Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Monsoon session | ಗದ್ದಲದ ನಡುವೆ...

Monsoon session | ಗದ್ದಲದ ನಡುವೆ ಅಪಾರ್ಟ್‍ಮೆಂಟ್ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ21 Aug 2026 5:38 PM IST
share
Monsoon session | ಗದ್ದಲದ ನಡುವೆ ಅಪಾರ್ಟ್‍ಮೆಂಟ್ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : ನಾಗೇಂದ್ರ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ, ಗದ್ದಲದ ನಡುವೆ ಬಹುನಿರೀಕ್ಷಿತ ‘ಕರ್ನಾಟಕ ಅಪಾರ್ಟ್‍ಮೆಂಟ್(ಮಾಲಕತ್ವ ಮತ್ತು ನಿರ್ವಹಣೆ) ವಿಧೇಯಕ-2026’ಅನ್ನು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು, ಈ ಮೂಲಕ ರಾಜ್ಯದ ಅಪಾರ್ಟ್‍ಮೆಂಟ್ ಮನೆ ಮಾಲಕರ ಹಿತರಕ್ಷಣೆ, ಹಕ್ಕು ರಕ್ಷಣೆಗೆ ಇನ್ನಷ್ಟು ಬಲ ಸಿಕ್ಕಿದೆ.

ಈ ಸಂಬಂಧ ಹಳೆಯ ಕಾಯ್ದೆ ಅನ್ನು 1972ರಲ್ಲಿ ರೂಪಿಸಲಾಗಿತ್ತು. ಆ ಸನ್ನಿವೇಶದಲ್ಲಿ ಅಪಾರ್ಟ್‍ಮೆಂಟ್ ಸಂಸ್ಕೃತಿ ವಿರಳವಾಗಿತ್ತು. 20 ವರ್ಷಗಳಿಂದೀಚೆಗೆ ಅಪಾರ್ಟ್‍ಮೆಂಟ್ ಸಂಸ್ಕೃತಿ ವ್ಯಾಪಕವಾಗಿ ಬೆಳೆದು ಬಂದಿದೆ. ಆದರೆ, ಈಗಿನ ಸನ್ನಿವೇಶಕ್ಕೆ ಅನುಗುಣವಾಗಿ ಕಾನೂನುಗಳಲ್ಲಿ ತಿದ್ದುಪಡಿಯಾಗಿಲ್ಲ. ಪ್ರಸ್ತಾಪಿತ ಹೊಸ ಕಾನೂನು ಅಪಾರ್ಟ್‍ಮೆಂಟ್ ಮನೆ ಮಾಲಕರಿಗೆ ಹೆಚ್ಚಿನ ಅಧಿಕಾರ ನೀಡಲಿದೆ. ಜತೆಗೆ, ಹಳೆಯ ಕಾನೂನಿನಲ್ಲಿನ ಲೋಪದೋಷ, ನ್ಯೂನತೆಗಳನ್ನು ಬದಲಾಯಿಸಲಿದೆ.

ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರು ಗದ್ದಲ ಮುಂದುವರೆಸಿದರು. ಇದರ ನಡುವೆಯೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಅವರು ಕರ್ನಾಟಕ ಅಪಾರ್ಟ್‍ಮೆಂಟ್ (ಮಾಲಕತ್ವ ಮತ್ತು ನಿರ್ವಹಣೆ) ವಿಧೇಯಕ-2026 ಅನ್ನು ಪರ್ಯಾಲೋಚಿಸಬೇಕೆಂದು ಸೂಚಿಸಿದರು.

ಬಳಿಕ ಮಾತನಾಡಿದ ಸಚಿವರು, ಪ್ರಸ್ತಾಪಿತ ಮಸೂದೆಯಲ್ಲಿ ಕಟ್ಟಡದಲ್ಲಿನ ಒಂದು ಅಪಾರ್ಟ್‍ಮೆಂಟ್‍ನ ಮಾಲಕತ್ವ ಸಂಬಂಧಿತ ಕಾನೂನುಗಳನ್ನು ಕ್ರೋಢೀಕರಿಸಲಾಗಿದೆ. ರಾಜ್ಯದಲ್ಲಿನ ಅಪಾರ್ಟ್‍ಮೆಂಟ್‍ಗಳ ನಿರ್ವಹಣೆಗಾಗಿ ಸ್ಪಷ್ಟ ರೂಪುರೇಷೆ ರೂಪಿಸಲಾಗಿದೆ. ಅಪಾರ್ಟ್‍ಮೆಂಟ್ ಮಾಲಕರ ಸಂಘಗಳ ನೋಂದಣಿ ಮತ್ತು ನಿರ್ವಹಣೆ ಗೊಂದಲ ಪರಿಹಾರ, ಅಪಾರ್ಟ್‍ಮೆಂಟ್‍ಗಳಲ್ಲಿನ ಗೃಹ ಖರೀದಿದಾರರ ಸಂಘಕ್ಕೆ ಸಾಮಾನ್ಯ ಪ್ರದೇಶ ಹಸ್ತಾಂತರ, ಬಿಲ್ಡರ್‍ಗಳಿಂದ ಭೂಮಿಯ ಮೇಲಿನ ಹಕ್ಕು ಸಂಘಗಳಿಗೆ ವರ್ಗಾವಣೆ ಮಾಡುವುದು ಹೊಸ ಮಸೂದೆಯ ಉದ್ದೇಶವಾಗಿದೆ.

ಅದೇ ರೀತಿ, ಒಂದು ಕಟ್ಟಡದಲ್ಲಿ ಒಂದು ಪ್ರತ್ಯೇಕ ಅಪಾರ್ಟ್‍ಮೆಂಟ್‍ನ ಮಾಲಕತ್ವ ಮತ್ತು ಅಂತಹ ಅಪಾರ್ಟ್‍ಮೆಂಟ್‍ಗೆ ಸಂಬಂಧಿಸಿದ ಸಾಮಾನ್ಯ ಪ್ರದೇಶಗಳಾದ ಮೆಟ್ಟಿಲು, ಬಾಲ್ಕನಿ, ಲಿಫ್ಟ್, ಟೆರೇಸ್, ಪಾರ್ಕ್, ಪ್ಲೇ ಏರಿಯಾ ಸೇರಿದಂತೆ ಇನ್ನಿತರೆ ಪ್ರದೇಶ ಮತ್ತು ಸೌಲಭ್ಯಗಳಲ್ಲಿ ಅವಿಭಜಿತ ಪಾಲನ್ನು ಹಂಚಲು ಕಾನೂನು ರೂಪಿಸಲಾಗಿದೆ. ಜೊತೆಗೆ ಅಪಾರ್ಟ್‍ಮೆಂಟ್‍ಗಳ ಆಡಳಿತ, ಸಾಮಾನ್ಯ ಪ್ರದೇಶಗಳು ಮತ್ತು ಅಪಾರ್ಟ್‍ಮೆಂಟ್ ಕಟ್ಟಡಗಳ ಸೌಲಭ್ಯಗಳ ಕಾರ್ಯಾಚರಣೆ ಮತ್ತು ಬಳಕೆಗೆ ಒಂದು ಕಾರ್ಯವಿಧಾನವನ್ನು ಒದಗಿಸುವುದು ಈ ಹೊಸ ಪ್ರಸ್ತಾಪಿತ ಮಸೂದೆಯ ಉದ್ದೇಶವಾಗಿದೆ.

ಈ ಮಸೂದೆಯಡಿ ಘೋಷಣಾ ಪತ್ರ ಅದಕ್ಕೆ ಮಾಡಿರುವ ಯಾವುದೇ ತಿದ್ದುಪಡಿ ಸಲ್ಲಿಸಲು ವಿಫಲರಾದರೆ, ಹಂಚಿಕೆದಾರರು ಸಂಘದ ರಚನೆಗೆ ಅನುಕೂಲ ಕಲ್ಪಿಸಲು ವಿಫಲರಾದರೆ, ಅಪಾರ್ಟ್‍ಮೆಂಟ್ ವರ್ಗಾವಣೆ ಪತ್ರ ಬರೆದುಕೊಡಲು ವಿಫಲವಾದರೆ, ಸಕ್ಷಮ ಪ್ರಾಧಿಕಾರದಿಂದ ಅಧಿಭೋಗ ಪ್ರಮಾಣಪತ್ರ ಪಡೆಯದೇ ಅಪಾರ್ಟ್‍ಮೆಂಟ್ ಸ್ವಾಧೀನವನ್ನು ಹಸ್ತಾಂತರಿಸಿದರೆ ಅಂಥವರಿಗೆ ದಂಡ ವಿಧಿಸಲಾಗುವುದು. ಸಕ್ಷಮ ಪ್ರಾಧಿಕಾರ ಪ್ರವರ್ತಕ, ಸಂಘ, ಅಪಾರ್ಟ್‍ಮೆಂಟ್ ಮಾಲಕರಿಗೆ ಗರಿಷ್ಠ 1 ಲಕ್ಷ ರೂ. ದಂಡ ವಿಧಿಸಬಹುದಾಗಿದೆ. ಉಲ್ಲಂಘನೆ ಮುಂದುವರಿಸಿದರೆ ಪ್ರತಿ ದಿನ 1000 ರೂ. ರಿಂದ 20ಸಾವಿರ ರೂ.ವರೆಗೆ ಹೆಚ್ಚುವರಿ ದಂಡ ವಿಧಿಸಬಹುದಾಗಿದೆ ಎಂದು ಅವರು ತಿಳಿಸಿದರು. ಬಳಿಕ ಧ್ವನಿ ಮತದ ಮೂಲಕ ವಿಧೇಯಕ ಅಂಗೀಕರಿಸಲಾಗಿದೆ ಎಂದು ಸಭಾಧ್ಯಕ್ಷರು ಪ್ರಕಟಿಸಿದರು.

ಇದೇ ವೇಳೆ, ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಪರವಾಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಅವರು ಪರ್ಯಾಲೋಕಿಸಬೇಕೆಂದು ಕೋರಿದ 2026ನೆ ಸಾಲಿನ ಕರ್ನಾಟಕ ನಗರ ಪಾಲಿಕೆಗಳ(ತಿದ್ದುಪಡಿ) ವಿಧೇಯಕ ಸಹ ಅಂಗೀಕಾರಗೊಂಡಿತು.

ಇದಕ್ಕೂ ಮುನ್ನ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ರಾಜ್ಯಾದ್ಯಂತ ಸಾವಿರಾರು ಅನಧಿಕೃತ ಬಡಾವಣೆಗಳು ಇವೆ. . ಜನರು ಸಹ ಅಕ್ರಮ ಬಡಾವಣೆ ವಿರುದ್ಧ ಕಾನೂನು ಇದೆ ಎಂದು ಗೊತ್ತಿದ್ದರೂ ಕಾನೂನು ಉಲ್ಲಂಘನೆ ಮಾಡಿ ಅನಧಿಕೃತ ಬಡಾವಣೆ ರಚನೆ ಮಾಡಿದ್ದಾರೆ. 2024ರಲ್ಲಿ ಕಠಿಣ ನಿಲುವು ತಳೆದು ಅನಧಿಕೃತ ಬಡಾವಣೆಗಳಿಗೆ ಸಂಪೂರ್ಣ ವಿರಾಮ ಹಾಕಿದ್ದೇವೆ. ಈ ಹಿಂದೆ ರಚಿಸಲಾದ ಬಡಾವಣೆಗಳಲ್ಲಿನ ನಿವೇಶನ ಮಾಲಕರಿಗೆ ಬಿ ಖಾತೆ ನೀಡಲಾಗಿದೆ. ಲಕ್ಷಾಂತರ ಮನೆ ಮಾಲಕರಿಗೆ ಮಾಲಕತ್ವದ ಗ್ಯಾರಂಟಿ ಕೊಡಬೇಕು ಎಂಬುದು ನಮ್ಮ ಸರಕಾರದ ಸಂಕಲ್ಪವಾಗಿದೆ. ಹೀಗಾಗಿ ಅಂತಹ ನಿವೇಶನಗಳಿಗೆ ಬಿ ಯಿಂದ ಎ ಖಾತೆ ಕೊಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಎ ಖಾತೆ ಕೊಟ್ಟರೆ ಅವರಿಗೆ ನಕ್ಷೆ ಮಂಜೂರು, ಒಸಿ, ಸಿಸಿ ಸಿಗಲಿದೆ. ಆಸ್ತಿ ಸಂಬಂಧ ಪಕ್ಕಾ ದಾಖಲೆಗಳು ಸಿಗುತ್ತವೆ. ಬೆಂಗಳೂರು ನಗರದಲ್ಲಿ ಇದನ್ನು ಈಗಾಗಲೇ ಮಾಡಲಾಗಿದೆ. ಅದನ್ನು ಇದೀಗ ಇತರ ನಗರ ಸಭೆ ವ್ಯಾಪ್ತಿಗೆ ವಿಸ್ತರಿಸಲಾಗುತ್ತಿದೆ. ಈಗಾಗಲೇ ರಸ್ತೆಗಳನ್ನು ಸಾರ್ವಜನಿಕ ರಸ್ತೆ ಎಂದು ಘೋಷಿಸಲು ಅವಕಾಶ ಮಾಡಿಕೊಟ್ಟಿದ್ದೇವೆ. ಈ ವಿಧೇಯಕ ಲಕ್ಷಾಂತರ ನಿವೇಶನ ಮಾಲಕರಿಗೆ ಅನುಕೂಲವಾಗಲಿದೆ ಎಂದರು.

ಸಂಘದ ನೋಂದಣಿ ಕಡ್ಡಾಯ: ಅಪಾರ್ಟ್‍ಮೆಂಟ್ ಸಂಘಗಳ ರಚನೆ, ಮಾಲಕತ್ವದ ಹಕ್ಕು, ಬಿಲ್ಡರ್‌ ಗಳ ಹೊಣೆಗಾರಿಕೆ, ತಿಂಗಳ ನಿರ್ವಹಣಾ ಶುಲ್ಕ ಮುಂತಾದ ವಿಷಯಗಳನ್ನು ಒಳಗೊಂಡಿರುವ ಈ ವಿಧೇಯಕ ಕಾಯ್ದೆಯಾಗಿ ಜಾರಿಗೆ ಬಂದ ಬಳಿಕ, ಹಳೆಯ ಮತ್ತು ಹೊಸ ಎಲ್ಲ ಅಪಾರ್ಟ್‍ಮೆಂಟ್‍ಗಳು ತಮ್ಮ ಸಂಘಗಳನ್ನು ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸುವುದು ಕಡ್ಡಾಯ ಆಗಲಿದೆ.

ಮುನ್ಸಿಪಾಲಿಟಿಗಳ ವಿಧೇಯಕ ಅಂಗೀಕಾರ: ಪ್ರತಿಭಟನೆ ಮಧ್ಯೆ ವಿಧಾನಸಭೆಯಲ್ಲಿ 2026ನೆ ಕರ್ನಾಟಕ ಮುನ್ಸಿಪಾಲಿಟಿಗಳ ತಿದ್ದುಪಡಿ ವಿಧೇಯಕವನ್ನೂ ಅಂಗೀಕರಿಸಲಾಯಿತು. ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಅವರು ವಿಧೇಯಕವನ್ನು ಪರ್ಯಾಲೋಚನೆಗೆ ಮಂಡಿಸಿದರು. ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಡಾವಣೆಗಳಲ್ಲಿನ ರಸ್ತೆಗಳು ಮತ್ತು ಒಳಚರಂಡಿಗಳನ್ನು ಸಾರ್ವಜನಿಕರು ಬಳಸುತ್ತಿದ್ದರೂ, ಅವುಗಳ ಮಾಲಕತ್ವ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿರುತ್ತದೆ. ಜನರ ಆರೋಗ್ಯ ಹಾಗೂ ಅನುಕೂಲದ ದೃಷ್ಟಿಯಿಂದ ಇಂತಹ ರಸ್ತೆಗಳು ಮತ್ತು ಚರಂಡಿಗಳ ದುರಸ್ತಿ ಅಗತ್ಯವೆಂದು ಕಂಡುಬಂದರೆ, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು ಮಧ್ಯಪ್ರವೇಶಿಸಿ ಅವುಗಳನ್ನು ಸರಕಾರದ ವಶಕ್ಕೆ ಪಡೆಯಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ರಸ್ತೆ ಅಥವಾ ಚರಂಡಿಯನ್ನು ಸ್ವಾಧೀನಪಡಿಸಿಕೊಳ್ಳುವ ಮುನ್ನ ಸಾರ್ವಜನಿಕ ಪ್ರಕಟನೆ ಹೊರಡಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಸ್ವಾಧೀನಪಡಿಸಿಕೊಂಡ ರಸ್ತೆ ಅಥವಾ ಚರಂಡಿಗೆ ಪರಿಹಾರ ನೀಡಲು ಅವಕಾಶವಿಲ್ಲ ಎಂದು ಸಚಿವರು ಹೇಳಿದರು. ವಿಧೇಯಕದ ಕುರಿತು ಯಾವುದೇ ಚರ್ಚೆ ನಡೆಯದೆ, ಧ್ವನಿಮತದ ಮೂಲಕ ಅಂಗೀಕಾರಗೊಂಡಿತು.

Tags

Legislative Assembly
share
ವಾರ್ತಾಭಾರತಿ
ವಾರ್ತಾಭಾರತಿ
Next Story
X