತನಾಗ್
ಬೆಂಗಳೂರು : ಹಿರಿಯ ಚಿತ್ರನಟ ಅನಂತ್ನಾಗ್ ಅವರು ಪ್ರತಿಷ್ಠಿತ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಹಿತ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಬುಧವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಅನಂತ್ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ’ ಎಂದು ತಿಳಿಸಿದ್ದಾರೆ.
‘ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ ಅನಂತ್ನಾಗ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೌರವ ಕನ್ನಡ ಕಲಾ ಜಗತ್ತಿಗೆ ಸಂದ ಮಹಾನ್ ಮನ್ನಣೆ’ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
‘ಭಾರತೀಯ ಚಿತ್ರರಂಗಕ್ಕೆ ಅನಂತ್ನಾಗ್ ಅವರು ನೀಡಿರುವ ಅಪಾರ ಕೊಡುಗೆಗೆ ಸಂದ ದಾದಾ ಸಾಹೇಬ್ ಫಾಲ್ಕೆ ಗೌರವ ಕನ್ನಡಿಗರೆಲ್ಲರಿಗೂ ಹೆಮ್ಮೆ ತಂದಿದೆ. ಅನಂತ್ ನಾಗ್ ಅವರ ಕಲಾಸೇವೆ ಇನ್ನಷ್ಟು ಕಾಲ ಮುಂದುವರಿಯಲಿ’
-ಡಾ.ಜಿ.ಪರಮೇಶ್ವರ್, ಉಪಮುಖ್ಯಮಂತ್ರಿ
‘ಅನಂತ್ನಾಗ್ ಅವರ ಹಲವು ದಶಕಗಳ ಕಲಾಸೇವೆಗೆ ಸಂದಿರುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ಕನ್ನಡ ಸಿನೆಮಾ ರಂಗದ ಇತರೆ ಕಲಾವಿದರೆಲ್ಲರಿಗೂ ಸ್ಪೂರ್ತಿಯಾಗಲಿ’
-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ
‘ಅನಂತ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರು ಹಾಗೂ ಸಹಜ ಅಭಿನಯ, ಅಭಿವ್ಯಕ್ತಿಗೆ ಮತ್ತೊಂದು ಹೆಸರು. ಭಾರತೀಯ ಚಿತ್ರರಂಗದಲ್ಲಿ ಅಪರೂಪದ ಪ್ರತಿಭೆ. ಅಂತಹ ಸಾಧಕರಿಗೆ ದಾದಾ ಸಾಹೇಬ್ ಫಾಲ್ಕೆ ಗೌರವ ಸಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ವರನಟ ಡಾ.ರಾಜ್ಕುಮಾರ್ ಅವರ ನಂತರ ಕನ್ನಡ ಭುವನೇಶ್ವರಿಯ ಕೀರ್ತಿ ಕಿರೀಟಕ್ಕೆ ಮತ್ತೊಂದು ಗರಿ ಮುಡಿಸಿದ ಹೆಗ್ಗಳಿಕೆ ಅವರದ್ದಾಗಿದೆ. ಮುಂದಿನ ದಿನಗಳಲ್ಲಿ ಅವರಿಂದ ಕನ್ನಡ ಚಿತ್ರರಂಗಕ್ಕೆ, ನಾಡಿಗೆ ಒಳ್ಳೆಯದಾಗಲಿ’
-ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ
‘ತಮ್ಮ ಅದ್ಭುತ ಅಭಿನಯ, ಸರಳತೆ, ಸಹಜ ವ್ಯಕ್ತಿತ್ವ ಹಾಗೂ ಕಲಾ ಪ್ರತಿಭೆಯ ಮೂಲಕ ಹಲವು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ಅನಂತ್ ನಾಗ್ ಅವರು ಸಲ್ಲಿಸಿರುವ ಸೇವೆ ಅನನ್ಯ. ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಅವರ ಸುದೀರ್ಘ ಹಾಗೂ ಸಾರ್ಥಕ ಕಲಾಸೇವೆಗೆ ಸಂದಿರುವ ಸೂಕ್ತ ಗೌರವವಾಗಿದೆ. ಈ ಗೌರವವು ಕೇವಲ ಅನಂತ್ ನಾಗ್ ಅವರಿಗಷ್ಟೇ ಅಲ್ಲ, ಇಡೀ ಕನ್ನಡ ಚಿತ್ರರಂಗಕ್ಕೂ ಮತ್ತು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆ’
-ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಕನ್ನಡ ಚಿತ್ರರಂಗದ ಗರಿಮೆ, ಮೇರು ನಟ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ -2024' ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಅತ್ಯಂತ ಹೆಮ್ಮೆಯ ಮತ್ತು ಸಂತಸದ ಕ್ಷಣ.
— DK Shivakumar (@DKShivakumar) September 16, 2026
ತಮ್ಮ ನೈಜ ನಟನೆ, ಸಂಯಮ ಹಾಗೂ ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಭಾರತೀಯ ಕಲಾರಂಗವನ್ನು ಶ್ರೀಮಂತಗೊಳಿಸಿದ… pic.twitter.com/t4351ZWbXm
2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಅನಂತ್ನಾಗ್ ಅವರಿಗೆ ಅಭಿನಂದನೆಗಳು.
— Siddaramaiah (@siddaramaiah) September 16, 2026
ಅನಂತ್ನಾಗ್ ಅವರ ಹಲವು ದಶಕಗಳ ಕಲಾಸೇವೆಗೆ ಸಂದಿರುವ ಈ ಪ್ರಶಸ್ತಿಯು ಕನ್ನಡ ಸಿನಿಮಾ ರಂಗದ ಇತರೆ ಕಲಾವಿದರೆಲ್ಲರಿಗೂ ಸ್ಪೂರ್ತಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/0YiLChJQZd
Heartiest congratulations to Shri Anant Nag avaru on being conferred the prestigious Dadasaheb Phalke Award 2024.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 16, 2026
A towering presence in Indian cinema, his remarkable body of work and enduring contribution to the world of films have inspired generations of audiences and artists… https://t.co/nh70ekh2IV






