Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉನ್ನತ ಶಿಕ್ಷಣದಲ್ಲಿ ಮಹತ್ವದ ಕೊಡುಗೆ...

ಉನ್ನತ ಶಿಕ್ಷಣದಲ್ಲಿ ಮಹತ್ವದ ಕೊಡುಗೆ ನೀಡುತ್ತಿರುವ ಬೆಂಗಳೂರು ವಿವಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ17 Oct 2023 9:11 PM IST
share
ಉನ್ನತ ಶಿಕ್ಷಣದಲ್ಲಿ ಮಹತ್ವದ ಕೊಡುಗೆ ನೀಡುತ್ತಿರುವ ಬೆಂಗಳೂರು ವಿವಿ: ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಅ.17: ಬೆಂಗಳೂರು ವಿಶ್ವವಿದ್ಯಾನಿಲಯವು ಭಾರತದ ಆಧುನಿಕತೆ, ಇತಿಹಾಸ, ಸಂಸ್ಕೃತಿ ಮತ್ತು ನಾಗರಿಕತೆಯೊಂದಿಗೆ ಸಂಪರ್ಕ ಹೊಂದಿದೆ. ಮಾನವಿಕ, ಸಮಾಜ ವಿಜ್ಞಾನ, ಕಾನೂನು, ವಾಣಿಜ್ಯ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅನನ್ಯ ಮತ್ತು ಮಹತ್ವದ ಕೊಡುಗೆಗಳನ್ನು ನೀಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿರುವ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೆಂಗಳೂರು ವಿವಿಯ 58ನೆ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಪ್ರಮುಖ ರಾಜ್ಯವಾಗಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ ಎಂದರು.

2023ರಲ್ಲಿ ನ್ಯಾಕ್ ನಿಂದ ಎ++ ಗ್ರೇಡ್ ಅನ್ನು ನೀಡಲಾಗಿದೆ. ಇದು ವಿಶ್ವವಿದ್ಯಾಲಯದ ದೊಡ್ಡ ಸಾಧನೆಯಾಗಿದೆ. ವಿದ್ಯಾರ್ಥಿಗಳು ‘ನವ ಭಾರತ ಶ್ರೇಷ್ಠ ಭಾರತ’ ಮತ್ತು ‘ಸ್ವಾವಲಂಬಿ ಭಾರತ’ ನಿರ್ಮಾಣದಲ್ಲಿ ಭಾಗವಹಿಸಬೇಕು. ಯಶಸ್ವಿ ಉದ್ಯಮಿಯಾಗುವ ಕನಸನ್ನು ಪಾಲಿಸಬೇಕು. ಉದ್ಯೋಗಕ್ಕಾಗಿ ಇತರರ ಕಡೆಗೆ ನೋಡಬೇಡಿ, ನೀವೇ ಇತರರಿಗೆ ಉದ್ಯೋಗದಾತರಾಗಬೇಕು ಎಂದು ಕರೆ ನೀಡಿದರು.

ಶಿಕ್ಷಣವು ನಮಗೆ ತಾಂತ್ರಿಕ ಮತ್ತು ಉನ್ನತ ಕೌಶಲದ ಜ್ಞಾನವನ್ನು ಹಾಗೂ ವಿಚಾರಗಳನ್ನು ವ್ಯಕ್ತಪಡಿಸುವ ಸಾಮರ್ಥ್ಯವನ್ನು ಒದಗಿಸುತ್ತದೆ. ಯುವಕರು ನಮ್ಮ ದೇಶದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಯ ಪ್ರಮುಖ ಭಾಗವಾಗಿದ್ದಾರೆ. ಯುವಕರನ್ನು ನುರಿತರನ್ನಾಗಿ ಮಾಡುವ ಮೂಲಕ ಮಾತ್ರ, ನಾವು ವೋಕಲ್ ಫಾರ್ ಲೋಕಲ್ ದಿಕ್ಕಿನಲ್ಲಿ ಮುನ್ನಡೆಯಬಹುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಝರೋಧ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಕುಲಪತಿ ಡಾ.ಜಯಕರ್ ಎಸ್.ಎಂ. ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.‌

ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ

ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಆಕ್ಸ್‌ ಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನ ವಿದ್ಯಾರ್ಥಿನಿ ವಿನುತಾ ಜೆ., ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಉದಯ ಕುಮಾರ ಮುರಗೋಡ ಅವರಿಗೆ ತಲಾ 8 ಚಿನ್ನದ ಪದಕಗಳನ್ನು, ಜ್ಞಾನಭಾರತಿ ಆವರಣದ ಭೌತಶಾಸ್ತ್ರ ವಿದ್ಯಾರ್ಥಿನಿ ಅಸ್ಮಾ ಬಾನು ಡಬ್ಲ್ಯೂ. ಅವರಿಗೆ 7 ಚಿನ್ನದ ಪದಕ ಸೇರಿದಂತೆ ಒಟ್ಟು 24 ವಿದ್ಯಾರ್ಥಿಗಳಿಗೆ 147 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X