ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ದುರಂತ | ಅಮಾನತುಗೊಂಡಿದ್ದ ಪೊಲೀಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ

ಬಿ.ದಯಾನಂದ್
ಬೆಂಗಳೂರು : ಆರ್ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ.4ರಂದು ಸಂಭವಿಸಿದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಶೇಖರ್ ಎಚ್.ಟೆಕ್ಕಣ್ಣವರ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ವಿಕಾಸ್ ಅವರಿಗೆ ಸ್ಥಳ ನಿಯುಕ್ತಿ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.
ಬಂಧೀಖಾನೆ ಹಾಗೂ ಸುಧಾರಣಾ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಬಿ.ದಯಾನಂದ್, ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಶೇಖರ್ ಎಚ್.ಟೆಕ್ಕಣ್ಣವರ್ ಹಾಗೂ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಬಿ.ದಯಾನಂದ್, ಶೇಖರ್ ಎಚ್.ಟೆಕ್ಕಣ್ಣವರ್ ಹಾಗೂ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಅಮಾನತುಗೊಳಿಸಿ ಹೊರಡಿಸಲಾಗಿದ್ದ ಆದೇಶವನ್ನು ರಾಜ್ಯ ಸರಕಾರ ಹಿಂಪಡೆದು, ಅವರಿಗೆ ಸ್ಥಳ ನಿಯುಕ್ತಿಗೊಳಿಸಿದೆ.
Next Story





