Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್...

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿ.ಕೆ. ಸುರೇಶ್

ವಾರ್ತಾಭಾರತಿವಾರ್ತಾಭಾರತಿ17 May 2025 2:48 PM IST
share
ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿ.ಕೆ. ಸುರೇಶ್

ಬೆಂಗಳೂರು: "ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ" ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ ಮುಖಂಡರು ಸೇವೆ ಸಲ್ಲಿಸಿದ್ದಾರೆ. ‌ಹಾಗಾಗಿ ಇದರಲ್ಲಿ ವಿಶೇಷತೆ ಏನೂ ಇಲ್ಲ. ನಾನು ಅವರೆಲ್ಲರ ಜೊತೆ ಇರಬೇಕು ಎಂದು ಒತ್ತಾಯ ಮಾಡಿದ ಕಾರಣಕ್ಕೆ ಜೊತೆಯಾಗಿ ನಿಂತಿದ್ದೇನೆ" ಎಂದರು.

"ಪಕ್ಷದ ನಾಯಕರು, ಮುಖಂಡರ‌ ಬಳಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಕೆಲವೊಂದು ವಿಚಾರಗಳಲ್ಲಿ ಅವರ ಮಾತುಗಳಿಗೂ ನಾವು ಗೌರವ ನೀಡಬೇಕಾಗುತ್ತದೆ. ಎಲ್ಲರ ಸಲಹೆ ಸೂಚನೆ ಮೇರೆಗೆ ಅರ್ಜಿ ಸಲ್ಲಿಸಿದ್ದೇನೆ" ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಒಪ್ಪದ ನೀವು ಈಗ ನಿರ್ದೇಶಕ ಸ್ಥಾನಕ್ಕೆ ಒಪ್ಪಿರುವುದು ಕುತೂಹಲಕ್ಕೆ ಕಾರಣವಾಗಿದೆ ಎಂದು ಕೇಳಿದಾಗ, "ಜಿಲ್ಲೆಯ ಶಾಸಕರು, ಮಾಜಿ ನಿರ್ದೇಶಕರು, ಅಧ್ಯಕ್ಷರುಗಳು, ಅನೇಕ‌ ಜಿಲ್ಲೆಯ ನಾಯಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದಾಗ ನಾನು ಅವರ ಮಾತುಗಳಿಗೆ ಪಕ್ಷದ ಕಾರ್ಯಕರ್ತನಾಗಿ ತಲೆಬಾಗಬೇಕಾಗುತ್ತದೆ. ಹಿರಿಯರ ಮಾತುಗಳನ್ನು ಸ್ವೀಕಾರ ಮಾಡಿದ್ದೇನೆ, ಕಾದು ನೋಡೋಣ" ಎಂದರು.

ಅಶೋಕ್ ಅವರಿಗೆ ಯೋಗ್ಯತೆ, ಅರ್ಹತೆ ಇದೆ :

ಬಿಡದಿ ಟೌನ್ ಶಿಪ್ ಕುರಿತು ಆರ್.ಅಶೋಕ್ ಸೇರಿದಂತೆ ಅನೇಕರಿಂದ ನಿಮ್ಮ ಮೇಲೆ ಭೂಕಬಳಿಕೆ ಆರೋಪದ ಕುರಿತು ಕೇಳಿದಾಗ, "ಆರ್.ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಅವರಿಗೆ ಎಲ್ಲಾ ಮಾಹಿತಿಯನ್ನು ಪಡೆಯಲು ಯೋಗ್ಯತೆ ಮತ್ತು ಅರ್ಹತೆಯಿದೆ. ಒಂದು ವೇಳೆ ಇಲ್ಲ ಎಂದರೆ ನಾನು ಅವರಿಗೆ ಮಾಹಿತಿ ನೀಡುತ್ತೇನೆ. ಕಬಳಿಕೆ ಕುರಿತು ನಾನು ಮಾತನಾಡಬೇಕು ಎಂದರೆ ಉತ್ತರಹಳ್ಳಿಯ ಬಗ್ಗೆ ಮಾತನಾಡಬೇಕಾಗುತ್ತದೆ" ಎಂದರು.

ಕುಮಾರಸ್ವಾಮಿ ಆಶಯದಂತೆ ನಮ್ಮ ಕೆಲಸ :

ರೈತರ ವಿರೋಧದ ಬಗ್ಗೆ ಕೇಳಿದಾಗ, "ನಾವು ಯಾವುದೇ ಭೂಸ್ವಾಧೀನ ಪ್ರಕ್ರಿಯೆ ನಡೆಸಿಲ್ಲ. ಈ ಹಿಂದೆ ಕುಮಾರಸ್ವಾಮಿ ಅವರು ಮಾಡಿದ್ದನ್ನು ಮುಂದುವರೆಸಲಾಗಿದೆ. ಕುಮಾರಸ್ವಾಮಿ ಅವರ ಆಶಯದಂತೆ ಉಪನಗರಗಳು ರಚನೆಯಾಗಬೇಕು ಎಂದು ಅವರದೇ ಸರ್ಕಾರದ ಅವಧಿಯಲ್ಲಿ ತೀರ್ಮಾನವಾಗಿತ್ತು. ಅದನ್ನು ನಾವು ಮುಂದುವರೆಸುತ್ತಿದ್ದೇವೆ. ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಹಾಗೂ ನಮ್ಮ ಪಕ್ಷದ ಉದ್ದೇಶ ಕೂಡ ಇದಾಗಿದೆ. ಉಪಮುಖ್ಯಮಂತ್ರಿಯವರು ಆ ಭಾಗದ ರೈತರಿಗೆ ಖಂಡಿತವಾಗಿ ನ್ಯಾಯ ಒದಗಿಸಿ‌ಕೊಡುತ್ತಾರೆ. ಇದು ನಮ್ಮ ಜವಾಬ್ದಾರಿ ಕೂಡ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X