Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್...

ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ17 July 2024 8:56 PM IST
share
ಬೆಂಗಳೂರು | ಹೊಸ ಮೆಟ್ರೋ ಮಾರ್ಗ ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ : ಡಿ.ಕೆ.ಶಿವಕುಮಾರ್

ಬೆಂಗಳೂರು: ಮುಂದಿನ ದಿನಗಳಲ್ಲಿ ಹೊಸ ಮೆಟ್ರೊ ಮಾರ್ಗಗಳನ್ನು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ಜಯನಗರದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‍ವರೆಗೆ ಡಬಲ್ ಡೆಕ್ಕರ್ ಮಾರ್ಗದಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದು ಕಷ್ಟದ ಕೆಲಸ. ಆದರೆ, ಡಬಲ್ ಡೆಕ್ಕರ್ ಮಾದರಿಯಿಂದ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಉಪಯೋಗಗಳಿವೆ. ಹೆಚ್ಚು ಖರ್ಚಾದರೂ ಈ ಮಾದರಿ ಬೆಂಗಳೂರಿಗೆ ಅನುಕೂಲ. ಪ್ರಸ್ತುತ 5 ಕಾಲು ಕಿ.ಮೀ ಉದ್ದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಸುಮಾರು 450 ಕೋಟಿ ರೂ.ಖರ್ಚಾಗಿದೆ ಎಂದರು.

ಬೆಂಗಳೂರಿನಲ್ಲಿ 100 ಕಿ.ಮೀ ಉದ್ದ ಸಿಗ್ನಲ್ ಫ್ರೀ ಕಾರಿಡಾರ್ ಮಾಡಲು 120ರಿಂದ150 ಕೋಟಿ ಖರ್ಚಾಗುತ್ತದೆ ಎಂದು ಅಧಿಕಾರಿಗಳು ಅಂದಾಜು ವೆಚ್ಚ ತಿಳಿಸಿದ್ದಾರೆ. ವಿಶ್ವದರ್ಜೆ ಗುಣಮಟ್ಟದ ಡಬಲ್ ಡೆಕ್ಕರ್ ನಿರ್ಮಾಣ ಮಾಡಿದ್ದೇವೆ. ಬಿಬಿಎಂಪಿ ಮತ್ತು ಬಿಎಂಆರ್ ಸಿಎಲ್ ಈ ಯೋಜನೆಯ ವೆಚ್ಚವನ್ನು ಹಂಚಿಕೊಳ್ಳುತ್ತಾರೆ ಎಂದು ವಿವರಿಸಿದರು.

ಇನ್ನೂ, ಹೊಸೂರು ರಸ್ತೆ ಕಡೆ ತೆರಳುವ ಸುಮಾರು ಶೇ.30 ರಷ್ಟು ನಾಗರೀಕರಿಗೆ ಡಬಲ್ ಡೆಕ್ಕರ್ ನಿಂದ ಉಪಯೋಗವಾಗಲಿದೆ. ಎಲೆಕ್ಟ್ರಾನಿಕ್ ಸಿಟಿ, ಎಚ್‍ಎಸ್‍ಆರ್ ಲೇಔಟ್, ಮಹದೇವಪುರ ವಾಸಿಗಳಿಗೆ ಬಹಳ ಅನುಕೂಲವಾಗಲಿದೆ. 5 ಪಥಗಳುಳ್ಳ ಸುಮಾರು 9.5 ಕಿಮೀ ಉದ್ದವಿರುವ 5,745 ಕೋಟಿ ವೆಚ್ಚದಲ್ಲಿ ಆರ್ ವಿ ನಗರ ಮಹದೇವಪುರ ಎಲಿವೇಟೆಡ್ ಪೇಸ್ 2 ಯೋಜನೆಯನ್ನು ಜಾರಿಗೆ ಕಾರ್ಯಕ್ರಮ ರೂಪಿಸಲಾಗಿದೆ ಎಂದೂ ಅವರು ಉಲ್ಲೇಖಿಸಿದರು.

ಡಬಲ್ ಡೆಕ್ಕರ್ ಮಾದರಿಯನ್ನು ಅಧ್ಯಯನ ಮಾಡಲು ರಾಜ್ಯದಿಂದ ಅಧಿಕಾರಿಗಳ ತಂಡವನ್ನು ನಾಗ್ಪುರಕ್ಕೆ ಕಳುಹಿಸಿದ್ದೆ. ಡಬಲ್ ಡೆಕ್ಕರ್ ನಿರ್ಮಾಣವಾಗಲು ಹಿಂದೆ ಇರುವ ಶಕ್ತಿ ಸಚಿವ ರಾಮಲಿಂಗಾರೆಡ್ಡಿ ಆಗಿದ್ದು, ಬೆಂಗಳೂರಿನಲ್ಲಿ ಎಲ್ಲೆಲ್ಲಿ ಈ ಯೋಜನೆ ಜಾರಿಯಾದರೂ ಅದನ್ನು ರಾಮಲಿಂಗಾರೆಡ್ಡಿ ಮಾಡೆಲ್ ಎಂದು ಹೇಳುತ್ತೇನೆ ಎಂದ ಅವರು, ಡಬಲ್ ಡೆಕ್ಕರ್ ಯೋಜನೆಯ ಉಪಯೋಗ ತಿಳಿಯಲು ಜನರು ಮೇಲೆ ಹಾಗೂ ಕೆಳಗೆ ಸಂಚರಿಸಿ ಅನುಭವ ಪಡೆಯಬೇಕು. ಈ ಯೋಜನೆ ವೀಕ್ಷಿಸಲು ನೂತನ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೂ ಮನವಿ ಮಾಡಲಾಗುವುದು. ಪ್ರಾಯೋಗಿಕ ಸಂಚಾರ ನಡೆಸಿದ ಮೇಲೆ ಒಂದಷ್ಟು ಕುಂದುಕೊರತೆಗಳು ತಿಳಿಯುತ್ತವೆ. ಇದೆಲ್ಲವನ್ನು ಬಗೆಹರಿಸಿ ಜನರ ಓಡಾಟಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಸತೀಶ್ ರೆಡ್ಡಿ, ರಾಮಮೂರ್ತಿ, ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X