Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅತ್ತಿಬೆಲೆ ಪಟಾಕಿ ದುರಂತ: ಸಿಐಡಿ...

ಅತ್ತಿಬೆಲೆ ಪಟಾಕಿ ದುರಂತ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

ವಾರ್ತಾಭಾರತಿವಾರ್ತಾಭಾರತಿ8 Oct 2023 3:41 PM IST
share
ಅತ್ತಿಬೆಲೆ ಪಟಾಕಿ ದುರಂತ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

ಬೆಂಗಳೂರು, ಅ.8: ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ. ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಇಂದು ಅತ್ತಿಬೆಲೆಯಲ್ಲಿ ನಡೆದ ಅಗ್ನಿ ದುರಂತದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ:

ಘಟನೆಯನ್ನು ಗಮನಿಸಿದಾಗ ಸ್ಫೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ ಎಂದರು.

ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರ್ ನ್ನು ಹೊರತುಪಡಿಸಿ ಯಾರೂ ಖಾಯಂ ನೌಕರರಿಲ್ಲ. ಸ್ಫೋಟಕಗಳಿಗೆ ಅಗತ್ಯವಾದ ಯಾವುದೇ ಸುರಕ್ಷಾ ಕ್ರಮಗಳನ್ನು ಕೈಗೊಂಡಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಹಿಂಭಾಗದಲ್ಲಿ 200 ಅಡಿಗಳವರೆಗೂ ಗೋದಾಮು ಇದೆ. ಎಲ್ಲೂ ಕೂಡ ಅಗ್ನಿಶಾಮಕಗಳನ್ನು ಅಳವಡಿಸಿಲ್ಲ. ಒಟ್ಟಾರೆ ಮೇಲ್ನೋಟಕ್ಕೆ ಪರವಾನಿಗೆ ಹೊಂದಿದವರ ನಿರ್ಲಕ್ಷ್ಯ ಎದ್ದುಕಾಣುತ್ತಿದೆ ಎಂದರು.

ದೊಡ್ಡ ದುರಂತ

ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. 14 ಜನ ಮೃತಪಟ್ಟಿರುವುದು ದೊಡ್ಡ ದುರಂತ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ರಾಮುಸ್ವಾಮಿ ರೆಡ್ಡಿ , ನವೀನ್, ಅನಿಲ್ ರೆಡ್ಡಿ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿದೆ. ಅವರ ಮೇಲೆ ತನಿಖೆ ಮಾಡಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಸೂಕ್ತ ಪರಿಶೀಲನೆ ಅಗತ್ಯ

ಜಿಲ್ಲಾಧಿಕಾರಿಯನ್ನು ವಿಚಾರಿಸಿದಾಗ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ನಿರಾಕ್ಷೇಪಣಾ ಪತ್ರ ನೀಡಿದ್ದರು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಖುದ್ದಾಗಿ ಭೇಟಿ ನೀಡಬೇಕಾಗಿತ್ತು. ನಿರಾಕ್ಷೇಪಣಾ ಪತ್ರ ನೀಡಿದವರು ಸ್ಫೋಟಕಗಳ ಕಾಯ್ದೆಯಲ್ಲಿನ ಅಗತ್ಯಗಳನ್ನು ನೋಡಿ ಕೊಡಬೇಕಿತ್ತು. ಏಕೆಂದರೆ ಪರವಾನಿಗೆಯನ್ನು ಸ್ಫೋಟಕಗಳ ಕಾಯ್ದೆಯಡಿಯಲ್ಲಿ ನೀಡಲಾಗಿದೆ. ಜಿಲ್ಲಾಧಿಕಾರಿ ಕೂಡ ಸ್ಥಳ ಪರಿಶೀಲನೆ ಮಾಡಿ ನೀಡಬೇಕಿತ್ತು. ಈ ಬಗ್ಗೆ ಸೂಕ್ತ ಪರಿಶೀಲನೆಯಾಗಬೇಕು ಎಂದರು.

ದಾಸ್ತಾನು ಮಾಡಲು ಪರವಾನಿಗೆ ಇರಲಿಲ್ಲ

1000 ಕೆಜಿ ಯನ್ನು ಮಾರಾಟ ಮಾಡಲು ಪರವಾನಗಿ ಇದ್ದು, ಬಹುಶಃ ಸಂಗ್ರಹ ಮಾಡಲು ಪರವಾನಿಗೆ ಇರಲಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಚರ್ಚೆಯ ನಂತರ ಮುನ್ನೆಚ್ಚರಿಕಾ ಕ್ರಮ

ದೀಪಾವಳಿ ಹಬ್ಬ ಹತ್ತಿರವಿರುವುದರಿಂದ ಮುಂದೆ ಅಗತ್ಯ ಕ್ರಮಗಳನ್ನು ಚರ್ಚೆ ಮಾಡಿ ಕೈಗೊಳ್ಳಲಾಗುವುದು. ಈಗೆ ಈ ಅನಾಹುತವಾಗಿರುವ ಬಗ್ಗೆ ತನಿಖೆ ಯಾಗುತ್ತದೆ ಎಂದರು. ತಮಿಳುನಾಡಿನ ಆರೋಗ್ಯ ಸಚಿವರೂ ಆಗಮಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರೂ ಕೂಡ ತಲಾ 3 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X