Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಶಾ ಕಾರ್ಯಕರ್ತೆಯರಿಗೆ 10 ಸಾವಿರ...

ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ.ಮಾಸಿಕ ಗೌರವಧನ

ಸಿಎಂ ಸಂಧಾನ ಯಶಸ್ವಿ: ನಾಲ್ಕು ದಿನಗಳ ಅನಿರ್ದಿಷ್ಟಾವಧಿ ಹೋರಾಟ ಅಂತ್ಯ

ವಾರ್ತಾಭಾರತಿವಾರ್ತಾಭಾರತಿ10 Jan 2025 6:19 PM IST
share
ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ.ಮಾಸಿಕ ಗೌರವಧನ

ಬೆಂಗಳೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ದಿನಗಳಿಂದ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟವು, ಬುಧವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಧ್ಯಪ್ರವೇಶದೊಂದಿಗೆ ಯಶಸ್ವಿಯಾಗಿ ಅಂತ್ಯಕಂಡಿದೆ.

ಜ.7ರಿಂದ ಕೊರೆಯುವ ಚಳಿಯನ್ನು ಲೆಕ್ಕಿಸದೆ ನಿಶ್ಚಿತ ಗೌರವಧನವನ್ನು 15ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ 10ಸಾವಿರ ರೂ.ಮಾಸಿಕ ಗೌರವಧನ ನಿಗದಿ ಮಾಡಿದ್ದು, ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ.

ಮಾಸಿಕ 10 ಸಾವಿರ ರೂ.ನಿಶ್ಚಿತ ಗೌರವಧನದ ಜೊತೆಗೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹಧನ ದೊರೆಯುವ ಖಾತ್ರಿ, ನಿವೃತ್ತಿ ಪರಿಹಾರ ನೀಡುವ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ 3 ತಿಂಗಳ ವೇತನ ಸಹಿತ ರಜೆ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಜರುಗಿದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜೊತೆಗೆ, 2025-26ನೆ ಸಾಲಿನ ಬಜೆಟ್‍ನಲ್ಲಿಯೂ ಸಾಧ್ಯವಾದಷ್ಟು ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಲಾಗುವುದು. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಬಜೆಟ್ ಪೂರ್ವಭಾವಿ ಸಭೆಗೆ ಸಂಘವನ್ನು ಆಹ್ವಾನಿಸಲಾಗುವುದು. ಉಳಿದ ಬೇಡಿಕೆಗಳನ್ನು ಇಲಾಖೆಯ ಮಟ್ಟದಲ್ಲಿ ಬಗೆಹರಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ.

ಕೃಷ್ಣಾದಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಶಾ ಸಂಘದ ಮುಖಂಡರಾದ ಕೆ.ಸೋಮಶೇಖರ್ ಯಾದಗಿರಿ, ಡಿ.ನಾಗಲಕ್ಷ್ಮಿ ಮತ್ತು ಶಿಕ್ಷಣ ತಜ್ಞ ಪ್ರೊ.ವಿ.ಪಿ.ನಿರಂಜನಾರಾಧ್ಯ, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಇದ್ದರು.

‘ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ.ಮಾಸಿಕ ಗೌರವಧನ ಮತ್ತು ಸಹಾಯಧನವನ್ನು ನೀಡುವುದಕ್ಕೆ ಸರಕಾರ ಒಪ್ಪಿದೆ. ರಜೆ ಮಾಡಿದರೂ ನಿಗದಿತ ಗೌರವಧನವನ್ನು ನೀಡಲು ನಿರ್ಧರಿಸಿದೆ. ಅಲ್ಲದೆ, ಆಶಾ ಕಾರ್ಯಕರ್ತೆಯನ್ನು ಹೆಚ್ಚಿನ ಕೆಲಸವನ್ನು ನಿರ್ವಹಿಸಿದ್ದಲ್ಲಿ 13ಸಾವಿರ ರೂ.ಗಳ ವರೆಗೆ ಮಾಸಿಕ ಹಣವನ್ನು ಪಡೆಯಬಹುದಾಗಿದೆ. ಬಜೆಟ್‍ನಲ್ಲಿಯೂ ಗೌರವಧನ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಹೀಗಾಗಿ ಇವತ್ತಿನ ಸಭೆಯ ನಿರ್ಧಾರ ಆಶಾ ಕಾರ್ಯಕರ್ತೆಯರಿಗೆ ಸಂತಸ ತಂದಿದೆ. ನಿವೃತ್ತಿಗೆ ಸಂಬಂಧಿಸಿ ಮುಂದಿನ ಸಭೆಯಲ್ಲಿ ಕ್ರಮ ವಹಿಸಬೇಕು. ಹಾಗೆಯೇ ತಿಂಗಳಿಗೆ ರಜೆ ನೀಡುವ ಬಗ್ಗೆ ಮಾರ್ಗಸೂಚಿ ಮಾಡಬೇಕು’

-ನಾಗಲಕ್ಷ್ಮೀ, ರಾಜ್ಯ ಕಾರ್ಯದರ್ಶಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ

‘ಆಶಾ ಕಾರ್ಯಕರ್ತರೊಂದಿಗೆ ಸಂಧಾನ ಸಭೆ ನಡೆಸಲಾಗಿದ್ದು, ಈ ಹಿಂದೆ ಮಾಸಿಕ 8ಸಾವಿರ ರೂ.ಗೌರವಧನ ನೀಡಲಾಗುತ್ತಿದ್ದು, ಇದೀಗ ಪ್ರೋತ್ಸಾಹಧನ ಸೇರಿದಂತೆ ಪ್ರತಿ ತಿಂಗಳು 10ಸಾವಿರ ರೂ.ಗಳ ಗೌರವಧನ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಆಶಾಗಳು ಮುಷ್ಕರ ಕೈಬಿಡಲು ಸಮ್ಮತಿಸಿದ್ದಾರೆ. ಈ ಮೊತ್ತವನ್ನು ನೀಡಲು, ಸರಕಾರದ ಆರ್ಥಿಕ ಸ್ಥಿತಿ ಸದೃಢವಾಗಿದೆ’

-ಮುಖ್ಯಮಂತ್ರಿ ಸಿದ್ದರಾಮಯ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X