Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅದಕ್ಷತೆ, ಸ್ವಜನಪಕ್ಷಪಾತದಿಂದ ಪರಿಷತ್...

ಅದಕ್ಷತೆ, ಸ್ವಜನಪಕ್ಷಪಾತದಿಂದ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ : ಯತ್ನಾಳ್

ವಾರ್ತಾಭಾರತಿವಾರ್ತಾಭಾರತಿ26 Jun 2026 6:27 PM IST
share
ಅದಕ್ಷತೆ, ಸ್ವಜನಪಕ್ಷಪಾತದಿಂದ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ : ಯತ್ನಾಳ್

ಬೆಂಗಳೂರು : ಅದಕ್ಷತೆ, ಸ್ವಜಪಕ್ಷಪಾತ, ರಾಜ್ಯ ಬಿಜೆಪಿ ನಾಯಕರಲ್ಲಿ ಸಮನ್ವಯದ ಕೊರತೆ, ಅಡ್ಜಸ್ಟ್ಮೆಂಟ್ ರಾಜಕಾರಣದಿಂದ ಬಿಜೆಪಿಗೆ ಸೋಲಾಗಿದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ವಿಧಾನ ಪರಿಷತ್ ಚುನಾವಣೆಯ ಹೀನಾಯ ಸೋಲಿನಿಂದ ನಗೆಪಾಟಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ತಂಡವು ನಾನು ಕಾಂಗ್ರೆಸ್‍ಗೆ ಮತ ಚಲಾಯಿಸಿದ್ದೇನೆ ಎಂಬ ಸುಳ್ಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದೆ. ಕೈಲಾಗದವರು ಮೈ ಪರಚಿಕೊಂಡರು ಎಂಬಂತೆ ತಮಗೆ ನೀಡಿದ ಜವಾಬ್ಧಾರಿಯಲ್ಲಿ ವಿಫಲರಾದ ‘ಅಡ್ಜಸ್ಟ್‌ ಮೆಂಟ್’ ಗಿರಾಕಿಗಳು ತಮ್ಮ ತಪ್ಪನ್ನು ಮರೆಮಾಚಲು ನನ್ನ ಹೆಸರು ತಳುಕು ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೈಲಾಗದವನಿಗೆ ಕತ್ತೆ ಹೊರುವ ಕೆಲಸ ಎಂಬ ಗಾದೆ ಮಾತಿನಂತೆ ಕೊಟ್ಟ ಕೆಲಸವನ್ನು ಮಾಡದೇ ಬೇರೆ ನಾಯಕರ ಮೇಲೆ ತಪ್ಪು ಹೊರೆಸುವ ಕಾಯಕದಲ್ಲಿ ‘ಅಡ್ಜಸ್ಟ್‌ ಮೆಂಟ್’ ಗಿರಾಕಿಗಳು ನಿರತರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪರ ಮತ ಚಲಾಯಿಸಿರುವುದಿಲ್ಲ. ಭಾರತೀಯ ಜನತಾ ಪಕ್ಷದ ಚಿಹ್ನೆಯಡಿ ಆಯ್ಕೆಯಾಗಿರುವ ನಾನು ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿರುತ್ತೇನೆ. ಕೆಲಸವಿಲ್ಲದ ಕೆಲವು ತಿಳಿಗೇಡಿಗಳು ಹಾಗೂ ಅವರ ಪಟಾಲಂ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ.

ಅದಕ್ಷತೆ, ಸ್ವಜಪಕ್ಷಪಾತ, ರಾಜ್ಯ ಬಿಜೆಪಿ ನಾಯಕರಲ್ಲಿ ಸಮನ್ವಯದ ಕೊರತೆ, ‘ಅಡ್ಜಸ್ಟ್‌ ಮೆಂಟ್’ ರಾಜಕಾರಣದಿಂದ ಬಿಜೆಪಿಗೆ ಸೋಲಾಗಿದೆ. ಮೀರ್ ಸಾದಿಕ್‍ಗಳು ಬಿಜೆಪಿ ಪಕ್ಷದಲ್ಲೇ ಇದ್ದಾರೆ. ಬೇರೆಯವರ ಮೇಲೆ ಬೊಟ್ಟು ತೋರಿಸುತ್ತಿರುವ ನಾಯಕರಿಂದಲೇ ಪಕ್ಷ ಇಂದು ಸೋಲಿನ ಮೇಲೆ ಸೋಲು ಕಾಣುತ್ತಿದೆ ಎಂದು ತಿಳಿಸಿದ್ದಾರೆ.

ಬೇರೆಯವರ ಮೇಲೆ ಬೊಟ್ಟು ತೋರಿಸುವ ಮುನ್ನ ಬಿಜೆಪಿ ಪಕ್ಷವನ್ನು ಸೋಲಿಸಿದ ನಯವಂಚಕರು ಯಾರು ಮತ್ತು ಅವರ ಬೆನ್ನ ಹಿಂದೆ ಇದ್ದವರು ಯಾರು ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

Tags

Basanagowda Patil Yatnal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X