Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶ್ರೀಕಾಂತ ಪೂಜಾರಿ ಬಂಧನ: ಪ್ರತೀಕಾರವೂ...

ಶ್ರೀಕಾಂತ ಪೂಜಾರಿ ಬಂಧನ: ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ, ಕಾನೂನು ಪಾಲನೆ ಅಷ್ಟೇ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ3 Jan 2024 6:12 PM IST
share
ಶ್ರೀಕಾಂತ ಪೂಜಾರಿ ಬಂಧನ: ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ, ಕಾನೂನು ಪಾಲನೆ ಅಷ್ಟೇ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ರಾಮಭಕ್ತ, ಕರಸೇವಕ’ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮ ರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಎಕ್ಸ್ ನಲ್ಲಿ ಶ್ರೀಕಾಂತ ಪೂಜಾರಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ಪಟ್ಟಿಯೊಂದಿಗೆ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ‘ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ’ ಎಂದು ಆಗ್ರಹಿಸಿದ್ದಾರೆ.

‘ಕಳೆದ 2023ನೆ ಸಾಲಿನಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್‍ಪಿಸಿ( ಕಾನೂನು ವಿಚಾರಣಾ ಪ್ರಮಾಣಪತ್ರ)ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರಕಾರದ ವಿರುದ್ಧವಲ್ಲ.‌ ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ’ ಎಂದು ಅವರು ತಿಳಿಸಿದ್ದಾರೆ.

‘ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ?. ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೇ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ’ ಎಂದು ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X