Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂದುವರೆದ ಆಶಾ ಕಾರ್ಯಕರ್ತೆಯರ...

ಮುಂದುವರೆದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಸತ್ಯಾಗ್ರಹ; ನಟಿ ಕಾರುಣ್ಯ ರಾಮ್ ಸೇರಿ ವಿವಿಧ ಸಂಘಟನೆಗಳ ಬೆಂಬಲ

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ22 Nov 2026 11:26 PM IST
share
ಮುಂದುವರೆದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಸತ್ಯಾಗ್ರಹ; ನಟಿ ಕಾರುಣ್ಯ ರಾಮ್ ಸೇರಿ ವಿವಿಧ ಸಂಘಟನೆಗಳ ಬೆಂಬಲ

ಬೆಂಗಳೂರು: ಗೌರವಧನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‍ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದಿದೆ. ರವಿವಾರ ಚಿತ್ರಕಲಾವಿದರು, ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತೆಯರ ಕುಟುಂಬದ ಸದಸ್ಯರು ಸೇರಿದಂತೆ ಹಲವರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಬಿಸಿಲು, ಚಳಿ ಹಾಗೂ ಮೂಲಸೌಕರ್ಯಗಳ ಕೊರತೆಯಿಂದಾಗಿ ಧರಣಿ ಸ್ಥಳದಲ್ಲಿ ಕಾರ್ಯಕರ್ತೆಯರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಜ್ವರ, ರಕ್ತದೊತ್ತಡದಿಂದ ಅಸ್ವಸ್ಥಗೊಂಡ ಹಲವರಿಗೆ ಚಿಕಿತ್ಸೆ ನೀಡಲಾಗಿದ್ದು, ಕೆಲವರನ್ನು ಕೆ.ಸಿ.ಜನರಲ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೌಚಗೃಹಗಳ ಕೊರತೆಯಿಂದ ಮೂತ್ರನಾಳದ ಸೋಂಕು ಕಾಣಿಸಿಕೊಳ್ಳುತ್ತಿದೆ. ಧರಣಿ ಸ್ಥಳಕ್ಕೆ ಬಂದಿರುವ ಮಕ್ಕಳಿಗೂ ಶೀತ, ಜ್ವರ ಕಾಣಿಸಿಕೊಂಡಿದೆ. ಸೇವ್ ಇಂಡಿಯಾ ಫೌಂಡೇಷನ್ ವತಿಯಿಂದ ಆರೋಗ್ಯ ಶಿಬಿರ ತೆರೆಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆಶಾಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ನಟಿ ಕಾರುಣ್ಯ ರಾಮ್, ಆಶಾ ಕಾರ್ಯಕರ್ತೆಯರ ಬೇಡಿಕೆಗಳು ನ್ಯಾಯಯುತವಾಗಿದ್ದು, ರಾಜ್ಯ ಸರಕಾರ ಅವುಗಳನ್ನು ಈಡೇರಿಸಲೇಬೇಕು. ಕೊನೆಯವರೆಗೂ ಹೋರಾಟದೊಂದಿಗೆ ಇರುವುದಾಗಿ ಭರವಸೆ ನೀಡಿದರು.

ಆರ್‍ಟಿಇ ಸಮಿತಿಯ ಸದಸ್ಯ ಯೋಗಾನಂದ ಮಾತನಾಡಿ, ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದ್ದರೂ ಸರಕಾರ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿರುವುದು ಅದರ ನಿರ್ಲಕ್ಷ್ಯವನ್ನು ತೋರಿಸುತ್ತದೆ. ರಾಜಕಾರಣಿಗಳು ಒಂದು ದಿನವಾದರೂ ಆಶಾ ಕಾರ್ಯಕರ್ತೆಯರಿಗೆ ನೀಡುವ ಗೌರವಧನದಲ್ಲಿ ಜೀವನ ನಡೆಸಿ ನೋಡಬೇಕು. ಅವರ ಒಂದು ತಿಂಗಳ ಗೌರವಧನ ರಾಜಕಾರಣಿಗಳ ಒಂದು ದಿನದ ಖರ್ಚಿಗಿಂತಲೂ ಕಡಿಮೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರಿನ ಗಣಿಬಾಧಿತ ಪರಿಸರ ಹಾಗೂ ಜನ ಬದುಕಿನ ಪುನಶ್ಚೇತನ ಹೋರಾಟ ಸಮಿತಿಯ ಹೋರಾಟಗಾರ್ತಿ ಇಂದಿರಮ್ಮ ಮಾತನಾಡಿ, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಶಾಸಕರು ಧ್ವನಿ ಎತ್ತಬೇಕು. ಹಣದ ಕೊರತೆಯ ನೆಪ ಹೇಳುವ ಸರಕಾರ ಶಾಸಕರ ವೇತನ ಹೆಚ್ಚಳದ ವಿಚಾರದಲ್ಲಿ ಮಾತ್ರ ತಕ್ಷಣ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದರು.

ಧರಣಿಯಲ್ಲಿ ಕೆಸ್ಸಾರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಯೂನಿಯನ್ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬರಾವ್, ಹೋರಾಟಗಾರರಾದ ಸೋಮಶೇಖರ್, ನಾಗಲಕ್ಷ್ಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Asha workersKarunya RamprotestBengaluru
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X