Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅನ್ನಭಾಗ್ಯ ಯೋಜನೆ: ನೇರ ನಗದು...

ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 July 2023 6:22 PM IST
share
ಅನ್ನಭಾಗ್ಯ ಯೋಜನೆ: ನೇರ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು, ಜು.10: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣದ ನೇರ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಸೊಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಫಲಾನುಭವಿಗಳ ಖಾತೆಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ದೊರಕಿತು.

ಬಳಿಕ ಮಾತನಾಡಿದ ಸಿಎಂ, ‘ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿಯಾದ ‘ಡರ್ಟಿ ಪಾಲಿಟಿಕ್ಸ್’ ಮಾಡುತ್ತಿದೆ. ಅವರೇನು ಅಕ್ಕಿಯನ್ನು ಪುಕ್ಕಟ್ಟೆ ಕೊಡುತ್ತಿರಲಿಲ್ಲ. ಕೆಜಿಗೆ 34 ರೂ.ನಮ್ಮಿಂದ ತೆಗೆದುಕೊಳ್ಳುತ್ತಿದ್ದರು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

'ರಾಜ್ಯದ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಬಳಿಕ ಕೇಂದ್ರ ಸರಕಾರ ಅಕ್ಕಿಯನ್ನು ಇ-ಹರಾಜು ಮೂಲಕ ಮಾರಾಟ ಮಾಡಲು ಪ್ರಯತ್ನಿಸಿತು. ಆದರೆ ಯಾರೊಬ್ಬರೂ ಅಕ್ಕಿ ಖರೀದಿಸಲು ಮುಂದೆ ಬರುತ್ತಿಲ್ಲ' ಎಂದು ಅವರು ಹೇಳಿದರು.

'ಕೇಂದ್ರ ಸರಕಾರದ ಈ ನಡೆಯನ್ನು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕನ್ನಡ ಜನತೆಯ, ಬಡವರ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, 4.42 ಕೋಟಿ ಫಲಾನುಭವಿಗಳಿಗೆ ತಲಾ 170 ರೂ.ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗುತ್ತಿದೆ' ಎಂದರು.

ಅನ್ನಭಾಗ್ಯ ಯೋಜನೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ನೀಡುವುದಾಗಿ ಗ್ಯಾರಂಟಿ ನೀಡಿದ್ದೆವು. ನಮ್ಮ ಗ್ಯಾರಂಟಿಗಳ ಬಗ್ಗೆ ದೇಶಾದ್ಯಂತ ಚರ್ಚೆ ಹಾಗೂ ರಾಜಕೀಯ ನಡೆಯುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ನೀಡಿ ಕೇಂದ್ರ ಸರಕಾರ ಹೃದಯ ಶ್ರೀಮಂತಿಕೆ ಮೆರೆಯಬಹುದಿತ್ತು ಎಂದರು.

200 ಯೂನಿಟ್ ಉಚಿತ, 2 ಸಾವಿರ ಖಚಿತ, 10 ಕೆ.ಜಿ ಅಕ್ಕಿ ನಿಶ್ಚಿತ ಎಂಬುದನ್ನು ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 4-5 ಸಾವಿರ ರೂ.ಗಳಷ್ಟು ನೆರವಾಗಲಿದೆ. ದೇಶದಲ್ಲೆ ಮೊದಲ ಬಾರಿಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನರಿಗೆ ಈ ರೀತಿ ನೆರವು ನೀಡುತ್ತಿದೆ ಎಂದು ಶಿವಕುಮಾರ್ ಹೇಳಿದರು.

‘ಅನ್ನಭಾಗ್ಯ ಯೋಜನೆ’ಯ ಮಾಹಿತಿ ಪತ್ರ ಅನಾವರಣಗೊಳಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ತಲಾ 170 ರೂ.ಗಳಂತೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಬಿ.ಎಸ್.ಸುರೇಶ್, ಝಮೀರ್ ಅಹ್ಮದ್ ಖಾನ್, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್, ಶಾಸಕ ಎನ್.ಎ. ಹಾರಿಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X