Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಲಾಟೆ ಕೇಸ್‌; ಪ್ರಕರಣದಿಂದ ಪುತ್ರನನ್ನು...

ಗಲಾಟೆ ಕೇಸ್‌; ಪ್ರಕರಣದಿಂದ ಪುತ್ರನನ್ನು ಕೈಬಿಡಲು ಮಾಜಿ ಸಂಸದ‌ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ11 April 2026 9:36 PM IST
share
ಗಲಾಟೆ ಕೇಸ್‌; ಪ್ರಕರಣದಿಂದ ಪುತ್ರನನ್ನು ಕೈಬಿಡಲು ಮಾಜಿ ಸಂಸದ‌ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ

ಬೆಂಗಳೂರು : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರ ಅಶುತೋಷ್‌ ಹೆಗಡೆಗೆ ಗಲಾಟೆ ಪ್ರಕರಣದಿಂದಾಗಿ ಪಾಸ್‌ಪೋರ್ಟ್‌ ಪಡೆಯಲು ಸಮಸ್ಯೆಯಾಗಿದೆ. ಆದ್ದರಿಂದ, ಅವರನ್ನು ಪ್ರಕರಣದಿಂದ ಕೈಬಿಡಬೇಕು ಎಂದು ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಅನಂತಕುಮಾರ್‌ ಹೆಗಡೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ವಿಚಾರಣೆ ನಡೆಸಿತು.

ಅನಂತಕುಮಾರ್‌ ಹೆಗಡೆ ಪರ ವಕೀಲ ಪವನ್‌ಚಂದ್ರ ಶೆಟ್ಟಿ ವಾದ ಮಂಡಿಸಿ, ವಿದೇಶದಿಂದ ಬಂದಿದ್ದ ಪುತ್ರ ಅಶುತೋಷ್‌ ಹೆಗಡೆ ಅವರು ತನ್ನ ಅಜ್ಜಿ ಅವರನ್ನು ನೋಡಲು ಅನಂತಕುಮಾರ್‌ ಜತೆ ಯಲ್ಲಾಪುರಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚತ್ತೀಸಗಢ ರಾಜ್ಯದಲ್ಲಿ ನೋಂದಣಿಯಾಗಿರುವ ಕಾರೊಂದು ಅನಂತಕುಮಾರ್ ಕಾರನ್ನು ಹಿಂದಿಕ್ಕಲು ಪ್ರಯತ್ನಿಸಿತ್ತು. ಒಮ್ಮೆ ಢಿಕ್ಕಿ ಸಹ ಹೊಡೆಯಿತು. ಈ ಹಿನ್ನೆಲೆಯಲ್ಲಿ ಮಾಜಿ ಸಂಸದರ ಚಾಲಕ ಹಾಗೂ ಅಂಗರಕ್ಷಕ ದೂರುದಾರರ ಜತೆ ವಾಗ್ವಾದ ನಡೆಸಿದ್ದರು. ಇದರಲ್ಲಿ ಅನಂತಕುಮಾರ್‌ ಪಾತ್ರವಾಗಲಿ, ಅವರ ಪುತ್ರ ಅಶುತೋಷ್‌ ಪಾತ್ರವಾಗಲಿ ಇಲ್ಲ ಎಂದರು.

ಮುಂದುವರಿದು, ಇನ್ನೋವಾ ಕ್ರಿಸ್ಟಾ ಕಾರ್‌ನ ಹಿಂದಿನ ಸೀಟಿನಲ್ಲಿ ಅಶುತೋಷ್‌ ಕುಳಿತಿದ್ದರು. ಘಟನಾ ಸ್ಥಳಕ್ಕೆ ಅವರು ಬಂದೇ ಇರಲಿಲ್ಲ. ಮಧ್ಯದ ಸೀಟುಗಳನ್ನು ತೆಗೆದರೆ ಮಾತ್ರ ಅದರಿಂದ ಹಿಂದಿನ ಸೀಟಿನಲ್ಲಿರುವವರು ಇಳಿಯಲು ಸಾಧ್ಯ. ಹೀಗಿದ್ದರೂ ತನಿಖೆಯ ಸಂದರ್ಭದಲ್ಲಿ ತನಿಖಾಧಿಕಾರಿಯು ಅಶುತೋಷ್‌ ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆಕ್ಷೇಪಿಸಿದರು.

ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಅನಂತಕುಮಾರ್‌ ಅಥವಾ ಅಶುತೋಷ್‌ ಬಗ್ಗೆ ಒಂದೇ ಒಂದು ಸಾಲಿನ ಉಲ್ಲೇಖವಿಲ್ಲ. ಅಂಗರಕ್ಷಕ ಮತ್ತು ಚಾಕನ ಮೇಲೆ ಆರೋಪ ಮಾಡಲಾಗಿದೆ. ಘಟನೆ ನಡೆದಾಗ ಅನಂತ ಕುಮಾರ್‌ ಮತ್ತು ಅಶುತೋಷ್‌ ಕಾರಿನಿಂದ ಕೆಳಗೆ ಇಳಿದೇ ಇಲ್ಲ. ಅಶುತೋಷ್‌ ವಿರುದ್ಧ ದೂರು, ಎಫ್‌ಐಆರ್‌, ಆರೋಪ ಯಾವುದೂ ಇಲ್ಲ. ಅಶುತೋಷ್‌ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಹಾಲಿ ಪ್ರಕರಣವು ಅವರ ಪಾಸ್‌ಪೋರ್ಟ್‌ ಪಡೆಯುವುದಕ್ಕೆ ಅಡ್ಡಿಯಾಗಿದೆ. ಆದ್ದರಿಂದ, ಅವರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ‌.ಎನ್‌. ಜಗದೀಶ್‌ ವಾದ ಮಂಡಿಸಿ, ಸದ್ಯಕ್ಕೆ ಆರೋಪಪಟ್ಟಿಯ ಪ್ರತಿ ಇಲ್ಲ. ಮುಂದಿನ ವಿಚಾರಣೆ ವೇಳೆಗೆ ನಾಲ್ಕನೇ ಆರೋಪಿ ಅಶುತೋಷ್‌ಗೆ ಸಂಬಂಧಿಸಿದಂತೆ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಅನಂತಕುಮಾರ್‌ ಹೆಗಡೆ, ಅಂಗರಕ್ಷಕ ಮತ್ತು ಕಾರಿನ ಚಾಲಕ ಹಲ್ಲೆ ನಡೆಸುತ್ತಿರುವ ವಿಡಿಯೊ ಇದೆ ಎಂದರು.

ವಾದ ಆಲಿಸಿದ ನ್ಯಾಯಪೀಠ, ಏಪ್ರಿಲ್‌ 16ಕ್ಕೆ ವಿಚಾರಣೆ ಮುಂದೂಡಿತಲ್ಲದೆ, ಅಂದು ಅಶುತೋಷ್‌ ಮನವಿ ಕುರಿತು ಪರಿಗಣಿಸುವುದಾಗಿ ಹೇಳಿತು.

ಪ್ರಕರಣವೇನು?

ತುಮಕೂರಿನಲ್ಲಿ ಮದುವೆಯಲ್ಲಿ ಪಾಲ್ಗೊಂಡು ಕಾರ್‌ನಲ್ಲಿ ಹಳೇ ನಿಜಗಲ್‌ ಬಳಿ ಬರುತಿದ್ದಾಗ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದ ಮತ್ತೊಂದು ಕಾರಿನ ಚಾಲಕ ನಮ್ಮ ಕಾರನ್ನು ನಿಲ್ಲಿಸುವಂತೆ ಹೇಳಿದರು. ಕಾರು ನಿಲುಗಡೆ ಮಾಡುತ್ತಿದ್ದಂತೆಯೇ ಮುಖಕ್ಕೆ ಗುದ್ದಿದರು. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದರು. ಇದರಿಂದ, ನಮ್ಮೊಂದಿಗಿದ್ದ ಸಲ್ಮಾನ್‌ ಖಾನ್‌ ಎಂಬಾತನ ಮೂರು ಹಲ್ಲುಗಳು ಮುರಿದಿವೆ ಎಂದು ಗಾಯಾಳು, ಹಾಲೇನಹಳ್ಳಿಯ ಸೈಫ್‌ ಖಾನ್‌ ದೂರು ನೀಡಿದ್ದರು.

ಅನಂತ್‌ ಕುಮಾರ್‌ ಹೆಗಡೆ ಅವರು ಆ ಕಾರಿನಲ್ಲಿದ್ದರು. ಅವರು ಕರೆದ ತಕ್ಷಣವೇ ಉಳಿದವರು ಬಂದು ನಮ್ಮ ಮೇಲೆ ಹಲ್ಲೆ ಮಾಡಿದರು. ನಮ್ಮ ತಾಯಿ ಮೇಲೆ ಅನಂತ್‌ ಕುಮಾರ್‌ ಹಲ್ಲೆ ನಡೆಸಿದರು. ಭದ್ರತಾ ಸಿಬ್ಬಂದಿ ಪಿಸ್ತೂಲ್‌ ತೋರಿಸಿ ಜೀವ ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ಆರೋಪಿಸಿದ್ದರು. ದೂರು ಆಧರಿಸಿ ದಾಬಸ್‌‌ಪೇಟೆ ಠಾಣೆ ಪೊಲೀಸರು ಅನಂತ್‌ ಕುಮಾರ್‌ ಹೆಗಡೆ, ಅವರ ಭದ್ರತಾ ಸಿಬ್ಬಂದಿ ಶ್ರೀಧರ್‌ ಹಾಗೂ ಕಾರು ಚಾಲಕ ಮಹೇಶ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Tags

Ananth Kumar HegdeHigh Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X