Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ...

ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಸಚಿವ ಯು.ಟಿ.ಖಾದರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ27 Nov 2026 8:33 PM IST
share
ಆಶಾ ಕಾರ್ಯಕರ್ತೆಯರ ಸೇವೆ ಕಡೆಗಣಿಸುವ ಉದ್ದೇಶವಿಲ್ಲ: ಸಚಿವ ಯು.ಟಿ.ಖಾದರ್ ಸ್ಪಷ್ಟನೆ

ಶಿವಮೊಗ್ಗ : ‘ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ಆರೋಗ್ಯ ವ್ಯವಸ್ಥೆ ನಡೆಯುತ್ತದೆ’ ಎಂಬ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಆರೋಗ್ಯ ಸಚಿವ ಯು.ಟಿ.ಖಾದರ್ ಸ್ಪಷ್ಟನೆ ನೀಡಿದ್ದು, ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಸೇವೆಯನ್ನು ಕಡೆಗಣಿಸುವ ಉದ್ದೇಶ ತಮ್ಮ ಹೇಳಿಕೆಯಲ್ಲಿ ಇರಲಿಲ್ಲ. ಅವರು ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಅಡಿಯಲ್ಲಿ ನೇಮಕಗೊಂಡಿದ್ದು, ಆರಂಭದಲ್ಲಿ ಅತ್ಯಲ್ಪಪ್ರೋತ್ಸಾಹಧನ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ 2014ರಲ್ಲಿ ತಾನು ಆರೋಗ್ಯ ಸಚಿವರಾಗಿದ್ದಾಗ ಕೇಂದ್ರ ಸರಕಾರ ನೀಡುವ ಅನುದಾನಕ್ಕೆ ಸಮನಾಗಿ ರಾಜ್ಯ ಸರಕಾರವೂ ಮ್ಯಾಚಿಂಗ್ ಗ್ರಾಂಟ್ ನೀಡುವ ನಿರ್ಧಾರ ಕೈಗೊಂಡಿತ್ತು ಎಂದರು.

ಆನಂತರದ ದಿನಗಳಲ್ಲಿ ಕೇಂದ್ರ ಸರಕಾರದ ಅನುದಾನ ಕಡಿಮೆಯಾದ ಸಂದರ್ಭದಲ್ಲಿ ರಾಜ್ಯ ಸರಕಾರವೇ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವು ನೀಡುವ ಜವಾಬ್ದಾರಿ ವಹಿಸಿಕೊಂಡಿದೆ. ಪ್ರಸಕ್ತ ಕನಿಷ್ಠ 8 ಸಾವಿರ ರೂ. ಪ್ರೋತ್ಸಾಹಧನ ದೊರೆಯುತ್ತಿದ್ದು, ಕೆಲಸದ ಪ್ರಮಾಣ ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಿಕೆಗೆ ಅನುಗುಣವಾಗಿ 13ರಿಂದ 16 ಸಾವಿರ ರೂ.ವರೆಗೆ ಪಡೆಯುವ ಕಾರ್ಯಕರ್ತೆಯರೂ ಇದ್ದಾರೆ ಎಂದು ವಿವರಿಸಿದರು.

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸರಕಾರಕ್ಕೆ ಸಹಾನುಭೂತಿ ಇದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯ ನಡುವೆಯೂ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಕೇಂದ್ರ ಸರಕಾರ ಭರವಸೆ ನೀಡಿದ್ದ ಹೆಚ್ಚುವರಿ 1,500 ರೂ.ಯನ್ನೂ ಇದುವರೆಗೆ ನೀಡಿಲ್ಲ ಎಂಬ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ. ಆಶಾ ಕಾರ್ಯಕರ್ತೆಯರ ಬಗ್ಗೆ ಸರಕಾರಕ್ಕೆ ಕಾಳಜಿ ಇದ್ದು, ಈ ಸಂಬಂಧ ಆರ್ಥಿಕ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿಧಾನಮಂಡಲದ ಅಧಿವೇಶನ ಮುಕ್ತಾಯದ ವೇಳೆಗೆ ಸಿಹಿ ಸುದ್ದಿ ನೀಡುವ ಪ್ರಯತ್ನ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ ಎಂದು ಸಚಿವರು ಹೇಳಿದರು.

ಆಶಾ ಕಾರ್ಯಕರ್ತೆಯರು ಸರಕಾರ, ಮುಖ್ಯಮಂತ್ರಿ ಹಾಗೂ ಆರೋಗ್ಯ ಇಲಾಖೆಯ ಮೇಲೆ ವಿಶ್ವಾಸವಿಟ್ಟು ತಮ್ಮ ಕರ್ತವ್ಯಕ್ಕೆ ಮರಳಬೇಕು ಎಂದು ಮನವಿ ಮಾಡಿರುವ ಸಚಿವ ಖಾದರ್, ಅವರ ಹಿತಾಸಕ್ತಿಯನ್ನು ಕಾಪಾಡಲು ಸರಕಾರ ಬದ್ಧವಾಗಿದೆ ಎಂದು ಪುನರುಚ್ಛರಿಸಿದರು.

Tags

ASHA WorkersMinister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X