Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನ.29ರಿಂದ ಡಿ.1ರವರೆಗೆ ಬೆಂಗಳೂರು ಟೆಕ್...

ನ.29ರಿಂದ ಡಿ.1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ21 Nov 2023 11:32 PM IST
share
ನ.29ರಿಂದ ಡಿ.1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್: ಪ್ರಿಯಾಂಕ್ ಖರ್ಗೆ

ಬೆಂಗಳೂರು : ವಾರ್ಷಿಕ ಜಾಗತಿಕ ತಂತ್ರಜ್ಞಾನ ಕಾರ್ಯಕ್ರಮವಾದ ‘ಬೆಂಗಳೂರು ಟೆಕ್ ಸಮ್ಮಿಟ್’(ಬಿಟಿಎಸ್) ನ.29ರಿಂದ ಡಿ.1ರವರೆಗೆ ನಗರದ ಅರಮನೆ ಮೈದಾನದಲ್ಲಿ ಜರುಗಲಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಅವರು, ರಾಜ್ಯ ಸರಕಾರದ ಆಯೋಜನೆಯ ಈ ಸಮ್ಮಿಟ್‌ ನಲ್ಲಿ ಈ ವರ್ಷ, ಚಂದ್ರಯಾನ-ಇಸ್ರೋ-ಬಾಹ್ಯಾಕಾಶ ಉದ್ಯಮದ ಪ್ರದರ್ಶನ ಮಳಿಗೆ ಇರಲಿದೆ. ಈ ಮಳಿಗೆಯಲ್ಲಿ ಭಾರತದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರದರ್ಶನ ಮಾಡುವ ಉದ್ದೇಶವಿದೆ ಎಂದರು.

ಸಮ್ಮಿಟ್‌ ನಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಡೀಪ್ಟೆಕ್, ಮೆಟಾವರ್ಸ್ ಮತ್ತು ವೆಬ್ 3.0, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ಸ್, ಆನಿಮೇಶನ್, ವಿಶುವಲ್ ಎಫೆಕ್ಟ್, ಗೇಮಿಂಗ್, ಟೆಲಿಕಾಮ್ ಮತ್ತು 6ಜಿ ತಂತ್ರಜ್ಞಾನಗಳ ಮಾಹಿತಿಯನ್ನು ಪ್ರದರ್ಶನ ಮಾಡಲಾಗುತ್ತದೆ. ಈ ಪ್ರದರ್ಶನವು ಟೆಕ್ ಸಮ್ಮಿಟ್‌ ನಲ್ಲಿ ಈ ವರ್ಷದ ‘ಬ್ರೇಕಿಂಗ್ ಬೌಂಡರೀಸ್’ ಎಂಬ ಗುರಿಗೆ ಅನುಗುಣವಾಗಿರಲಿದ್ದು, ಆವಿಷ್ಕಾರ, ಪರಿವರ್ತನೆ ಹಾಗೂ ಅನ್ವೇಷಣೆಯ ಹಾದಿಯಲ್ಲಿ ಸಾಗಲಿದೆ ಎಂದು ಅವರು ತಿಳಿಸಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೆಚ್ಚಿಸಿಕೊಳ್ಳುತ್ತಿರುವ ಪ್ರಭಾವಕ್ಕೂ ಈ ಪ್ರದರ್ಶನ ಸಾಕ್ಷಿಯಾಗಲಿದೆ. ಜೊತೆಗೆ ಬಾಹ್ಯಾಕಾಶ ಸಂಶೋಧನೆಗೆ ಇಸ್ರೋ ನೀಡುತ್ತಿರುವ ಗಣನೀಯ ಕೊಡುಗೆಗಳ ಪ್ರದರ್ಶನವೂ ಇಲ್ಲಿ ಕಂಡುಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ನವೋದ್ಯಮಗಳು, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಖಾಸಗಿ ಉದ್ಯಮಗಳು ಚಂದ್ರಯಾನ-3 ಯೋಜನೆಯ ಯಶಸ್ಸಿನಲ್ಲಿ ವಹಿಸಿದ ಪಾತ್ರವನ್ನು ‘ಚಂದ್ರಯಾನ’ ಹೆಸರಿನ ಮಳಿಗೆ ಪ್ರದರ್ಶಿಸಲಿದೆ. ಈ ಪ್ರದರ್ಶನದ ಮೂಲಕ, ಬಾಹ್ಯಾಕಾಶ ಉದ್ಯಮದಲ್ಲಿ ಖಾಸಗಿಯವರ ಹೂಡಿಕೆಗೆ ಉತ್ತೇಜನ ನೀಡುವ ಸರಕಾರದ ಪ್ರಯತ್ನಕ್ಕೆ ಬಿಟಿಎಸ್-2023 ನೆರವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬಿಟಿಎಸ್-2023ಗೆ 30ಕ್ಕೂ ಹೆಚ್ಚು ದೇಶಗಳಿಂದ ಸುಮಾರು 400 ಭಾಷಣಕಾರರು ಆಗಮಿಸುವ ನಿರೀಕ್ಷೆ ಇದೆ. ಈ ಭಾಷಣಕಾರರು 75ಕ್ಕೂ ಹೆಚ್ಚು ಕಾರ್ಯಾಗಾರ, ಸಂವಾದಗಳಲ್ಲಿ ಪಾಲ್ಗೊಂಡು ಮಾತನಾಡಲಿದ್ದಾರೆ. 3 ಸಾವಿರ ಪ್ರತಿನಿಧಿಗಳು ಸೇರಿದಂತೆ ಪಾಲ್ಗೊಳ್ಳುವವರ ಒಟ್ಟು ಸಂಖ್ಯೆ 50 ಸಾವಿರ ದಾಟುವ ನಿರೀಕ್ಷೆಯಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರತಿ ವರ್ಷದಂತೆ ಈ ವರ್ಷವೂ ನವೋದ್ಯಮ, ಸಂಶೋಧನಾ ಲ್ಯಾಬ್, ಸಣ್ಣ ಮತ್ತು ಮಧ್ಯಮ ಉದ್ಯಮ, ಪ್ರಮುಖ ನಿಗಮಗಳು, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಅಸಾಧಾರಣ ಪ್ರತಿಭೆಗಳನ್ನು ಆಹ್ವಾನಿಸಿ ಇಲ್ಲಿ ಒಂದುಗೂಡಿಸಲು ಸಿದ್ಧತೆ ನಡೆಸಲಾಗಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಟೆಕ್ ಶೃಂಗಸಭೆಯಲ್ಲಿ ವಿಸ್ತಾರವಾದ ಜ್ಞಾನವನ್ನು ಪಡೆಯಬಹುದಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್, ಡೀಪ್ಟೆಕ್, ನವೋದ್ಯಮ ಮತ್ತು ಜೈವಿಕ ತಂತ್ರಜ್ಞಾನ ಕುರಿತಾದ ಸಮ್ಮೇಳನ, ಅಂತಾರಾಷ್ಟ್ರೀಯ ಪ್ರದರ್ಶನ, ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್, ಭಾರತ-ಯುಎಸ್ಎ ಟೆಕ್ ಸಭೆ, ಇಂಡಿಯಾ ಇನ್ನೋವೇಶನ್ ಅಲೈಯನ್ಸ್, ಬಿ2ಬಿ ಸಭೆಗಳು, ಎಸ್ಟಿಪಿಐ ಐಟಿ , ಸ್ಮಾರ್ಟ್ ಬಯೋ ಪ್ರಶಸ್ತಿ ಪ್ರದಾನ, ಯುನಿಕಾನ್ರ್ಸ್ ಸನ್ಮಾನ, ಗ್ರಾಮೀಣ ಐಟಿ ರಸಪ್ರಶ್ನೆ, ಜೈವಿಕ ತಂತ್ರಜ್ಞಾನ ರಸಪ್ರಶ್ನೆ, ಬಯೋ ಪೋಸ್ಟರ್ ಮುಂತಾದ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X