ಬೆಂಗಳೂರು | ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರು ಬೆಂಕಿಗಾಹುತಿ: ವೀಡಿಯೊ ವೈರಲ್

ಬೆಂಗಳೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಕರಕಲಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜೆ.ಪಿ ನಗರ ಸಮೀಪ ವರದಿಯಾಗಿದೆ.
ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜೆ.ಪಿ ನಗರದಲ್ಲಿ ಚಾಲಕ ಮತ್ತು ಆತನ ಸ್ನೇಹಿತ ಎಲೆಕ್ಟ್ರಿಕ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ ಚಾಲಕ ಹಾಗೂ ಆತನ ಸ್ನೇಹಿತ ಕಾರಿನಿಂದ ಇಳಿದಿದ್ದಾರೆ.
ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ದೃಶ್ಯವು ಮೊಬೈಲ್ ನಲ್ಲಿ ಸೆರೆಯಾಗಿದೆ.
Next Story







