Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 38 ತಿಂಗಳ ಹಿಂಬಾಕಿ ವೇತನಕ್ಕೆ ಆಗ್ರಹಿಸಿ...

38 ತಿಂಗಳ ಹಿಂಬಾಕಿ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’; ಬೇಡಿಕೆಗಳ ಕುರಿತು ತೀರ್ಮಾನಿಸಲು ಮಾ.2ರವರೆಗೆ ಸರಕಾರಕ್ಕೆ ಗಡುವು

ವಾರ್ತಾಭಾರತಿವಾರ್ತಾಭಾರತಿ19 Feb 2026 7:29 PM IST
share
38 ತಿಂಗಳ ಹಿಂಬಾಕಿ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’; ಬೇಡಿಕೆಗಳ ಕುರಿತು ತೀರ್ಮಾನಿಸಲು ಮಾ.2ರವರೆಗೆ ಸರಕಾರಕ್ಕೆ ಗಡುವು
"ಬೇಡಿಕೆ ಈಡೇರಿಸದಿದ್ದರೆ ಮತ್ತೆ ಮುಷ್ಕರ"

ಬೆಂಗಳೂರು : 2020ರ ಜನವರಿಯಿಂದ 2023ರ ಫೆ.28ರ ವರೆಗಿನ 38 ತಿಂಗಳ ಹಿಂಬಾಕಿ ವೇತನ, ದಿನ ಭತ್ಯೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಸಾರಿಗೆ ನೌಕರರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಗುರುವಾರ ‘ಬೆಂಗಳೂರು ಚಲೋ’ ನಡೆಸಿ, ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೆಎಸ್ಸಾರ್ಟಿಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್‍ನ ವಿಜಯಬಾಸ್ಕರ್ ಡಿ.ಎ. ಮಾತನಾಡಿ, ‘ನಾವು 38 ತಿಂಗಳ ಹಿಂಬಾಕಿಯನ್ನು ಕೇಳಿದರೆ ಸರಕಾರ 26 ತಿಂಗಳ ಹಿಂಬಾಕಿ ಕೊಡುತ್ತೇವೆ ಎಂದು ಹೇಳಿದೆ. ಸರಕಾರಕ್ಕೂ ನಮಗೂ ಏನು ವ್ಯತ್ಯಾಸವೆಂದರೆ, ಕೇವಲ 521ಕೋಟಿ ರೂ. ಅದು ಸರಕಾರಕ್ಕೆ ದೊಡ್ಡದಲ್ಲದಿದ್ದರೂ, ಸಾರಿಗೆ ನೌಕರರಿಗೆ ದೊಡ್ಡದು. ಸಾರಿಗೆ ಸಂಸ್ಥೆಗಳಿಗೆ 35ರಿಂದ 40 ವರ್ಷ ದುಡಿದು, ಕೋವಿಡ್ ಸಮಯದಲ್ಲಿ ಮರಣಹೊಂದಿದರೋ ಅಂತವರಿಗೆ ಹಿಂಬಾಕಿಯನ್ನು ನಿರಾಕರಣೆ ಮಾಡುತ್ತಿರುವುದು ನ್ಯಾಯವೇ?’ ಎಂದು ಪ್ರಶ್ನಿಸಿದರು.

ಅತ್ಯಂತ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಮಾ.6ಕ್ಕೆ ಬಜೆಟ್ ಮಂಡಿಸುತ್ತಿದ್ದು, 4 ಲಕ್ಷದ 50 ಸಾವಿರ ಕೋಟಿ ರೂ., ದಕ್ಷಿಣ ಭಾರತದಲ್ಲೇ ಅತೀ ದೊಡ್ಡ ಬಜೆಟ್ ಅಂತಹ ದೊಡ್ಡ ಬಜೆಟ್‍ನಲ್ಲಿ ಸಾರಿಗೆ ನೌಕರರಿಗೆ ಕೇವಲ 521ಕೋಟಿ ರೂ.ಗೆ ಯಾಕೆ ಚೌಕಾಸಿ ಮಾಡಬೇಕು ಎಂದು ಅವರು ಕೇಳಿದರು.

2024ರ ಜ.1ರಿಂದ ವೇತನ ಪರಿಷ್ಕರಣೆಯಾಗಬೇಕು ಎನ್ನುವುದು ನಮ್ಮ ಮತ್ತೊಂದು ಬೇಡಿಕೆ, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಒಪ್ಪಂದ 2027ರ ಮಾ.1ಕ್ಕೆ ಎಂದು ಹೇಳಿದ್ದರು. ಅದೇ ನಿಲುವಿಗೆ ಗಟ್ಟಿಯಾಗಿ ನಿಂತಿದ್ದರೆ, ಅದನ್ನು ಒಪ್ಪದಿದ್ದರೂ ಮೆಚ್ಚಿಕೊಳ್ಳುತ್ತಿದ್ದೆವು. ಕಾರ್ಮಿಕರ ತಾಳ್ಮೆ ಪರೀಕ್ಷೆ ಮಾಡಬೇಡಿ. ನಾವು ಬಹಳ ಸ್ಪಷ್ಟವಾಗಿದ್ದೇವೆ. ಹೋರಾಟ ನಮಗೆ ಗೆಲುವು ತಂದು ಕೊಡುತ್ತದೆ ಎಂದು ತಿಳಿಸಿದರು.

ಹೋರಾಟಗಾರ ಡಾ.ಸಿದ್ದನಗೌಡ ಪಾಟೀಲ್ ಮಾತನಾಡಿ, ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಕುರಿತು ರೈತರ ಅಭಿಪ್ರಾಯ ಕೇಳಲು ಸಭೆ ಕರೆದಿದ್ದರು. ಅದಕ್ಕೆ ನಾವು ಅಭಿನಂದನೆಗಳನ್ನು ಸಲ್ಲಿಸಿದ್ದೇವೆ. ಆದರೆ ಕಾರ್ಮಿಕ ನಾಯಕರನ್ನು ಬಜೆಟ್ ಪೂರ್ವಭಾವಿ ಸಭೆಗೆ ಕರೆದಿಲ್ಲ. ಅನಂತ್ ಸುಬ್ಬರಾವ್ ಅವರು ನಿಧನವಾದಾಗ ಸರಕಾರ ಗೌರವ ಸಲ್ಲಿಸಿದೆ. ಅದರಂತೆ ಅವರ ಆಶಯಗಳನ್ನು ಪೂರೈಸಿ ಗೌರವ ಸಲ್ಲಿಸಬೇಕಿದೆ ಎಂದು ತಿಳಿಸಿದರು.

ಹೋರಾಟದ ಸ್ಥಳಕ್ಕೆ ಆಗಮಿಸಿದ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಮಾತನಾಡಿ, ‘ನಾನು ಸಂಸ್ಥೆಗೆ ವ್ಯವಸ್ಥಾಪಕ ನಿರ್ದೇಶಕನಾಗಿ ಬಂದ ಮೇಲೆ ಸಾರಿಗೆ ನೌಕರರ ಬೇಡಿಕೆಗಳಿಗೆ ನನ್ನ ಹಂತದಲ್ಲಿ ಏನೇನು ಪರಿಹಾರ ಆಗಬೇಕಿತ್ತು ಅದನ್ನೆಲ್ಲ ಮಾಡಿದ್ದೇನೆ. ಸುಮಾರು 100ಕೋಟಿ ರೂ. ಗ್ರ್ಯಾಚುಟಿ ಬಾಕಿ ಇತ್ತು. ಅದನ್ನು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆಗಳನ್ನು ಸರಕಾರದ ಹಂತದಲ್ಲಿ ಮೂರು ಬಾರಿ ಚರ್ಚೆಯಾಗಿದೆ. ಆರ್ಥಿಕ ಸ್ಥಿತಿಯನ್ನು ನೋಡಿಕೊಂಡು ಪರಿಹಾರ ಒದಗಿಸಬೇಕಾಗಿದೆ. ಸರಕಾರದಿಂದ 14 ತಿಂಗಳ ಹಿಂಬಾಕಿಗೆ ಆದೇಶವಾಗಿದೆ. ಉಳಿದಂತೆ ಕೋವಿಡ್ ಸಮಯದ 12 ತಿಂಗಳ ವೇತನ ಬಾಕಿಯನ್ನು ನೀಡಲು ಸರಕಾರ ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದರು.

ಪ್ರತಿಭಟನೆಯಲ್ಲಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜ್ ಅರಸ್, ಕಾರ್ಮಿಕ ಮುಖಂಡರಾದ ಕೆ.ಪ್ರಕಾಶ್, ವರಲಕ್ಷ್ಮೀ, ದಲಿತ ಮುಖಂಡ ಆರ್. ಮೋಹನ್‍ರಾಜ್ ಸೇರಿದಂತೆ ಸಾವಿರಾರು ಸಾರಿಗೆ ಕಾರ್ಮಿಕರು ಭಾಗವಹಿಸಿದ್ದರು.

ಮಾ.2ರ ವರೆಗೆ ಸರಕಾರಕ್ಕೆ ಗಡುವು:

‘ಗುರುವಾರ ಬೆಳಗ್ಗೆಯಿಂದ ಪ್ರಾರಂಭವಾದ ಸಾರಿಗೆ ನೌಕರರ ‘ಬೆಂಗಳೂರು ಚಲೋ’ವನ್ನು ಕೈಬಿಡಲಾಗಿದೆ. ಆದರೆ, ಸರಕಾರ 38 ತಿಂಗಳ ಹಿಂಬಾಕಿಯನ್ನು ಬಿಡುಗಡೆ ಮಾಡುವುದು ಸೇರಿ ಎಲ್ಲ ಬೇಡಿಕೆಗಳ ಕುರಿತು ತೀರ್ಮಾನಿಸಲು ಮಾ.2ರ ವರೆಗೆ ಗಡುವು ನೀಡಿದ್ದು, ಬೇಡಿಕೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮಾ.2ರೊಳಗೆ ಸರಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಮುಷ್ಕರ ಪ್ರಾರಂಭಿಸಲಾಗುವುದು’ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡರು ಸಭೆಯಲ್ಲಿ ತೀರ್ಮಾನಿಸಿದ್ದಾರೆ.

ಸಮಿತಿ ನಿರ್ಧಾರಕ್ಕೆ ಆಕ್ಷೇಪ : ‘ಬೇಡಿಕೆಗಳ ಈಡೇರಿಕೆಗೆ ಮಾ.2ರ ವರೆಗೆ ಸರಕಾರಕ್ಕೆ ಗಡುವು ನೀಡಿದ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧಾರಕ್ಕೆ ಒಪ್ಪದ ಸಾರಿಗೆ ನೌಕರರು, ಯಾವುದೇ ಕಾರಣಕ್ಕೂ ಪ್ರತಿಭಟನೆ ನಿಲ್ಲಿಸಬಾರದು ಎಂದು ಆಕ್ರೋಶವನ್ನು ಹೊರಹಾಕಿದರು. ಈ ವೇಳೆ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ನೂಕು, ನುಗ್ಗಲು ಮತ್ತು ಕೂಗಾಟ ಕಂಡು ಬಂದಿತು.

Tags

Bangalore Chalo'
share
ವಾರ್ತಾಭಾರತಿ
ವಾರ್ತಾಭಾರತಿ
Next Story
X