Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭೂಸ್ವಾಧೀನ ವಿರೋಧಿ ಹೋರಾಟ: ಪ್ರಕಾಶ್...

ಭೂಸ್ವಾಧೀನ ವಿರೋಧಿ ಹೋರಾಟ: ಪ್ರಕಾಶ್ ರೈಗೆ ಕುಟುಕಿದ ಎಂ ಬಿ ಪಾಟೀಲ್

ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ ಎಂದ ಸಚಿವ

ವಾರ್ತಾಭಾರತಿವಾರ್ತಾಭಾರತಿ8 July 2025 1:50 PM IST
share
ಭೂಸ್ವಾಧೀನ ವಿರೋಧಿ ಹೋರಾಟ: ಪ್ರಕಾಶ್ ರೈಗೆ ಕುಟುಕಿದ ಎಂ ಬಿ ಪಾಟೀಲ್

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕುಟುಕಿದ್ದಾರೆ.

ಮಂಗಳವಾರ ಇಲ್ಲಿನ‌ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1,282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಪಕ್ಕದ ಆಂಧ್ರ ಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಆಂಧ್ರದಲ್ಲಿ ಬೇರೆಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಪ್ರಕಾಶ್ ರೈಗೆ ಇವೆಲ್ಲ ಕಾಣಿಸುತ್ತಿಲ್ಲವೇ?’ ಎಂದು ಪ್ರಶ್ನಿಸಿದರು.

ಇತ್ತ ತಮಿಳುನಾಡಿನ ಹೊಸೂರು ನಮ್ಮಿಂದ ಕೇವಲ 50 ಕಿ.ಮೀ. ದೂರದಲ್ಲಿದೆ. ಅಲ್ಲಿನ ಸರಕಾರ ಈಗ ಆ ಪ್ರದೇಶವನ್ನು ಕೇಂದ್ರೀಕರಿಸಿ ಕೈಗಾರಿಕಾ ಬೆಳವಣಿಗೆಯನ್ನು ವಿಸ್ತರಿಸುತ್ತಿದೆ. ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ನಿರ್ಮಿಸಲು ಮುಂದಾಗಿದೆ. ಇದಕ್ಕೆಲ್ಲ ಅದೂ ಸಹ ಅಗ್ಗದ ದರದಲ್ಲಿ ಭೂಮಿ ಕೊಡುತ್ತಿದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಉದ್ಯಮ ನಡೆಸುತ್ತಿರುವವರಿಗೆ ಬೆಂಗಳೂರು ಬರೀ ಆಶ್ರಯತಾಣವಾಗಿ ಕಾಣುತ್ತಿದೆ. ಆಂಧ್ರದ ಯೋಜನೆ ಗೆದ್ದರೆ, ನಮ್ಮ ರಕ್ಷಣಾ ಮತ್ತು ಏರೋಸ್ಪೇಸ್ ಕಂಪನಿಗಳು ಅಲ್ಲಿಗೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಆಗುವ ನಷ್ಟವನ್ನು ಅಂದಾಜು ಮಾಡಲೂ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಕರ್ನಾಟಕವು ದೇಶದ ರಕ್ಷಣೆ ಮತ್ತು ವೈಮಾಂತರಿಕ್ಷ ವಹಿವಾಟಿನಲ್ಲಿ ಶೇಕಡ 65ರಷ್ಟು ಪಾಲು ಹೊಂದಿದ್ದು, ಈ ವಲಯದಲ್ಲಿನ ನಮ್ಮ ಕಾರ್ಯ ಪರಿಸರವು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿದೆ. ನಮ್ಮಲ್ಲಿ ಈ ವಲಯದ ಎಚ್ಎಎಲ್, ಸ್ಯಾಫ್ರಾನ್, ಬೋಯಿಂಗ್, ಏರ್ ಬಸ್, ಕಾಲಿನ್ಸ್, ಲಾಕ್ ಹೀಡ್ ಮಾರ್ಟಿನ್ ಮುಂತಾದ ದೈತ್ಯ ಕಂಪನಿಗಳಿವೆ. ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣದ ಪಕ್ಕದಲ್ಲೇ ಏರೋಸ್ಪೇಸ್ ಪಾರ್ಕ್ ಇದೆ. ಇದಕ್ಕೆ ಮತ್ತಷ್ಟು ಬಲ ತುಂಬಲೆಂದೇ ಈಗ ಅದರ ಸನಿಹದಲ್ಲೇ ಉದ್ದೇಶಿತ ಪಾರ್ಕ್ ಸ್ಥಾಪಿಸುವ ಚಿಂತನೆ ಇದೆ. ಸಂತ್ರಸ್ತ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆಯ ಪ್ರಕಾರವೇ ನ್ಯಾಯಯುತ ಪರಿಹಾರ ಕೊಡಲಾಗುತ್ತದೆ ಎಂದು ಅವರು ಹೇಳಿದರು.

ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇನೆ. ರೈತ ಮುಖಂಡ ಬಯ್ಯಾರೆಡ್ಡಿ ಅವರೇ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲ ಅರಿಯಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಎಚ್ ಎ ಎಲ್ ಅಧ್ಯಕ್ಷರಾದ ಸುನಿಲ್ ಅವರು ತಮ್ಮನ್ನು ಭೇಟಿ ಮಾಡಿದ್ದು, ಅವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದೇವೆ‌. ಅಗತ್ಯ ಇರುವ ಹೆಚ್ಚುವರಿ ಜಮೀನು ಕೂಡ ನೀಡುವುದಾಗಿ ಹೇಳಲಾಗಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬುಧವಾರ ರಾಜನಾಥ್ ಸಿಂಗ್ ಭೇಟಿ

ಹಿಂದೆ ಕೇಂದ್ರ ಸರಕಾರವು ನಮ್ಮನ್ನು ಕಡೆಗಣಿಸಿ ತಮಿಳುನಾಡು ಮತ್ತು ಉತ್ತರಪ್ರದೇಶಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಈ ಲೋಪವನ್ನು ನಾನು ಹಿಂದೆಯೇ ಕೇಂದ್ರ ಸರಕಾರದ ಗಮನಕ್ಕೆ ತಂದಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು. ಇದನ್ನು ಮನದಟ್ಟು ಮಾಡಿಕೊಡಲೆಂದೇ ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇರಲಿದ್ದಾರೆ ಎಂದು ಎಂ ಬಿ ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ರಕ್ಷಣೆ ಮತ್ತು ವೈಮಾಂತರಿಕ್ಷ ವಲಯದಲ್ಲಿ ನಾವು ದೇಶಕ್ಕೇ ಅಗ್ರಸ್ಥಾನದಲ್ಲಿದ್ದೇವೆ. ಹೀಗಾಗಿ ನಮಗೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಒಂದೊಂದು ಡಿಫೆನ್ಸ್ ಕಾರಿಡಾರ್ ಅಗತ್ಯವಾಗಿ ಬೇಕಾಗಿದೆ. ಬೆಳಗಾವಿಯಲ್ಲಿ ಈಗ ಏಕಸ್ ತರಹದ ದೈತ್ಯ ಕಂಪನಿಗಳಿವೆ. ಬೇರೆ ರಾಜ್ಯದವರಿಗೆ ಡಿಫೆನ್ಸ್ ಕಾರಿಡಾರ್ ಕೊಡುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಸಲ್ಲಬೇಕಾದ್ದು ಸಲ್ಲಲೇಬೇಕು. ಹಿಂದೆ ಮಾಡಿದ ತಪ್ಪು ಕೇಂದ್ರ ಸರಕಾರಕ್ಕೂ ಅರಿವಾಗಿದೆ. ನಮ್ಮ ಹಿಂದಿನ ಭೇಟಿಗಳಲ್ಲಿ ರಾಜನಾಥ್ ಸಿಂಗ್ ಅವರೇ ಇದನ್ನು ಒಪ್ಪಿಕೊಂಡಿದ್ದರು. ಫೆಬ್ರವರಿಯಲ್ಲಿ ಅವರು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬಂದಿದ್ದಾಗಲೂ ಈ ಸಂಗತಿಯನ್ನು ಪ್ರಸ್ತಾಪಿಸಲಾಗಿತ್ತು ಎಂದು ಅವರು ನುಡಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X