‘ಹಜ್ಯಾತ್ರೆ-2026’ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಝುಲ್ಫಿಖಾರ್ ಅಹ್ಮದ್ ಖಾನ್

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: 2026ನೆ ಸಾಲಿನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜು.7ರಿಂದ ಆರಂಭವಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಹಜ್ ಯಾತ್ರೆಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಮುಂಬೈನ ಭಾರತೀಯ ಹಜ್ ಸಮಿತಿಯ ವೆಬ್ಸೈಟ್ https://hajcommittee.gov.in ಅಥವಾ Suvidha App ಮುಖಾಂತರ ಸಲ್ಲಿಸಬಹುದಾಗಿದೆ ಎಂದು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಖಾರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಹಜ್ ಯಾತ್ರೆಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.31 ಎಂದು ನಿಗದಿಪಡಿಸಲಾಗಿದೆ. ಅರ್ಜಿದಾರರ ಪಾಸ್ಪೋರ್ಟ್ನ ಅವಧಿಯು 2026ರ ಡಿ.31ರವರೆಗೆ ಮಾನ್ಯತೆ ಹೊಂದಿರಬೇಕು. ಅರ್ಜಿದಾರರ ಪಾಸ್ಪೋರ್ಟ್ ಅವಧಿಯು ಮುಗಿದಿದ್ದರೆ ನವೀಕರಣ ಮಾಡಿಸಲು ಕ್ರಮ ಕೈಗೊಳ್ಳುವುದು ಅಥವಾ ಹೊಸದಾಗಿ ಪಾಸ್ಪೋರ್ಟ್ ಪಡೆಯಲು ಅರ್ಜಿ ಸಲ್ಲಿಸಿದ್ದಲ್ಲಿ, ರಾಜ್ಯ ಹಜ್ ಸಮಿತಿಯ ಸಹಾಯವನ್ನು ಪಡೆಯಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಅವಶ್ಯವಿದ್ದಲ್ಲಿ ಮೊಬೈಲ್ ಸಂಖ್ಯೆ 78921 89162 ಹಾಗೂ 94835 03132ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ. ಈ ಮಾಹಿತಿಯನ್ನು ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಝ್ ಸಂದರ್ಭದಲ್ಲಿ ಮುಸಲ್ಲಿಗಳಿಗೆ ತಿಳಿಸುವಂತೆ ಮಸೀದಿಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಎಂದು ಝುಲ್ಫಿಖಾರ್ ಅಹ್ಮದ್ ಖಾನ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.





