Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಮೋದಿಯವರ ಕಾಲಿಗಾದರೂ ಬಿದ್ದು...

ಪ್ರಧಾನಿ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ʼʼನಿಮ್ಮ ಪಕ್ಷದ 25 ಸಂಸದರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿʼʼ

ವಾರ್ತಾಭಾರತಿವಾರ್ತಾಭಾರತಿ31 Oct 2023 1:40 PM IST
share
ಪ್ರಧಾನಿ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ: ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ‘’ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಮಂಗಳವಾರ ಪತ್ರಿಕಾ ಪ್ರಕಟನೆ ನೀಡಿರುವ ಅವರು, ʼʼಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ?ʼʼ ಎಂದು ಪ್ರಶ್ನಿಸಿದ್ದಾರೆ.

ʼʼನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿʼʼ ಎಂದು ಅವರು ಹೇಳಿದ್ದಾರೆ.

ʼʼಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ? ಅವರೆಂದಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ?ʼʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼನನಗಾದರೂ ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿʼʼ

ʼʼಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ. ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿʼʼ ಎಂದು ಒತ್ತಾಯಿಸಿದ್ದಾರೆ.

ʼʼನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ. ಬರಗಾಲದ ನಷ್ಟ - ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿʼʼ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X