Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 9ನೇ ದಿನಕ್ಕೆ ಕಾಲಿಟ್ಟ ಆಶಾಗಳ ಹೋರಾಟ;...

9ನೇ ದಿನಕ್ಕೆ ಕಾಲಿಟ್ಟ ಆಶಾಗಳ ಹೋರಾಟ; ಸಾಹಿತಿ-ಕಲಾವಿದರಿಂದ ಬೆಂಬಲ: 20ಕ್ಕೂ ಹೆಚ್ಚು ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ25 Nov 2026 6:58 PM IST
share
9ನೇ ದಿನಕ್ಕೆ ಕಾಲಿಟ್ಟ ಆಶಾಗಳ ಹೋರಾಟ; ಸಾಹಿತಿ-ಕಲಾವಿದರಿಂದ ಬೆಂಬಲ: 20ಕ್ಕೂ ಹೆಚ್ಚು ಕಾರ್ಯಕರ್ತೆಯರು ಆಸ್ಪತ್ರೆಗೆ ದಾಖಲು

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15ಸಾವಿರ ರೂ. ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದೆ.

ಚಳಿ ಹಾಗೂ ಪ್ರತಿಕೂಲ ಹವಾಮಾನವನ್ನೂ ಲೆಕ್ಕಿಸದೆ ಮಕ್ಕಳು ಸೇರಿದಂತೆ ಧರಣಿಯಲ್ಲಿ ಪಾಲ್ಗೊಂಡಿರುವ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರಿಸಿದ್ದಾರೆ. ನಿರಂತರ ಹೋರಾಟದಿಂದ 20ಕ್ಕೂ ಹೆಚ್ಚು ಕಾರ್ಯಕರ್ತೆಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಸಾಹಿತಿಗಳು, ಕಲಾವಿದರು, ಕಾರ್ಮಿಕ ಸಂಘಟನೆಗಳ ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಆಶಾಕಾರ್ಯಕರ್ತರ ಧರಣಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಬುಧವಾರ ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಸಾಹಿತಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಒಂಬತ್ತು ದಿನಗಳಿಂದ ಬಿಸಿಲು, ಮಳೆ, ಚಳಿಯನ್ನು ಎದುರಿಸಿ ಆಶಾಗಳು ಹೋರಾಟ ನಡೆಸುತ್ತಿದ್ದಾರೆ. ದುಡಿಯುವ ಹೆಣ್ಣು ಮಕ್ಕಳನ್ನು ಇಂತಹ ಸ್ಥಿತಿಗೆ ದೂಡಿರುವುದು ಪ್ರಜಾಪ್ರಭುತ್ವಕ್ಕೆ ನಾಚಿಕೆ ತರುವ ವಿಚಾರ. ಇದು ಹೃದಯಹೀನ ಮತ್ತು ಅನಾಗರಿಕ ನಡೆ. ಸಿಎಂ ಕೂಡಲೇ ಧರಣಿ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಆಶಾ ಕಾರ್ಯಕರ್ತೆಯರು ಒಂಬತ್ತು ದಿನಗಳ ಕಾಲ ಹೋರಾಟ ಮುಂದುವರಿಸುವಂತಹ ಪರಿಸ್ಥಿತಿಯನ್ನು ಸರಕಾರವೇ ಸೃಷ್ಟಿಸಿದೆ. ಮುಖ್ಯಮಂತ್ರಿ ಆಶಾ ಕಾರ್ಯಕರ್ತೆಯರನ್ನು ಸಹೋದರಿಯರು ಎಂದು ಕರೆಯುವುದು ಕೇವಲ ಬಾಯಿ ಮಾತಿಗೆ ಸೀಮಿತವಾಗಬಾರದು. ಬೇಡಿಕೆಗಳ ಈಡೇರಿಕೆ ಕುರಿತು ಸರಕಾರ ಸ್ಪಷ್ಟ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಸರಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಎಚ್ಚರಿಸಿದರು.

ಸಾಹಿತಿ ಡಾ.ವಸುಂಧರಾ ಭೂಪತಿ ಮಾತನಾಡಿ, ಎಲ್ಲ ಕಷ್ಟಗಳನ್ನು ದಿಟ್ಟವಾಗಿ ಎದುರಿಸುತ್ತಿರುವ ಆಶಾ ಕಾರ್ಯಕರ್ತೆಯರ ನೋವನ್ನು ಸರಕಾರ ಹೃದಯದಿಂದ ಅರ್ಥಮಾಡಿಕೊಳ್ಳಬೇಕು. ರಾಜ್ಯದ ಕನ್ನಡಿಗರೆಲ್ಲರೂ ನಿಮ್ಮೊಂದಿಗಿದ್ದಾರೆ ಎಂದು ಬೆಂಬಲ ವ್ಯಕ್ತಪಡಿಸಿದರು.

ನಟಿ ಮಾಳವಿಕಾ ಅವಿನಾಶ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಹೆಣ್ಣುಮಕ್ಕಳ ಬದುಕಿಗೆ ಭರವಸೆಯಾಗಿದ್ದು, ಇತರರ ಆರೋಗ್ಯದ ಕಾಳಜಿ ವಹಿಸುವ ತಾಯಂದಿರು. ಅವರ ಪ್ರಮುಖ ಬೇಡಿಕೆಯಾಗಿರುವ ಮಾಸಿಕ 15 ಸಾವಿರ ರೂ. ಗೌರವಧನವನ್ನು ರಾಜ್ಯ ಸರಕಾರ ಆದಷ್ಟು ಬೇಗ ಈಡೇರಿಸಬೇಕು. ಅವರ ನ್ಯಾಯಯುತ ಹೋರಾಟದ ಧ್ವನಿಯನ್ನು ಕೇಂದ್ರ ಸರಕಾರಕ್ಕೂ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನುಡಿದರು.

ನಟ ಅವಿನಾಶ್ ಮಾತನಾಡಿ, ಕೊರೋನ ಸಾಂಕ್ರಾಮಿಕದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸಲ್ಲಿಸಿದ ಸೇವೆ ಅತ್ಯಂತ ಶ್ಲಾಘನೀಯ. ಅವರ ಕಷ್ಟ-ಸುಖ ವಿಚಾರಿಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಮಾತನಾಡಿ, ಸಚಿವ ನರೇಂದ್ರಸ್ವಾಮಿ ‘ಆಶಾ ಕಾರ್ಯಕರ್ತೆಯರಿಗೆ ಕೇಳಿದಾಗೆಲ್ಲ ಕಂಠಿಹಾರ ಕೊಡೋಕಾಗುತ್ತಾ?' ಎಂದು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಇದು ಪ್ರಜಾಪ್ರಭುತ್ವ. ಸಂವಿಧಾನವನ್ನು ಎತ್ತಿಹಿಡಿದು ಮಾತನಾಡುವ ಪಕ್ಷದ ಸಚಿವರಿಂದ ಇಂತಹ ಮಾತುಗಳನ್ನು ನಿರೀಕ್ಷಿಸಿರಲಿಲ್ಲ. ನಾವು ಯಾವ ಹಾರವನ್ನೂ ಕೇಳಿಲ್ಲ. ನಮ್ಮ ದುಡಿತಕ್ಕೆ ತಕ್ಕ ಪ್ರತಿಫಲ ನೀಡಬೇಕು ಮತ್ತು ಸರಕಾರ ಕೊಟ್ಟ ಮಾತನ್ನು ಈಡೇರಿಸಬೇಕು. ದುಡಿಯುವ ಹೆಣ್ಣುಮಕ್ಕಳನ್ನು ಅವಮಾನಿಸುವುದು ಕೀಳು ಅಭಿರುಚಿಯ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯಲ್ಲಿ ಸಿಐಟಿಯು ಪದಾಧಿಕಾರಿ ಎಸ್.ವರಲಕ್ಷ್ಮಿ, ಕೆಪಿಆರ್‌ ಎಸ್ ಮುಖಂಡ ಯಶವಂತ್, ಬ್ರೇಕ್ ಥ್ರೂ ಸೈನ್ಸ್ ಸೊಸೈಟಿಯ ಮನಮೋಹನ್, ನಿವೃತ್ತ ಉಪನ್ಯಾಸಕ ಪ್ರೊ.ಚಂದ್ರಶೇಖರ್ ತಾಳ್ಯ, ನೈಜ ಹೋರಾಟಗಾರರ ವೇದಿಕೆಯ ಎಚ್.ಎಂ.ವೆಂಕಟೇಶ್, ಹೋರಾಟಗಾರರಾದ ಕೆ.ವಿ.ಭಟ್, ಸೋಮಶೇಖರ್, ಸಂಪೂರ್ಣಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

ASHA workersprotest
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X