Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 30 ವರ್ಷ‌ ಹಳೆಯ ಪ್ರಕರಣಗಳಲ್ಲಿ ಹಿಂದೂ...

30 ವರ್ಷ‌ ಹಳೆಯ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಬಿಜೆಪಿಯಿಂದ ತೀವ್ರ ಹೋರಾಟ: ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ1 Jan 2024 6:21 PM IST
share
30 ವರ್ಷ‌ ಹಳೆಯ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರ ಬಂಧನ, ಬಿಜೆಪಿಯಿಂದ ತೀವ್ರ ಹೋರಾಟ:  ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಬಂಧಿಸುತ್ತಿದ್ದು, ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ಕಚೇರಿ ಪೂಜೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ. ಹಿಂದೆ ಸಿದ್ದರಾಮಯ್ಯ ಅವರ ಸರಕಾರದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾಗಿತ್ತು. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗುತ್ತಿರುವ ಐತಿಹಾಸಿಕ ಕ್ಷಣಕ್ಕೆ ಜನರು ಕಾಯುತ್ತಿದ್ದು, ಕಾಂಗ್ರೆಸ್ ಮಾತ್ರ ಇದನ್ನು ಭಯವೆಂಬಂತೆ ಬಿಂಬಿಸುತ್ತಿದೆ ಎಂದರು.

ಇದೇ ವೇಳೆ ಹುಬ್ಬಳ್ಳಿಯಿಂದ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಇಬ್ಬರನ್ನು 30 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಜೈಲಿಗೆ ಕಳುಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಉದ್ಘಾಟನೆಯ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಸಂದರ್ಭದಲ್ಲಿ ಇಂತಹ ಕ್ರಮವನ್ನು ಸರಕಾರ ಕೈಗೊಂಡಿದೆ. ನಾನು ಕೂಡ ಆಗ ಹೋರಾಟದಲ್ಲಿ ಭಾಗವಹಿಸಿದ್ದು, ನನ್ನನ್ನೂ ಬಂಧಿಸುತ್ತೀರಾ? ಅಷ್ಟು ಧೈರ್ಯ ಇದೆಯಾ? ಎಂದು ಪ್ರಶ್ನಿಸಿದರು.

ಕಾರ್ಯಕರ್ತರ ಮೇಲೆ ಹಾಕಿದ ಕೇಸ್ ವಾಪಸ್ ಪಡೆಯಬೇಕು. ಹಳೆಯ ಪ್ರಕರಣ ಹೊರತೆಗೆದು ಬಂಧಿಸಲು ಪೊಲೀಸ್ ಇಲಾಖೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ. ಇಂತಹ ದ್ವೇಷ ರಾಜಕಾರಣದ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗುವುದು‌ ಎಂದು ಎಚ್ಚರಿಕೆ ನೀಡಿದರು‌.

ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಕಾಂಗ್ರೆಸ್ ನ ಶಾಸಕರೇ ಹೇಳಿದ್ದಾರೆ. ಶಾಸಕರು ಕ್ಷೇತ್ರಕ್ಕೆ ಹೋದರೆ ಜನರು ಬಯ್ಯುತ್ತಿದ್ದಾರೆ. ಹೀಗಾಗಿ ಸರಕಾರದಲ್ಲಿ ಭಿನ್ನಾಭಿಪ್ರಾಯ, ಒಡಕು ಬಂದಿದೆ. ಮುಖ್ಯಮಂತ್ರಿಯವರ ಬದಲಾವಣೆಯೂ ಆಗಬಹುದು. ಡಿ.ಕೆ.ಶಿವಕುಮಾರ್ ಅವರೇ ಸಿಎಂ ಬದಲಾವಣೆಯ ಸುಳಿವು ನೀಡಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ದೊಡ್ಡ ಬದಲಾವಣೆಗಳನ್ನು ಜನರು ನಿರೀಕ್ಷೆ ಮಾಡಬಹುದು‌ ಎಂದರು‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X