Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ರೂಪಾಯಿ ಖರ್ಚಿಗೂ ಅನುಮೋದನೆ...

ಒಂದು ರೂಪಾಯಿ ಖರ್ಚಿಗೂ ಅನುಮೋದನೆ ಕಡ್ಡಾಯ: ಸಚಿವ ಕೃಷ್ಣಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ9 Feb 2024 10:01 PM IST
share
ಒಂದು ರೂಪಾಯಿ ಖರ್ಚಿಗೂ ಅನುಮೋದನೆ ಕಡ್ಡಾಯ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದ ಹಣಕಾಸಿನ ವ್ಯವಸ್ಥೆಯಲ್ಲಿ ಒಂದು ರೂಪಾಯಿ ಖರ್ಚು ಮಾಡುವುದಕ್ಕೂ ವಿಧಾನ ಮಂಡಲದ ಅನುಮೋದನೆ ಕಡ್ಡಾಯವಾಗಿದ್ದು, ಈ ಕುರಿತು ಶಾಸಕರು ಬಜೆಟ್ ಮೇಲೆ ಚರ್ಚೆಯಲ್ಲಿ ಭಾಗವಹಿಸಿ ವಿಷಯಗಳನ್ನು ಪ್ರಸ್ತಾಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಗರದ ರಾಜಭವನ ರಸ್ತೆಯ ಖಾಸಗಿ ಹೋಟೆಲ್‍ನಲ್ಲಿ ಕರ್ನಾಟಕ ವಿಧಾನ ಮಂಡಲ ತರಬೇತಿ ಸಂಸ್ಥೆಯ ವತಿಯಿಂದ ನಡೆದ 16ನೇ ವಿಧಾನ ಸಭೆಯ ಸದಸ್ಯರುಗಳಿಗೆ ಬಜೆಟ್ ಕುರಿತು ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಜನರ ತೆರಿಗೆ ಹಣ ಸದ್ಬಳಕೆಯಾಗಬೇಕು ಎನ್ನುವುದೇ ಅಧಿವೇಶನದ ಉದ್ದೇಶವಾಗಿದೆ ಎಂದರು.

ಶಾಸಕರು ತಮ್ಮ ಕ್ಷೇತ್ರಕ್ಕೆ ಸೀಮಿತವಾಗದೆ, ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ವಿಧಾನಮಂಡಲದಲ್ಲಿ ಮೌಲ್ಯಯುತವಾದ ಚರ್ಚೆಗಳಿಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕ್ಷೇತ್ರದ ಅಭಿವೃದ್ಧಿಗೆ ಮಹತ್ವ ನೀಡಬೇಕು. ಆದರೆ, ತಾವು ಕರ್ನಾಟಕ ವಿಧಾನಸಭಾ ಸದಸ್ಯರೆಂಬುದನ್ನು ಶಾಸಕರು ಮರೆಯಬಾರದು. ವಿಧಾನಮಂಡಲ ಹಾಗೂ ಮುನ್ಸಿಪಾಲಿಟಿ ನಡುವೆ ವ್ಯತ್ಯಾಸವಿದೆ. ಶಾಸಕರು ಸೀಮಿತವಾಗಿ ಯೋಚಿಸಬಾರದು. ವಿಧಾನಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಂತಹ ಹಿರಿಯರು ಮಾತನಾಡುವುದನ್ನು ಗಮಸಿದರೆ ಬಹಳಷ್ಟು ವಿಚಾರಗಳು ತಿಳಿಯುತ್ತವೆ. ಆದರೆ, ಎಲ್ಲದಕ್ಕೂ ಆಸಕ್ತಿ ಮುಖ್ಯ ಎಂದು ಕೃಷ್ಣಭೈರೇಗೌಡ ಹೇಳಿದರು.

ಫೆಬ್ರವರಿಯಲ್ಲಿ ಬಜೆಟ್ ಮಂಡನೆಯಾದಾಗ ಸದಸ್ಯರು ಪೂರ್ತಿಯಾಗಿ ಓದಿಕೊಳ್ಳಲು ಆಗುವುದಿಲ್ಲ ಎಂಬ ಕಾರಣಕ್ಕೆ ಆರಂಭದ ಮೂರು ತಿಂಗಳು ಲೇಖಾನುದಾನ ಪಡೆಯಲಾಗುತ್ತದೆ. ಬಳಿಕ ಜೂನ್ ಅಥವಾ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್‍ಗೆ ಅಂಗೀಕಾರ ಪಡೆಯಲಾಗುತ್ತದೆ. ಶಾಸಕರು ಬಜೆಟ್ ಭಾಷಣದ ಪ್ರತಿಯನ್ನು ಮಾತ್ರ ಓದದೇ ಅದರ ಜೊತೆಗೆ ನೀಡಲಾಗುವ ಆರ್ಥಿಕ ಸಮೀಕ್ಷಾ ವರದಿ ಸೇರಿದಂತೆ ಹೆಚ್ಚುವರಿ ದಾಖಲೆಗಳನ್ನು ಅಧ್ಯಯನ ಮಾಡಬೇಕು. ಆಗ ಮಾತ್ರವೇ ಬಜೆಟ್ ಮೇಲೆ ಅಧಿಕೃತವಾಗಿ ಮಾತನಾಡುವ ಸಾಮಥ್ರ್ಯ ಬರುತ್ತದೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನವನ್ನು ಕೇಳುವುದಕ್ಕಷ್ಟೇ ಸೀಮಿತವಾಗಬಾರದು. ನಾಡಿನ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಚರ್ಚೆಯಲ್ಲಿ ಭಾಗವಹಿಸಬೇಕು. ಆಸಕ್ತಿ ಇರುವವರಿಗೆ ಅವಕಾಶಗಳು ತಾನಾಗೇ ಒಲಿದು ಬರುತ್ತವೆ ಎಂದು ಕೃಷ್ಣಭೈರೇಗೌಡ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X