ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು : ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ವೀರಭದ್ರಯ್ಯ ಚರಂತಿಮಠ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀನಿವಾಸ ಟಿ.ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಎರಡು ವಿಧಾನಸಭೆ ಕ್ಷೇತ್ರಗಳಿಗೆ ಎ.9ರಂದು ಉಪ ಚುನಾವಣೆಯ ಮತದಾನ ನಡೆಯಲಿದ್ದು, ಮೇ 5 ರಂದು ಫಲಿತಾಂಶ ಪ್ರಕಟವಾಗಲಿದೆ.
Next Story




