Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 10ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಹೋರಾಟ;...

10ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಹೋರಾಟ; ನಾಳೆ ಸಿಎಂ ಜೊತೆ ಮಹತ್ವದ ಸಭೆ

ಫ್ರೀಡಂ ಪಾರ್ಕ್‍ನಲ್ಲಿ 60 ಅಡಿ ಉದ್ದದ ‘ಗುಲಾಬಿ ಯೋಧರು’ ಕಲಾಕೃತಿ ಅನಾವರಣ

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ26 Nov 2026 7:59 PM IST
share
10ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಹೋರಾಟ; ನಾಳೆ ಸಿಎಂ ಜೊತೆ ಮಹತ್ವದ ಸಭೆ

ಬೆಂಗಳೂರು: ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸತತ 10ನೇ ದಿನಕ್ಕೆ ಕಾಲಿಟ್ಟಿದೆ.

ಗುರುವಾರವೂ ರಾಜ್ಯದ ವಿವಿಧ ಭಾಗಗಳಿಂದ ದೊಡ್ಡ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂಪಾರ್ಕ್‍ಗೆ ಆಗಮಿಸಿ ಹೋರಾಟ ಮುಂದುವರಿಸಿದರು. ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ಸೂಚಿಸಿ ಫ್ರೀಡಂಪಾರ್ಕ್‍ನಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ, ಕರ್ನಾಟಕದ ಆಶಾ ಕಾರ್ಯಕರ್ತೆಯರ ಹೋರಾಟ ಕೇವಲ ರಾಜ್ಯಕ್ಕೆ ಸೀಮಿತವಾಗದೆ ಇಡೀ ದೇಶದಲ್ಲೇ ಮಾನ್ಯತೆ ಪಡೆದಿದೆ. ಅವರ ಬೇಡಿಕೆಗಳು ಅತ್ಯಂತ ನ್ಯಾಯಯುತವಾಗಿವೆ ಎಂದರು.

ರಾಜಕೀಯ ಪಕ್ಷಗಳು ಹೋರಾಟದ ಸ್ಥಳಕ್ಕೆ ಬಂದು ಬೆಂಬಲ ಸೂಚಿಸುವುದಕ್ಕಿಂತ ತಮ್ಮ ಪಕ್ಷದ ಮಂತ್ರಿಗಳ ಮೇಲೆ ಒತ್ತಡ ಹೇರುವುದು ಹೆಚ್ಚು ಸೂಕ್ತ ಎಂಬ ಆಶಾ ಕಾರ್ಯಕರ್ತೆಯರ ನಿಲುವು ಸರಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಸ್ಪರ ದೂರುವುದನ್ನು ಬಿಟ್ಟು ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಈ ಹೋರಾಟ ದೇಶದ ಇತಿಹಾಸದಲ್ಲೇ ಅಭೂತಪೂರ್ವ ಹೋರಾಟವಾಗಿದೆ ಎಂದು ಹಿರೇಮಠ ಅಭಿಪ್ರಾಯಪಟ್ಟರು.

ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿ, ರಾಜ್ಯದಲ್ಲಿನ ಯುವಕರು ಹಾಗೂ ಮಹಿಳೆಯರ ಸಮಸ್ಯೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದರ ಜೊತೆಗೆ ಕರ್ನಾಟಕ ಬಂದ್‍ಗೆ ಕರೆ ನೀಡಲಾಗುತ್ತದೆ. ಮಹಿಳೆಯರ ಬೇಡಿಕೆಗಳನ್ನು ನಿರ್ಲಕ್ಷಿಸಬಾರದು. ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಹೋರಾಟಕ್ಕೆ ರಾಜ್ಯದ ವಿವಿಧ ಭಾಗಗಳ ಸಂಘಟನೆಗಳು ಹಾಗೂ ಮುಖಂಡರು ಒಗ್ಗಟ್ಟಿನಿಂದ ಬೆಂಬಲ ನೀಡುತ್ತಿರುವುದು ಸಂತಸದ ಸಂಗತಿ. ಮಾಧ್ಯಮಗಳ ಬೆಂಬಲವೂ ಹೋರಾಟಕ್ಕೆ ಮತ್ತಷ್ಟು ಬಲ ನೀಡಿದೆ. ಮುಖ್ಯಮಂತ್ರಿ ಜಪಾನ್ ಪ್ರವಾಸದಲ್ಲಿದ್ದುಕೊಂಡು ಅಲ್ಲಿನ ಸ್ಪೀಡ್ ರೈಲಿನಲ್ಲಿ ಕುಳಿತು ಉಪದೇಶ ನೀಡುವುದಕ್ಕಿಂತ, ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಮುಖ್ಯ ಎಂದರು.

ಧರಣಿ ಸತ್ಯಾಗ್ರಹದಲ್ಲಿ ಹಿರಿಯ ಸಾಹಿತಿ ಡಾ.ವಿಜಯಮ್ಮ, ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ರಾಜ್ಯ ಉಪಾಧ್ಯಕ್ಷ ಹನುಮೇಶ್ ಜಿ., ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಮೇಟಿ, ಸೇರಿದಂತೆ ಹಲವರು ಭಾಗವಹಿಸಿದ್ದರು.

ಆಶಾ ಹೋರಾಟಕ್ಕೆ ಕಲಾತ್ಮಕ ಅಭಿವ್ಯಕ್ತಿ: 60 ಅಡಿ ಉದ್ದದ ‘ಗುಲಾಬಿ ಯೋಧರು’

ಆಶಾ ಕಾರ್ಯಕರ್ತೆಯರ ಧೈರ್ಯ, ಒಗ್ಗಟ್ಟು ಮತ್ತು ಹಕ್ಕುಗಳ ಹೋರಾಟಕ್ಕೆ ಗೌರವ ಸಲ್ಲಿಸುವ ಉದ್ದೇಶದಿಂದ ಕಲಾವಿದೆ ಅಲಕಾ ರಾವ್ ಅವರ ಸಾರಥ್ಯದಲ್ಲಿ ಫ್ರೀಡಂಪಾರ್ಕ್‍ನಲ್ಲಿ ವಿಶಿಷ್ಟ ಕಲಾಕೃತಿಯೊಂದನ್ನು ರೂಪಿಸಲಾಗಿದೆ. ‘ಗುಲಾಬಿ ಯೋಧರು-ಅಂತ್ಯವಿಲ್ಲದ ಸಮುದ್ರ’ ಎಂಬ ಪರಿಕಲ್ಪನೆಯ ಈ ಕಲಾಕೃತಿಯು ಆಶಾ ಕಾರ್ಯಕರ್ತೆಯರ ಒಗ್ಗಟ್ಟಿನ ಸಂಕೇತವಾಗಿ ಮೂಡಿಬಂದಿದೆ.

ಆರು ಅಡಿ ಅಗಲ ಮತ್ತು 60 ಅಡಿ ಉದ್ದದ ಬಟ್ಟೆಯನ್ನು ದೊಡ್ಡ ಗುಲಾಬಿ ಬಣ್ಣದ ಸೀರೆಯ ರೂಪದಲ್ಲಿ ಸಿದ್ಧಪಡಿಸಲಾಗಿದೆ. ಆಶಾ ಕಾರ್ಯಕರ್ತೆಯರು ಈ ಬಟ್ಟೆಯ ಮೇಲೆ ಗಾಢ ಗುಲಾಬಿ ಬಣ್ಣದ ಕೈಮುದ್ರೆಗಳನ್ನು ಒತ್ತಿದ್ದಾರೆ. ಪ್ರತಿಯೊಂದು ಕೈಮುದ್ರೆಯೂ ಒಬ್ಬೊಬ್ಬ ಮಹಿಳೆಯ ಬದುಕು, ಶ್ರಮ, ಸೇವೆ ಮತ್ತು ಹೋರಾಟವನ್ನು ಪ್ರತಿನಿಧಿಸುತ್ತದೆ. ಕೈಗಳು ಬೇರೆ ಬೇರೆಯಾಗಿದ್ದರೂ ಅವುಗಳ ಒಗ್ಗಟ್ಟಿನ ಶಕ್ತಿ ದೊಡ್ಡದಾಗಿದೆ ಎಂಬ ಸಂದೇಶವನ್ನು ಇದು ಸಾರುವಂತಿತ್ತು.

ಬಟ್ಟೆಯ ಆರಂಭದಲ್ಲಿ ಕೆಲವು ಆಶಾ ಕಾರ್ಯಕರ್ತೆಯರು ಕೈ ಎತ್ತಿ ನಿಂತಿರುವ ಚಿತ್ರಣವಿದ್ದು, ಮುಂದೆ ಸಾಗಿದಂತೆ ಕೈಮುದ್ರೆಗಳು, ಮುಷ್ಟಿಗಳು ಮತ್ತು ಹೆಜ್ಜೆ ಗುರುತುಗಳು ಕಾಣಿಸುತ್ತವೆ. ಕೊನೆಯಲ್ಲಿ ಯಾರೂ ನಿಂತಿರುವುದಿಲ್ಲ. ಇದು ಆಶಾ ಕಾರ್ಯಕರ್ತೆಯರ ಅಂತ್ಯವಿಲ್ಲದ ಸಮುದ್ರದಂತೆ ಕಾಣುವಂತೆ ರೂಪಿಸಲಾಗಿದೆ. ಈ ಹೋರಾಟಕ್ಕೆ ಕೊನೆಯಿಲ್ಲ ಎಂಬ ಸಂದೇಶವನ್ನು ಕಲಾಕೃತಿ ಸಾರುತ್ತದೆ.

ನಾಳೆ ಮುಖ್ಯಮಂತ್ರಿಗಳೊಂದಿಗೆ ಅಧಿಕೃತ ಸಭೆ: ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರ ಜಿ.ಸಿ.ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಸುದೀರ್ಘ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ನಿಶ್ಚಿತ ಗೌರವಧನ ನೀಡಬೇಕು ಹಾಗೂ ನಿವೃತ್ತರಾಗುವ ಕಾರ್ಯಕರ್ತೆಯರಿಗೆ 5 ಲಕ್ಷ ರೂ. ಇಡುಗಂಟು ಮಂಜೂರು ಮಾಡಬೇಕು ಸೇರಿದಂತೆ ಇತರ ಪ್ರಮುಖ ಬೇಡಿಕೆಗಳನ್ನು ಅವರ ಗಮನಕ್ಕೆ ತಂದರು.

ಬೇಡಿಕೆಗಳನ್ನು ಆಲಿಸಿ ಮಾತನಾಡಿದ ಜಿ.ಸಿ.ಚಂದ್ರಶೇಖರ್, ಈ ವಿಚಾರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ. ಅಲ್ಲದೆ, ಬೇಡಿಕೆಗಳ ಕುರಿತು ಹೋರಾಟಗಾರರು ಇನ್ನಷ್ಟು ಯೋಚನೆ ಮಾಡಿಕೊಂಡು ಬರುವಂತೆ ಸೂಚಿಸಿದರು. ಬೇಡಿಕೆಗಳ ಕುರಿತು ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ನ.27ರ ಶುಕ್ರವಾರ ಮುಖ್ಯಮಂತ್ರಿ ಅವರೊಂದಿಗೆ ಸಂಘದ ಪದಾಧಿಕಾರಿಗಳ ಅಧಿಕೃತ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

Tags

Asha workersprotest
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X