Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ:...

ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ಮೇಲುಗೈ, ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ನಿರಾಸೆ

ವಾರ್ತಾಭಾರತಿವಾರ್ತಾಭಾರತಿ4 May 2026 7:29 PM IST
share
ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ಮೇಲುಗೈ, ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ತೀವ್ರ ನಿರಾಸೆ
ದಾವಣಗೆರೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗೆ 18,975 ಮತಗಳು

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಗಳ ಪೈಕಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ಸುಮಾರು 22 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಇತ್ತ ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸಮರ್ಥ್ ಶಾಮನೂರು 5,708 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಆದರೆ, ಜಯದ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷ ಬಿಜೆಪಿಗೆ ಈ ಫಲಿತಾಂಶವು ತೀವ್ರ ನಿರಾಸೆ ಮೂಡಿಸಿದೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ-98,919 ಮತಗಳನ್ನು, ಪ್ರತಿಸ್ಪರ್ಧಿ ಬಿಜೆಪಿಯ ವೀರಣ್ಣ ಚರಂತಿಮಠ-76,587 ಮತಗಳನ್ನು ಪಡೆದಿದ್ದು, 22,332 ಮತಗಳ ಭಾರೀ ಅಂತರದಿಂದ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು-69,578 ಮತಗಳನ್ನು ಪಡೆದಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ್ ದಾಸ್ ಕರಿಯಪ್ಪ-63,870 ಮತಗಳನ್ನು ಗಳಿಸಿದ್ದು, 5,708 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,975 ಮತಗಳನ್ನು ಗಳಿಸುವ ಮೂಲಕ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಸೋಮವಾರ ಬಾಗಲಕೋಟೆಯ ನವನಗರದ ತೋಟಗಾರಿಕೆ ವಿವಿಯಲ್ಲಿ ಮತ ಎಣಿಕೆ ನಡೆಯಿತು. ಆರಂಭದಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 3,207 ಮತಗಳ ಮುನ್ನಡೆ ಸಾಧಿಸಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 2,899 ಮತಗಳಿಸಿದರು. ಎರಡನೆ ಸುತ್ತಿನಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಎರಡನೇ ಸುತ್ತಿನಲ್ಲಿ ಉಮೇಶ ಮೇಟಿಗೆ 10, 996 ಮತಗಳು ಬಿದ್ದಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ ಅವರಿಗೆ 5,980 ಮತಗಳು ಬಿದ್ದಿವೆ. ಮೂರನೆ ಸುತ್ತು ಉಮೇಶ್ ಮೇಟಿ 16935, ಚರಂತಿಮಠ 8312 ಮತ ಪಡೆದರು.

ಆನಂತರ, ಏಳನೆ ಸುತ್ತಿನಲ್ಲಿ ಕಾಂಗ್ರೆಸ್ 12,710 ಮುನ್ನಡೆ ಸಾಧಿಸಿತು. ಆಗ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 34, 483 ಮತ ಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 21,773 ಮತ ಗಳಿಸಿದರು. 18ನೇ ಸುತ್ತಿನಲ್ಲಿ ಕಾಂಗ್ರೆಸ್ 13,025 ಮತಗಳ ಮುನ್ನಡೆ ಸಾಧಿಸಿತು. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ 73,715 ಮತ ಪಡೆದರೆ, ವೀರಣ್ಣ ಚರಂತಿಮಠ 60,697 ಮತಗಳನ್ನು ಪಡೆದರು. ಕೊನೆಯ ಸುತ್ತಿನಲ್ಲಿ 21866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಜಯಭೇರಿಯಾದರು.

ಸಮರ್ಥ್ ಗೆಲುವು: ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿಯೇ ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ 3711 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 3,134 ಮತಗಳನ್ನು ಪಡೆದು ಆರಂಭಿಕ ಹಿನ್ನಡೆ ಅನುಭವಿಸಿದ್ದರು.

ಅದೇ ರೀತಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 638 ಮತ ಪಡೆದು ಗಮನ ಸೆಳೆದರು. ಎರಡನೆ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ಐದನೆ ಸುತ್ತಿನಲ್ಲೂ ಬಿಜೆಪಿ 8,446 ಮತಗಳ ಮುನ್ನಡೆ ಸಾಧಿಸಿತ್ತು. ಆಗ ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ 22,615 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬರೀ 14,169 ಮತ ಪಡೆದಿದ್ದರು. ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 2,159 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು.

ಆದರೆ, ಒಂಭತ್ತಿನ ಸುತ್ತಿನಲ್ಲಿ ಕಾಂಗ್ರೆಸ್‍ಗೆ 3,986 ಮತಗಳ ಮುನ್ನಡೆ ದೊರೆಯಿತು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 30,530 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ 26,544, ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 10,568 ಮತಗಳಿಸಿದ್ದರು. 11ನೆ ಸುತ್ತುನಲ್ಲೂ ಕಾಂಗ್ರೆಸ್‍ಗೆ 7,916 ಮತಗಳ ಮುನ್ನಡೆ ಸಾಧಿಸಿದರು.

19ನೆ ಸುತ್ತಿನಲ್ಲೂ ಕಾಂಗ್ರೆಸ್‍ಗೆ 5,824 ಮತಗಳ ಮುನ್ನಡೆ ಸಾಧಿತು. ಆಗ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 64,039 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಟಿ. ಶ್ರೀನಿವಾಸ ದಾಸಕರಿಯಪ್ಪ 58,215 ಹಾಗೂ ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,440 ಮತ ಪಡೆದರು. 21ನೇ ಸುತ್ತಿನಲ್ಲಿ ಕಾಂಗ್ರೆಸ್‍ಗೆ 4,873 ಮತಗಳ ಮುನ್ನಡೆ ಸಾಧಿಸಿತು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 68,619 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ 63,746 ಹಾಗೂ ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,485 ಮತ ಗಳಿಸಿದರು.

ಕೊನೆಯದಾಗಿ ಸಮರ್ಥ್ ಶಾಮನೂರು 69,578 ಮತಗಳಿಸುವ ಮೂಲಕ ನಗುವಿನ ನಗೆ ಬೀರಿದರು. ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ 63,870 ಮತ ಪಡೆದರೆ, ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ 18,975 ಮತ ಗಳಿಸಿ ಗಮನ ಸೆಳೆದರು.

ಒಟ್ಟಿನಲ್ಲಿ ಬಾಗಲಕೋಟೆಯ ಚುನಾವಣೆಯ ಫಲಿತಾಂಶ ಕಾಂಗ್ರೆಸ್‍ಗೆ ನಿಚ್ಚಳ ಗೆಲುವು ತಂದುಕೊಟ್ಟಿದ್ದರೆ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಮುನಿಸು ನೀರು ಕುಡಿಸಿತು. ಆರಂಭದ ಏಳು ಸುತ್ತುಗಳ ವರೆಗೂ ಬಿಜೆಪಿಯ ಅಭ್ಯರ್ಥಿಯೇ ಮುನ್ನಡೆ ಸಾಧಿಸಿದರು. 8ನೆ ಸುತ್ತಿನ ಬಳಿಕ ಸಮರ್ಥ್ ಮಲ್ಲಿಕಾರ್ಜುನ್ ಚೇತರಿಸಿಕೊಂಡರು. ಆದರೂ ಕೊನೆಯ ಹಂತದ ವರೆಗೂ ಕುತೂಹಲ ಉಳಿದಿತ್ತು. ಬಿಜೆಪಿ ಬಾಗಲಕೋಟೆಯಲ್ಲಿ ಗೆಲ್ಲಬಹುದೆಂಬ ನಿರೀಕ್ಷೆಗಳು ಹುಸಿಯಾದವು. ಅಲ್ಪಸಂಖ್ಯಾತರ ಮುನಿಸಿನ ಲಾಭವನ್ನು ದಾವಣಗೆರೆಯಲ್ಲಿ ಪಡೆದುಕೊಳ್ಳಬಹುದು ಎಂಬ ಅಂದಾಜುಗಳು ತಲೆಕೆಳಕಾಗಿವೆ.

ಚಿಲಕ ಮುರಿದರು: ಮತಯಂತ್ರಗಳನ್ನು ಸುರಕ್ಷಿತವಾಗಿ ಇಟ್ಟಿದ್ದ ಇಲ್ಲಿನ ದಾವಣಗೆರೆಯ ಡಿಆರ್‍ಆರ್ ಕಾಲೇಜಿನಲ್ಲಿನ ಭದ್ರತಾ ಕೊಠಡಿಗಳ ಬೀಗದ ಕೀಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಚಿಲಕ ಮುರಿದು ಬಾಗಿಲು ತೆರೆದ ದೃಶ್ಯ ಕಂಡಿತು.

ತಾಂತ್ರಿಕ ದೋಷ?: ದಕ್ಷಿಣ ವಿಧಾನಸಭಾ ಕ್ಷೇತ್ರದ 111, 121 ಹಾಗೂ 139ನೇ ಮತಗಟ್ಟೆಯ ಮತಯಂತ್ರಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತು. ಇದರಿಂದ ಮತಯಂತ್ರ ತೆರೆಯಲು ಸಾಧ್ಯವಾಗಿಲ್ಲ. ಅಂತಿಮವಾಗಿ ಈ ಮೂರು ಮತಯಂತ್ರಗಳ ವಿ.ವಿ.ಪ್ಯಾಟ್ ಎಣಿಕೆಗೆ ತೀರ್ಮಾನ ಕೈಗೊಳ್ಳಲಾಯಿತು. 21ನೇ ಸುತ್ತಿನ ಮತ ಎಣಿಕೆ ಮುಗಿದ ಬಳಿಕ ವಿ.ವಿ.ಪ್ಯಾಟ್ ಎಣಿಕೆ ಆರಂಭಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಬಾಗಲಕೋಟೆ ಕ್ಷೇತ್ರ: ಪಡೆದ ಮತಗಳ ಸಂಖ್ಯೆ

*ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ಪಡೆದ ಮತಗಳ ಸಂಖ್ಯೆ-98,919

*ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪಡೆದ ಮತಗಳ ಸಂಖ್ಯೆ-76,587

*ಗೆಲುವಿನ ಅಂತರ-22,332 ಮತಗಳು

ದಾವಣಗೆರೆ ದಕ್ಷಿಣ ಕ್ಷೇತ್ರ: ಪಡೆದ ಮತಗಳ ಸಂಖ್ಯೆ

*ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪಡೆದ ಮತಗಳ ಸಂಖ್ಯೆ-69,578

*ಬಿಜೆಪಿ ಅಭ್ಯರ್ಥಿ ಟಿ.ಶ್ರೀನಿವಾಸ ದಾಸಕರಿಯಪ್ಪ ಪಡೆದ ಮತಗಳ ಸಂಖ್ಯೆ-63,870

*ಎಸ್‍ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಪಡೆದ ಮತಗಳ ಸಂಖ್ಯೆ-18,975

*ಗೆಲುವಿನ ಅಂತರ-5,708 ಮತಗಳು

ಈ ಗೆಲುವು ಮತದಾರರಿಗೆ ಅರ್ಪಣೆ: ಉಮೇಶ್ ಮೇಟಿ

"ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲಾ ಮತದಾರರಿಗೆ ಧನ್ಯವಾದಗಳು ತಿಳಿಸುತ್ತೇನೆ. ಈ ಗೆಲುವು ನನ್ನ ವೈಯಕ್ತಿಕ ಸಾಧನೆಯಲ್ಲ, ಇಡೀ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಗ್ಯಾರಂಟಿ ಸರಕಾರದ ಗೆಲುವಾಗಿದೆ. ಈ ಗೆಲುವನ್ನು ನಾನು ಬಾಗಲಕೋಟೆ ಕ್ಷೇತ್ರದ ಮತದಾರರಿಗೆ ಸಮರ್ಪಿಸುತ್ತೇನೆ. ನಮ್ಮ ತಂದೆಯವರ ಮೇಲಿರುವ ಅಭಿಮಾನವನ್ನು ಕ್ಷೇತ್ರದ ಜನರು ಮತ್ತೊಮ್ಮೆ ತೋರಿಸಿದ್ದಾರೆ. ಹಿರಿಯರು ಹಾಗೂ ಕಿರಿಯರು ಎಲ್ಲ ಕಾರ್ಯಕರ್ತರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು"

-ಉಮೇಶ್ ಮೇಟಿ, ಕಾಂಗ್ರೆಸ್ ವಿಜೇತ ಅಭ್ಯರ್ಥಿ, ಬಾಗಲಕೋಟೆ

ನಮಗೆ ಅಲ್ಪಸಂಖ್ಯಾತರ ಮತಗಳು ಕೈತಪ್ಪಿಲ್ಲ: ಎಸ್.ಎಸ್.ಮಲ್ಲಿಕಾರ್ಜುನ್

"ಅಲ್ಪಸಂಖ್ಯಾತ ಸಮುದಾಯದ ಮತಗಳು ಕಾಂಗ್ರೆಸ್ ಕೈ ತಪ್ಪಿಲ್ಲ. ಶಾಮನೂರು ಶಿವಶಂಕರಪ್ಪ ಅವರು 1994ರಲ್ಲಿ 1,300 ಮತಗಳ ಅಂತರದಿಂದ ಗೆದ್ದಿದ್ದರು. 2023ರಲ್ಲಿ 48,000 ಮತಗಳ ಭಾರಿ ಅಂತರದಲ್ಲಿ ವಿಜೇತರಾಗಿದ್ದರು. 5,708 ಮತಗಳ ಅಂತರದಿಂದ ಸಮರ್ಥ್ ಶಾಮನೂರು ಗೆದ್ದಿದ್ದಾರೆ. ಗೆಲುವಿನ ಅಂತರದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿಯೂ ಅನೇಕ ಮುಸ್ಲಿಮ್ ನಾಯಕರು ಚುನಾವಣಾ ಕಣದಲ್ಲಿದ್ದರು. ಆದರೆ, ಯಾರೇ ಸ್ಪರ್ಧಿಸಿದರೂ ಶಾಮನೂರು ಕುಟುಂಬದ ಮೇಲಿನ ಅಭಿಮಾನ ಕಡಿಮೆಯಾಗಿಲ್ಲ. ಶಾಮನೂರು ಶಿವಶಂಕರಪ್ಪ ಅವರ ಮೇಲೆ ಮತದಾರರು ಇಟ್ಟಿರುವ ವಿಶ್ವಾಸ ಗೆಲುವಿನ ದಡ ಸೇರಿಸಿದೆ"

-ಎಸ್.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ ದಾವಣಗೆರೆ

"ಕಾಂಗ್ರೆಸ್ ಕಾರ್ಯಕರ್ತರ ಪರಿಶ್ರಮದಿಂದ ಗೆಲುವು ಸಾಧ್ಯವಾಗಿದೆ. ಹೊಸ ಜವಾಬ್ದಾರಿಯೊಂದು ಹೆಗಲೇರಿದೆ. ಶಾಮನೂರು ಶಿವಶಂಕರಪ್ಪ, ಪಕ್ಷದ ನಾಯಕರಿಗೆ ಗೆಲುವು ಸಮರ್ಪಿಸುವೆ"

- ಸಮರ್ಥ್ ಶಾಮನೂರು, ಕಾಂಗ್ರೆಸ್ ವಿಜೇತ ಅಭ್ಯರ್ಥಿ, ದಾವಣಗೆರೆ ದಕ್ಷಿಣ ಕ್ಷೇತ್ರ

Tags

BagalkoteDavangere Southby-electionresult
share
ವಾರ್ತಾಭಾರತಿ
ವಾರ್ತಾಭಾರತಿ
Next Story
X