Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಂತಿ, ಸೌಹಾರ್ದಕ್ಕೆ ಬ್ಯಾರಿ ಸಮುದಾಯದ...

ಶಾಂತಿ, ಸೌಹಾರ್ದಕ್ಕೆ ಬ್ಯಾರಿ ಸಮುದಾಯದ ಕೊಡುಗೆ ಅಪಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರಿನಲ್ಲಿ ‘ಬ್ಯಾರೀಸ್ ಸೌಹಾರ್ದ ಭವನ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Sept 2023 5:59 PM IST
share
ಶಾಂತಿ, ಸೌಹಾರ್ದಕ್ಕೆ ಬ್ಯಾರಿ ಸಮುದಾಯದ ಕೊಡುಗೆ ಅಪಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಸೆ.30: ರಾಜ್ಯದಲ್ಲಿ ಶಾಂತಿ, ಸೌಹಾರ್ದಕ್ಕೆ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಬ್ಯಾರಿ ಭಾಷಿಕ ಸಮುದಾಯ ಸಾಕಷ್ಟು ಕೊಡುಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

ಶನಿವಾರ ನಗರದ ಎಚ್.ಬಿ.ಆರ್.ಲೇಔಟ್‌ನಲ್ಲಿ ʼದಿ ಬ್ಯಾರೀಸ್ ಅಸೋಸಿಯೇಶನ್ʼ ವತಿಯಿಂದ ಆಯೋಜಿಸಲಾಗಿದ್ದ ಬೆಂಗಳೂರಿನಲ್ಲಿ ‘ಬ್ಯಾರೀಸ್ ಸೌಹಾರ್ದ ಭವನ’ ಉದ್ಘಾಟನೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆ ವೇಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಎಲ್ಲ ಧರ್ಮದವರ ಜೊತೆ ಸ್ನೇಹಭಾವದಿಂದ ಇರುವ ಹಾಗೂ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುವ ಸೌಹಾರ್ದಯುತ ಗುಣ ಈ ಸಮುದಾಯಕ್ಕೆ ಇದೆ. ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆಗೆ ಬ್ಯಾರಿ ಭಾಷಿಕರು ನೀಡಿರುವ ಕೊಡುಗೆ ಸ್ಮರಣೀಯವಾದುದು. ಹೆಣ್ಣುಮಕ್ಕಳು ಒಡವೆ ಹಾಕಿಕೊಂಡರೆ ಸುಂದರವಾಗಿ ಕಾಣುತ್ತಾರೋ, ಬ್ಯಾರಿ ಭಾಷಿಕರು ಕನ್ನಡವನ್ನು ಸುಂದರಗೊಳಿಸಿದ್ದಾರೆ ಎಂದು ಅವರು ಹೇಳಿದರು.

ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ದೇವಾಲಯಗಳಿಗೆ ದಾನ- ಧರ್ಮ ಮಾಡಿದವರು ಬ್ಯಾರಿ ಭಾಷಿಕರು. ಮುಲ್ಕಿಯ ದುರ್ಗಾಪರಮೇಶ್ವರಿ ದೇವಸ್ಥಾನ ಕಟ್ಟಿಸಿದ್ದು ಬಪ್ಪ ಬ್ಯಾರಿ ಎಂದು ಇದೇ ವೇಳೆ ಶಿವಕುಮಾರ್ ಸ್ಮರಿಸಿಕೊಂಡರು.

ಬ್ಯಾರಿ ಸಮುದಾಯದ ಭವನಕ್ಕೆ ಸಹಾಯ ಮಾಡಲು ಅಥವಾ ನಿಮಗೆ ಆಶ್ವಾಸನೆಗಳನ್ನು ನೀಡಲು ಇಲ್ಲಿಗೆ ಬಂದಿಲ್ಲ, ಬದಲಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ಕಾರಣ ನಿಮ್ಮ ಋಣ ತೀರಿಸಲು ಬಂದಿದ್ದೇನೆ. ದೇಶದಲ್ಲಿ ಬದಲಾವಣೆಯ ಗಾಳಿ ಎಬ್ಬಿಸಿ, ಸಮರ್ಥವಾದ ಉತ್ತರ ನೀಡಲು ಕಾರಣರಾಗಿದ್ದೀರಿ ಎಂದು ಅವರು ತಿಳಿಸಿದರು.

ಹುಟ್ಟಿದ ಊರಿನಲ್ಲೇ ಉದ್ಯೋಗ ಸೃಷ್ಟಿ ಮಾಡಿ: ಬಿಜೆಪಿ ಸರಕಾರ ಇದ್ದ ವೇಳೆ ಹೂಡಿಕೆದಾರರ ಸಮಾವೇಶದ ಮೂಲಕ 10 ಲಕ್ಷ ಕೋಟಿ ರೂ.ಬಂಡವಾಳ ರಾಜ್ಯಕ್ಕೆ ಹರಿದು ಬಂದಿತು ಎಂದು ಹೇಳಿದ್ದರು. ಆದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಒಬ್ಬರೂ ಬಂದಿರಲಿಲ್ಲ. ಗಲ್ಫ್ ಸೇರಿದಂತೆ ಹೊರದೇಶಗಳಿಗೆ ಹೋಗದೆ, ಹುಟ್ಟಿದ ಊರಿನಲ್ಲಿ ಉದ್ಯೋಗ ಸೃಷ್ಟಿ ಮಾಡಿ, ಪ್ರತಿಭಾ ಪಲಾಯನ ರಾಜ್ಯದ ಅಭಿವೃದ್ಧಿಗೆ ಮಾರಕ ಎಂದು ಶಿವಕುಮಾರ್ ತಿಳಿಸಿದರು.

ಮಂಗಳೂರು ಹೂಡಿಕೆದಾರರ ಸ್ವರ್ಗ. ಎಲ್ಲ ರೀತಿಯಲ್ಲೂ ಅಲ್ಲಿ ಅವಕಾಶವಿದ್ದು, ಸರಕಾರ ನಿಮ್ಮ ಬೆನ್ನಿಗೆ ನಿಲ್ಲುತ್ತದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಮಾಡಿ, ಕೋಮು ಗಲಭೆಯ ಪ್ರಯೋಗಶಾಲೆ ಎನ್ನುವ ಹೆಸರು ಅಳಿಸಿ ಹಾಕಿ. ಬೆಂಗಳೂರಿನಲ್ಲಿ ಮಲೇಷ್ಯಾ ಮಾದರಿಯಲ್ಲಿ ಟ್ವಿನ್ ಟವರ್ ಅನ್ನು ಮೊದಲು ಕಟ್ಟಿದವರೇ ಸೈಯದ್ ಮುಹಮ್ಮದ್ ಬ್ಯಾರಿ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾರಿ ಸಮುದಾಯದ ಬೆಳವಣಿಗೆಗೆ ನಿವೇಶನಗಳ ಅಗತ್ಯವಿದೆ ಎಂದು ಮನವಿ ಮಾಡಿದ್ದೀರಿ, ಕಾನೂನಿನ ಚೌಕಟ್ಟಿನಲ್ಲಿ ಏನು ಸಾಧ್ಯವೋ ಸಹಾಯ ಮಾಡಲಾಗುವುದು. ಮುಖ್ಯಮಂತ್ರಿಗಳು ಕೈಗೆ ಪೆನ್ ಕೊಟ್ಟಿದ್ದಾರೆ, ಇದರಿಂದ ಏನು ಬೇಕಾದರೂ ಮಾಡಬಹುದು. ನಾವು ಸ್ನೇಹ ಸಂಪಾದನೆ ಮಾಡೋಣ. ನನ್ನ ಮನೆ ಹಾಗೂ ಮುಖ್ಯಮಂತ್ರಿಗಳ ಮನೆ ಬಾಗಿಲು ನಿಮಗಾಗಿ ಸದಾ ತೆರೆದಿರುತ್ತದೆ ಎಂದು ಶಿವಕುಮಾರ್ ಹೇಳಿದರು.

ಸ್ಪೀಕರ್ ಆಗಿರುವಂತಹ ಯು.ಟಿ.ಖಾದರ್ ಅವರಿಗೆ ಮಂತ್ರಿ ಸ್ಥಾನ ನೀಡಿ ಎಂದು ನೀವು ಮನವಿ ಮಾಡಿದ್ದೀರಿ, ಅವರು ನಮಗಿಂತ ಎತ್ತರದ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಎಸ್.ಎಂ.ಕೃಷ್ಣ, ಜಗದೀಶ್ ಶೆಟ್ಟರ್ ಸ್ಪೀಕರ್ ಆಗಿದ್ದರು. ಯಾರ ಹಣೆಯಲ್ಲಿ ಏನು ಬರೆದಿರುತ್ತದೆ ಎಂದು ಯಾರಿಗೂ ತಿಳಿದಿಲ್ಲ, ನೀವು ನಮ್ಮನ್ನೆಲ್ಲಾ ಮೀರಿಸಿ ಮುಂದೊಂದು ದಿನ ಬೆಳೆಯಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹ್ಮದ್, ಬ್ಯಾರೀಸ್ ಸೌಹಾರ್ದ ಭವನ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ, ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಂ.ಫಾರೂಕ್, ಉಮರ್ ಟಿ.ಕೆ., ಜಿ.ಎ.ಬಾವ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X