Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಏಷ್ಯನ್ ಗೇಮ್ಸ್‌ನಲ್ಲಿ ದೇಶದ ಕೀರ್ತಿ...

ಏಷ್ಯನ್ ಗೇಮ್ಸ್‌ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿ‌‌.ಕೆ‌.ಶಿವಕುಮಾರ್ ಸನ್ಮಾನ

► "ಪದಕ ವಿಜೇತರಿಗೆ ನಗದು ಪುರಸ್ಕಾರ ಹೆಚ್ಚಳ; ಚಿನ್ನ ಗೆದ್ದವರಿಗೆ 1 ಕೋಟಿ, ಬೆಳ್ಳಿ ಗೆದ್ದವರಿಗೆ 75 ಲಕ್ಷ ರೂ." ► "20 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ"

ವಾರ್ತಾಭಾರತಿವಾರ್ತಾಭಾರತಿ6 Oct 2026 2:55 PM IST
share
ಏಷ್ಯನ್ ಗೇಮ್ಸ್‌ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿ‌‌.ಕೆ‌.ಶಿವಕುಮಾರ್ ಸನ್ಮಾನ

ಬೆಂಗಳೂರು : ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳನ್ನು ಸಿಎಂ‌ ಡಿ.ಕೆ‌.ಶಿವಕುಮಾರ್ ‌ಅವರು ವಿಧಾ‌ನಸೌಧದಲ್ಲಿ ಮಂಗಳವಾರ ಸನ್ಮಾನಿಸಿದರು. 8 ಪದಕ ವಿಜೇತರಿಗೆ ಒಟ್ಟು 8 ಕೋಟಿ ರೂ. ನಗದು ಬಹುಮಾನ ಘೋಷಿಸಿದರು.

ಪದಕ ವಿಜೇತರು ಸೇರಿದಂತೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ರಾಜ್ಯ ಸರಕಾರದಿಂದ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ಇದೇ ವೇಳೆ ಸಿಎಂ ಘೋಷಿಸಿದರು.

ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ರೂ. ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಎಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗಗಳ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.

ಪದಕ ವಿಜೇತರ ಬಹುಮಾನ ಮೊತ್ತ ಹೆಚ್ಚಳ

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ನೀಡಲಾಗುತ್ತಿದ್ದ ನಗದು ಬಹುಮಾನವನ್ನೂ ಸಿಎಂ ಹೆಚ್ಚಳ ಮಾಡಿದ್ದಾರೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 15 ಲಕ್ಷ ರೂ. ನೀಡಲಾಗುತ್ತಿತ್ತು. ಸಿಎಂ ಡಿ ಕೆ‌ ಶಿವಕುಮಾರ್ ಅವರು ಚಿನ್ನದ ಪದಕಕ್ಕೆ 1 ಕೋಟಿ ರೂ., ಬೆಳ್ಳಿ ಪದಕಕ್ಕೆ 75 ಲಕ್ಷ ಹಾಗೂ ಕಂಚಿನ ಪದಕಕ್ಕೆ 50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಿದ್ದಾರೆ.

ಕ್ರೀಡಾಪಟುಗಳಿಗೆ ನೇರ ನೇಮಕಾತಿ ಅವಕಾಶ

ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿಯನ್ನು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಕೈಗೊಳ್ಳಲಾಗುವುದು.

ಒಲಿಂಪಿಕ್ಸ್ ತಯಾರಿಗೆ ತಲಾ 10 ಲಕ್ಷ

ಮುಂದಿನ ಹಂತದಲ್ಲಿ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ನೆರವು ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕಾ ಪಾಟೀಲ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು ‘ಗುರಿ ಒಲಿಂಪಿಕ್ಸ್’ ಯೋಜನೆಗೆ 2026-27ನೇ ಸಾಲಿಗೆ ಸೇರ್ಪಡೆ ಮಾಡಲಾಗಿದೆ. ಒಲಿಂಪಿಕ್ಸ್ ತಯಾರಿಗಾಗಿ ತಲಾ 10 ಲಕ್ಷ ರೂ. ನಗದು ಪ್ರೋತ್ಸಾಹಧನವನ್ನು ಇವರಿಗೆ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ 2% ಮೀಸಲಾತಿ

ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ 2% ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಮತ್ತು ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಪದಕ ವಿಜೇತ 8 ಕ್ರೀಡಾಪಟುಗಳ ವಿವರ :

ಶ್ರೇಯಾಂಕ ಆರ್. ಪಾಟೀಲ್ (ಕ್ರಿಕೆಟ್ ಮಹಿಳಾ ತಂಡ, ಚಿನ್ನ), ಎಂ.ಆರ್. ಪೂವಮ್ಮ (ಅಥ್ಲೆಟಿಕ್ಸ್ 4x400 ಮಿಶ್ರ ರಿಲೇ, 4x400 ಮಹಿಳಾ ರಿಲೇ ಬೆಳ್ಳಿ ಮತ್ತು ಚಿನ್ನ)

ತಿಲೋತ್ತಮ ಸೇನ್ (ಶೂಟಿಂಗ್, ಮಹಿಳೆಯರ 50 ಮೀ ರೈಫಲ್, ಬೆಳ್ಳಿ)

ಆಯುಷ್ ಆರ್ ಶೆಟ್ಟಿ (ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ)

ಸ್ನೇಹಾ ಎಸ್.ಎಸ್. ( ಅಥ್ಲೆಟಿಕ್ಸ್ 4x100 ಮಿಶ್ರ ರಿಲೇ ಕಂಚು)

ಅಧಿತಿ ಅಶೋಕ್ (ಗಾಲ್ಫ್ ಮಹಿಳಾ ತಂಡ, ಬೆಳ್ಳಿ)

ಪ್ರಣವಿ ಎಸ್. ಅರಸ್ (ಗಾಲ್ಫ್ ಮಹಿಳಾ ತಂಡ, ಬೆಳ್ಳಿ ಹಾಗೂ ವೈಯಕ್ತಿಕ ಚಿನ್ನ)

ಮೋಹಿತ್ ಹೆಚ್.ಎಸ್. (ಹಾಕಿ ಪುರುಷರ ತಂಡ, ಚಿನ್ನ)

ಏಷ್ಯನ್ ಗೇಮ್ಸ್ 2026 ರಲ್ಲಿ ಭಾಗವಹಿಸಿ ತಲಾ 5.00 ಲಕ್ಷ ರೂ. ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು

ಯಶಸ್ ಪಾಲಾಕ್ಷ - ಅಥ್ಲೆಟಿಕ್ಸ್

ಸುಪ್ರಿಯಾ ಸಿಂಡಿಗೆರೆ ಬಸವರಾಜು - ಅಥ್ಲೆಟಿಕ್ಸ್

ಉನ್ನತಿ ಅಯ್ಯಪ್ಪ - ಅಥ್ಲೆಟಿಕ್ಸ್

ಎಂ.ಆರ್. ಪೂವಮ್ಮ - ಅಥ್ಲೆಟಿಕ್ಸ್

ಸ್ನೇಹಾ ಎಸ್.ಎಸ್. - ಅಥ್ಲೆಟಿಕ್ಸ್

ಆಯುಷ್ ಶೆಟ್ಟಿ - ಬ್ಯಾಡ್ಮಿಂಟನ್

ಶ್ರೇಯಾಂಕ ಆರ್. ಪಾಟೀಲ್ - ಕ್ರಿಕೆಟ್ T20

ಕೀರ್ತಿ ರಂಗಸ್ವಾಮಿ - ಸೈಕ್ಲಿಂಗ್ ಟ್ರ್ಯಾಕ್

ಫವಾದ್ ಮಿರ್ಜಾ- ಈಕ್ವೇಸ್ಟ್ರೀಯನ್

ಅಧಿತಿ ಅಶೋಕ್ - ಗಾಲ್ಫ್

ಪ್ರಣವಿ ಎಸ್. ಅರಸ್ - ಗಾಲ್ಫ್

ಮೋಹಿತ್ ಹೆಚ್.ಎಸ್. - ಹಾಕಿ

ತಿಲೋತ್ತಮಾ ಸೇನ್ - ಶೂಟಿಂಗ್

ಆಕಾಶ್ ಮಣಿ - ಈಜು

ಶ್ರೀ ಹರಿ ನಟರಾಜ್ - ಈಜು

ದಕ್ಷಣ್ ಎಸ್. - ಈಜು

ಅನೀಶ್ ಗೌಡ - ಈಜು

ಯಶಸ್ವಿನಿ ಘೋರ್ಪಡೆ - ಟೇಬಲ್ ಟೆನ್ನಿಸ್

ಸಿಂಧುಶ್ರೀ - ಅಥ್ಲೆಟಿಕ್ಸ್

ದೀಪು ಮಲ್ಲೇಶ್ - ಸ್ಪೋರ್ಟ್ಸ್ ಕ್ಲೈಂಬಿಂಗ್

Tags

Asian GamesCM D.K. ShivakumarKarnatakaAthletes
share
ವಾರ್ತಾಭಾರತಿ
ವಾರ್ತಾಭಾರತಿ
Next Story
X