ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ
![ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ](https://www.varthabharati.in/h-upload/2023/07/09/1165203-bommaivb.webp)
ಬೆಂಗಳೂರು, ಜು.19: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನಲ್ಲಿ ಕ್ರೈಂ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು.
ಬಹಳಷ್ಟು ಕೇಸ್ ಗಳು ಪೊಲೀಸ್ ಠಾಣೆಗಳಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ ಸರಕಾರ ಬಂದಮೇಲೆ ಮಧ್ಯವರ್ತಿಗಳು ನಿಯಂತ್ರಣ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಸರಕಾರ ಅವಕಾಶ ಕೊಡಬಾರದು. ಬೆಂಗಳೂರಿನಲ್ಲಿ ಕ್ಲಬ್ ಚಟುವಟಿಕೆಗಳು ಹೆಚ್ಚಾಗಿವೆ, ಹಫ್ತಾ ವಸೂಲಿ ತೀವ್ರವಾಗುತ್ತಿದೆ ಎಂದು ಆರೋಪಿಸಿದರು.
ಇಲ್ಲೇ ನೆಲೆಸಿ ಕ್ರಿಮಿನಲ್ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವಂತಹ ಕೆಲಸ ಆಗುತ್ತಿದೆ. ಅಂತಾರಾಷ್ಟ್ರೀಯ ಐಎಸ್ ಐ ಇವರ ಸಂಪರ್ಕದಲ್ಲಿದ್ದಾರೆ. ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಉಗ್ರರ ವಿರುದ್ದದ ಕೇಸ್ ಗಳನ್ನು ಕೂಡಲೇ ತನಿಖೆಗೆ ಎನ್ ಐಎಗೆ ವಹಿಸಬೇಕು. ಬೆಂಗಳೂರು ಸುರಕ್ಷತೆ ಬಗ್ಗೆ ಅಧಿಕಾರಿಗಳು ಫೀಲ್ಡ್ ಗೆ ಇಳಿಬೇಕು. ಇದರ ಹಿಂದೆ ಅಂತಾರಾಷ್ಟ್ರೀಯ ಸಂಸ್ಥೆಗಳ ಬೆಂಬಲವಿದೆ. ಬೆಂಗಳೂರಿನಲ್ಲಿ ಸ್ಫೋಟ ಮಾಡುವ ಹುನ್ನಾರ ಇದೆ. ಇದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿದರು.