Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜ.29ರಿಂದ ಅನಿಮೇಷನ್, ವಿಷುಯಲ್...

ಜ.29ರಿಂದ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಸಮ್ಮೇಳನ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ23 Jan 2024 10:22 PM IST
share
ಜ.29ರಿಂದ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಸಮ್ಮೇಳನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜ.29 ರಿಂದ ಮೂರು ದಿನಗಳ ಕಾಲ ಗೇಮಿಂಗ್‌ ಮತ್ತು ಅನಿಮೇಷನ್ (ಜಿಎಎಫ್‌ಎಕ್ಸ್‌) ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ 10 ರಾಷ್ಟ್ರಗಳಿಂದ 132 ಅಂತಾರಾಷ್ಟ್ರೀಯ ಭಾಷಣಕಾರರು ಭಾಗಿಯಾಗಲಿದ್ದಾರೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಮ್ಮೇಳನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಜ.29ರಿಂದ 31ರವರೆಗೆ ಅನಿಮೇಷನ್‌, ವಿಷುವಲ್‌ ಎಫೆಕ್ಟ್ಸ್‌ ಮತ್ತು ಗೇಮಿಂಗ್‌ ಸಮ್ಮೇಳನ ‘ಜಿಎಎಫ್‌ಎಕ್ಸ್–2024’ ಹಮ್ಮಿಕೊಳ್ಳಲಾಗಿದೆ’ ಎಂದರು.

ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ 115 ಗೋಷ್ಠಿಗಳು, 22 ಅಂತಾರಾಷ್ಟ್ರೀಯ ಭಾಷಣಗಾರರ ಸಹಿತ 130 ಭಾಷಣಗಾರರು, 10 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಅಂತಾರಾಷ್ಟ್ರೀಯ ಮತ್ತು ಭಾರತೀಯ ಸ್ಟುಡಿಯೋಗಳ ಮಳಿಗೆಗಳು ಇರಲಿವೆ. ಸಾಧಕರು, ವಿಮರ್ಶಕರು ತಮ್ಮ ಸಾಧನೆಗಳನ್ನು ಪ್ರದರ್ಶಿಸಲಿದ್ದಾರೆ. ಗುಂಪು ಚರ್ಚೆಗಳು, ಪ್ರದರ್ಶನಗಳು, ನೀತಿ ಸಂಬಂಧಿಸಿದ ಚರ್ಚೆಗಳು ಇರಲಿವೆ ಎಂದು ಅವರು ವಿವರಿಸಿದರು.

2012ರಲ್ಲಿ ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ (ಎವಿಜಿಸಿ) ನೀತಿಯನ್ನು ಮೊದಲ ಬಾರಿ ರೂಪಿಸಿದ ರಾಜ್ಯ ಕರ್ನಾಟಕವಾಗಿದೆ. ಈ ಉದ್ಯಮದಲ್ಲಿ ವಿಶ್ವಮಟ್ಟದಲ್ಲಿ ಪ್ರಸಿದ್ಧವಾದ ಸಮ್ಮೇಳನಗಳಲ್ಲಿ ಜಿಎಎಫ್‌ಎಕ್ಸ್ ಕೂಡಾ ಒಂದಾಗಿದ್ದು, 2016ರಿಂದ ರಾಜ್ಯದಲ್ಲಿ ಈ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ನಡೆದ ಜಿಎಎಫ್‌ಎಕ್ಸ್ ಸಮ್ಮೇಳನದಲ್ಲಿ ಪ್ರತಿದಿನ 4,500 ಜನರು ಭಾಗವಹಿಸಿದ್ದರು. ಈ ಬಾರಿ ಅದಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ. ಜೊತೆಗೆ, ಈ ಉದ್ಯಮದ ವ್ಯಾಪಾರದ ಬೆಳವಣಿಗೆಗೆ ಉತ್ತೇಜನ ಸಿಗುವ ಸಾಧ್ಯತೆಯಿದೆ ಎಂದರು.

ಅಲ್ಲದೆ, ಭಾರತೀಯ ಮಾಧ್ಯಮ ಮತ್ತು ಮನರಂಜನಾ ಉದ್ಯಮದಲ್ಲಿ ಕರ್ನಾಟಕ ಶೇ.20ರಷ್ಟು ಪಾಲು ಹೊಂದಿದೆ. ಅನಿಮೇಷನ್‌, ವಿಷುವಲ್‌ ಎಫೆಕ್ಟ್ಸ್‌ ಮತ್ತು ಗೇಮಿಂಗ್‌ ಸಂಬಂಧಿಸಿದ ಅನೇಕ ಸಂಸ್ಥೆಗಳು ರಾಜ್ಯದಲ್ಲಿವೆ. ಚಾರ್ಲಿ 777 ಮತ್ತು ವಿಕ್ರಾಂತ್ ರೋನಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ‌ವಿಷುಯಲ್ ಎಫೆಕ್ಟ್‌ಗಳ ಅಬ್ಬರವನ್ನು ಗಮನಿಸಬಹುದಾಗಿದೆ ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X