Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಖಂಡ್ರೆ ಎನ್ನುವ ಬದಲು ಬಾಯಿ ತಪ್ಪಿ ಖರ್ಗೆ...

ಖಂಡ್ರೆ ಎನ್ನುವ ಬದಲು ಬಾಯಿ ತಪ್ಪಿ ಖರ್ಗೆ ಹೆಸರು ಹೇಳಿದ್ದೇನೆ ಎಂದ ಆರಗ ಜ್ಞಾನೇಂದ್ರ

ವಾರ್ತಾಭಾರತಿವಾರ್ತಾಭಾರತಿ4 Aug 2023 4:51 PM IST
share
ಖಂಡ್ರೆ ಎನ್ನುವ ಬದಲು ಬಾಯಿ ತಪ್ಪಿ ಖರ್ಗೆ ಹೆಸರು ಹೇಳಿದ್ದೇನೆ ಎಂದ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ:ನಾನು ಆಡಿದ ಮಾತು ಮತ್ತು ಆಡದ ಮಾತನ್ನು ಸೇರಿಸಿ ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ʼಸಾರ್ವಜನಿಕ ಜೀವನದಲ್ಲಿ ಐದು ಬಾರಿ ಶಾಸಕನಾದವನು ನಾನು.ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಅಪಾರವಾದ ಗೌರವ ನನಗಿದೆ.ಅವರ ಬಗ್ಗೆ ಕೀಳಾಗಿ ಟೀಕೆ ಮಾಡಿಲ್ಲ,ಖಂಡ್ರೆ ಎನ್ನುವ ಬದಲು ಬಾಯಿ ತಪ್ಪಿ ಖರ್ಗೆ ಹೆಸರು ಹೇಳಿದೆ.ನಂತರ ಕ್ಷಮೆಯಾಚಿಸಿದ್ದೇನೆ ಆದರೆ ಕಾಂಗ್ರೆಸ್ ನವರು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಎಳೆತಂದು ಖರ್ಗೆಯವರನ್ನು ಸಣ್ಣವರನ್ನಾಗಿ ಮಾಡಿದ್ದಾರೆʼ ಎಂದು ಹೇಳಿದರು.

ನಾನು ಸಭೆಯಲ್ಲಿ ಮಾತನಾಡುವಾಗ ಮಲ್ಲಿಕಾರ್ಜುನ ಖರ್ಗೆ ಎಂದು ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ,ಆದರೆ ಕಾಂಗ್ರೆಸ್ ಪಕ್ಷದವರು ಇದನ್ನು ರಾಜಕಾರಣದ ಪ್ರಕರಣವನ್ನಾಗಿ ಮಾಡಿ,ಪ್ರಚೋದನೆಯ ಹೇಳಿಕೆ ನೀಡಿದೆ.ನಾನು ಜಾತಿಯ ಬಗ್ಗೆ ನಿಂದನೆ ಮಾಡಿಲ್ಲ,ಮಲೆನಾಡು,ಬಯಲುಸೀಮೆ ಪ್ರದೇಶದ ಸ್ಥಿತಿ ಬಗ್ಗೆ ಮಾತನಾಡಿದೆ.ಆದರೆ ಅರಣ್ಯ ಸಚಿವ ಖಂಡ್ರೆಯವರು ಕಸ್ತೂರಿ ರಂಗನ್ ವರದಿ ಜಾರಿಗೆ ಬದ್ಧ ಎಂದು ಖಾಸಗಿ ಸಂಸ್ಥೆಯೊಂದರ ಸಭೆಯಲ್ಲಿ ಹೇಳಿಕೆ ನೀಡಿದ್ದು ಪತ್ರಿಕೆಗಳಲ್ಲೂ ಸುದ್ಧಿಯಾಗಿದೆ.ಇದರ ಬಗ್ಗೆ ಕಾಂಗ್ರೆಸ್ ಪಕ್ಷದವರ ನಿಲುವೇನು ಸ್ಪಷ್ಟಪಡಿಸಲಿ ಎಂದರು.

ದ್ವಿಮುಖ ನೀತಿ ಹೊಂದಿರುವ ಕಾಂಗ್ರೆಸ್ ಪಕ್ಷದವರಿಗೆ ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಸ್ವಷ್ಟ ನಿಲುವು ಹೇಳಲು ಆಗುತ್ತಿಲ್ಲ,ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋತಿದೆ.ಸೋಲಿನ ಹತಾಶೆಯಿಂದ ಕಾಂಗ್ರೆಸ್ ಮುಖಂಡರು ನನ್ನ ಮೇಲೆ ಜಿದ್ದು ತೀರಿಸುಕೊಳ್ಳುತ್ತಿದ್ದಾರೆ ಎಂದರು.

ಈ ಗೋಷ್ಟಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ನಾಯಕ್,ಮುಖಂಡರಾದ ಆರ್.ಮದನ್,ಕಾಸರವಳ್ಳಿ ಶ್ರೀನಿವಾಸ್,ನಾಗರಾಜ್ ಶೆಟ್ಟಿ,ಹೆದ್ದೂರು ನವೀನ್,ಸಾಲೇಕೊಪ್ಪ ರಾಮಚಂದ್ರ, ಸಂದೇಶ್ ಜವಳಿ, ಮುಂತಾದವರಿದ್ದರು.

ʼʼನನ್ನನ್ನು ದಲಿತ ವಿರೋಧಿ ಎಂದು ಬಿಂಬಿಸಲಾಗುತ್ತಿದೆ.ನನ್ನ ಮೇಲೆ ತೀರ್ಥಹಳ್ಳಿಯ ದಲಿತ ಮುಖಂಡರೊಬ್ಬರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಪ.ಜಾತಿ ಮತ್ತು ಪ.ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಅನುದಾನದಲ್ಲಿ ರೂ.೧೧,೦೦೦ಕೋಟಿ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದೆ.ಇದಕ್ಕೆ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು ಉತ್ತರಿಸಲಿ.ಇದು ದಲಿತ ವಿರೋಧಿತನವಲ್ಲವೇ..?ʼʼ

-ಆರಗ ಜ್ಞಾನೇಂದ್ರ, ಮಾಜಿ ಗೃಹ ಸಚಿವ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X