Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅನಂತಕುಮಾರ್ ಹೆಗಡೆ ಹೇಳಿಕೆಯು ಬಿಜೆಪಿಯ...

ಅನಂತಕುಮಾರ್ ಹೆಗಡೆ ಹೇಳಿಕೆಯು ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ : ಸಿಎಂ ಸಿದ್ದರಾಮಯ್ಯ

ʼಸಂವಿಧಾನ ತಿದ್ದುಪಡಿʼ ಮಾಡಲು ಬಿಜೆಪಿ 400ಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದಿದ್ದ ಸಂಸದ

ವಾರ್ತಾಭಾರತಿವಾರ್ತಾಭಾರತಿ10 March 2024 9:32 PM IST
share
ಅನಂತಕುಮಾರ್ ಹೆಗಡೆ ಹೇಳಿಕೆಯು ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಸಂವಿಧಾನವನ್ನು ತಿದ್ದುಪಡಿ ಮಾಡಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು’ ಎಂದು ಸಂಸದ ಅನಂತ್‍ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ, ಅದು ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರವಿವಾರ ಈ ಸಂಬಂಧ ಮಾಧ್ಯಮ ಪ್ರಕಟನೆ ನೀಡಿರುವ ಸಿದ್ದರಾಮಯ್ಯ, ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂ ಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಅಂಬೇಡ್ಕರ್ ರಚಿಸಿದ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆ ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. ‘ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ’ ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟವಾದಂತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ: ‘ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಕೂಡಲೇ ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು’

ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X