Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು...

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆಯ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Aug 2025 2:33 PM IST
share
ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆಯ ಶಿಫಾರಸಿನಂತೆ ಸೂಕ್ತ ಕ್ರಮ:  ಸಿಎಂ ಸಿದ್ದರಾಮಯ್ಯ

ಮೈಸೂರು, ಆಗಸ್ಟ್ 09: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.

ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ. ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು ಎಂದರು.

ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ:

ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ?

ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಬಿಜೆಪಿಯವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವುದು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು. ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು.

ಚುನಾವಣೆಗಳಲ್ಲಿ ಕೈವಾಡ

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ, ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಮುಖ್ಯಮಂತ್ರಿಗಳು ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ ಎಂದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X