Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮೀಣ ಪ್ರದೇಶದ 50 ಸರಕಾರಿ...

ಗ್ರಾಮೀಣ ಪ್ರದೇಶದ 50 ಸರಕಾರಿ ಕಾಲೇಜುಗಳಲ್ಲಿ 10 ರೂ.ಕೋಟಿ ವೆಚ್ಚದಲ್ಲಿ ಎಐ ಪ್ರಯೋಗಾಲಯ ಸ್ಥಾಪಿಸಲು ಅನುಮೋದನೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ12 Jun 2026 8:01 PM IST
share
ಗ್ರಾಮೀಣ ಪ್ರದೇಶದ 50 ಸರಕಾರಿ ಕಾಲೇಜುಗಳಲ್ಲಿ 10 ರೂ.ಕೋಟಿ ವೆಚ್ಚದಲ್ಲಿ ಎಐ ಪ್ರಯೋಗಾಲಯ ಸ್ಥಾಪಿಸಲು ಅನುಮೋದನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಶೀಲತೆ ಹೆಚ್ಚಿಸಲು ರಾಜ್ಯದ 2 ಮತ್ತು 3ನೆ ಹಂತದ ನಗರಗಳ 50 ಸರಕಾರಿ ಕಾಲೇಜಗಳಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ(ಎಐ) ಪ್ರಯೋಗಾಲಯಗಳನ್ನು ಸ್ಥಾಪಿಸಲು ರಾಜ್ಯ ಸರಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಇ-ಆಡಳಿತ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ರಾಜ್ಯ ಸರಕಾರದ ಪ್ರಸಕ್ತ ಹಣಕಾಸು ವರ್ಷದ ಬಜೆಟ್‍ನಲ್ಲಿ ಘೋಷಿಸಿದಂತೆ, ಗ್ರಾಮೀಣ ಪ್ರದೇಶದ ಯುವಜನರನ್ನು ಅಗತ್ಯ ಕೌಶಲದ ಜೊತೆ ಉದ್ಯೋಗಶೀಲರನ್ನಾಗಿ ಮಾಡಲು ಕೇಂದ್ರ ಸರಕಾರದ ಎಐ ಮಿಷನ್ ಸಹಭಾಗಿತ್ವದಲ್ಲಿ ‘ಎಐ’ ಪ್ರಯೋಗಾಲಯಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಯ್ಕೆ ಮಾಡಲಾಗುವ ಶಿಕ್ಷಣ ಸಂಸ್ಥೆ, ಕಾಲೇಜ್‍ಗಳಲ್ಲಿ ಆಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡ ಪ್ರಯೋಗಾಲಯಗಳನ್ನು ಸ್ಥಾಪಿಸಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ, ಕೌಶಲ ಅಭಿವೃದ್ಧಿ ಮತ್ತು ಹೊಸ ಆವಿಷ್ಕಾರಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಯುವಜನರು ಇತ್ತೀಚಿನ ತಂತ್ರಜ್ಞಾನಗಳನ್ನು ಕರಗತ ಮಾಡಿಕೊಳ್ಳಲು ಮತ್ತು ಉದ್ಯೋಗಾರ್ಹತೆ ಹೆಚ್ಚಿಸಿಕೊಳ್ಳಲು ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರಕಾರವು ಎಐ ಮಿಷನ್ ಯೋಜನೆಯಡಿ ಪ್ರತಿಯೊಂದು ಪ್ರಯೋಗಾಲಯಕ್ಕೆ 3 ವರ್ಷಗಳ ಅವಧಿಗೆ 68.98 ಲಕ್ಷ ರೂ.ಮೊತ್ತದ ನೆರವು ನೀಡಲಿದೆ. ಈ ಮೊತ್ತವನ್ನು 3 ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದಕ್ಕೆ ಪೂರಕವಾಗಿ ಬಜೆಟ್‍ನಲ್ಲಿ ಘೋಷಿಸಿರುವಂತೆ 10 ಕೋಟಿ ರೂ.ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೊದಲ ವರ್ಷಕ್ಕೆ 6.29 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಕೃತಕ ಬುದ್ಧಿಮತ್ತೆ ದತ್ತಾಂಶ ಪ್ರಯೋಗಾಲಯಗಳನ್ನು ಸ್ಥಾಪಿಸಲು 23 ಶೈಕ್ಷಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಿರುವುದಕ್ಕೂ ಸರಕಾರದ ಅನುಮೋದನೆ ದೊರೆತಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದ್ದಾರೆ.

Tags

AI labsgovernment collegesPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X