Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಸವರಾಜ್ ಹೊರಟ್ಟಿ ರಾಜೀನಾಮೆ ಅಂಗೀಕಾರ

ಬಸವರಾಜ್ ಹೊರಟ್ಟಿ ರಾಜೀನಾಮೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ7 Aug 2026 9:45 PM IST
share
ಬಸವರಾಜ್ ಹೊರಟ್ಟಿ ರಾಜೀನಾಮೆ ಅಂಗೀಕಾರ
ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಪಡೆದಿರುವುದು ನನಗೆ ಬೇಸರ ಆಗಿದೆ ಎಂದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಅವರ ರಾಜೀನಾಮೆಯನ್ನು ಶುಕ್ರವಾರ ಅಂಗೀಕಾರ ಮಾಡಲಾಗಿದೆ.

ಉಪಸಭಾಪತಿ ಇಲ್ಲದ ಹಿನ್ನೆಲೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿರುವ ಬಸವರಾಜ ಹೊರಟ್ಟಿ ಅವರು, ‘ಸ್ವ ಇಚ್ಛೆಯಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

ಈ ಮೊದಲು ಅವರು, ಆ.14ರಂದು ರಾಜೀನಾಮೆ ಕೊಡಲು ತೀರ್ಮಾನಿಸಿದ್ದರು. ಆದರೆ, ಶುಕ್ರವಾರ ಮತ್ತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದಲ್ಲಿನ ಸಭಾಪತಿ ಕೊಠಡಿಗೆ ಆಗಮಿಸಿ ಮಾತುಕತೆ ನಡೆಸಿದ ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಇಂದೇ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಇತ್ತ ರಾಜೀನಾಮೆ ಸಲ್ಲಿಸಲು ಉಪಸಭಾಪತಿ ಇಲ್ಲದಿರುವ ಕಾರಣ, ವಿಧಾನ ಪರಿಷತ್ತಿನ ಕಾರ್ಯದರ್ಶಿಗೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವ ಕಾರ್ಯದರ್ಶಿ, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ ಬಳಿ ಅದನ್ನು ಅಂಗೀಕಾರ ಮಾಡಿದ್ದು, ‘ಸಭಾಪತಿ ಹುದ್ದೆ ತೆರವಾಗಿದೆ’ ಎಂದು ಅಧಿಸೂಚನೆ ಹೊರಡಿಸಿದ್ದಾರೆ.

ರಾಜೀನಾಮೆ ಬಳಿಕ ಪ್ರತಿಕ್ರಿಯಿಸಿದ ಬಸವರಾಜ ಹೊರಟ್ಟಿ ಅವರು, ‘ಇಂದೇ ರಾಜೀನಾಮೆ ಬೇಕೆಂದು ಕೇಳಿದರು. ಅದಕ್ಕಾಗಿ ಇಂದೇ ಸಲ್ಲಿಕೆ ಮಾಡಿದ್ದೇನೆ. ಆದರೆ, ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಪಡೆದಿರುವುದು ನನಗೆ ಸ್ವಲ್ಪ ಬೇಸರ ಆಗಿದೆ’ ಎಂದು ನುಡಿದರು.

ಇನ್ನೂ, ಸಭಾಪತಿ ಸ್ಥಾನದ ಕುರಿತು ಒಂದು ವಾರದಿಂದ ನಡೆದಿದ್ದ ಈ ಪ್ರಹಸನ ಇಂದು ಅಂತ್ಯಗೊಂಡಂತಾಗಿದ್ದು, ಸಾಂವಿಧಾನಿಕ ಬಿಕ್ಕಟ್ಟು ಎದುರಾಗದಂತೆ ಮತ್ತು ಯಾವುದೇ ಸಮಸ್ಯೆ ಸೃಷ್ಟಿಯಾಗದಂತೆ ಹೊರಟ್ಟಿಯವರು ಶಾಂತಚಿತ್ತದಿಂದಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮಾತಿನಂತೆ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ನಂತರ ಪರಿಷತ್‍ನಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಗಳಿಸಿದೆ. ಅದೇ ರೀತಿ, ತನ್ನ ಪಕ್ಷದ ಸದಸ್ಯರೊಬ್ಬರನ್ನು ಸಭಾಪತಿಯನ್ನಾಗಿ ನೇಮಿಸಲು ನಿರ್ಧರಿಸಿದ್ದು, ಈಗಾಗಲೇ ಆ ಸ್ಥಾನಕ್ಕೆ ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಸಲೀಂ ಅಹ್ಮದ್ ಅವರ ಹೆಸರನ್ನು ಅಂತಿಮಗೊಳಿಸಿದೆ.


ಆ.14ರ ವರೆಗೂ ಹೊರಟ್ಟಿ ಮುಂದುವರೆಯಲಿ: ಡಿ.ಕೆ.ಶಿವಕುಮಾರ್

ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆ ಬದಲಿ ವ್ಯವಸ್ಥೆ ಆಗುವವರೆಗೂ ಆ.14ರವರೆಗೂ ಅವರನ್ನೆ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದು, ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್ತು ಇತಿಹಾಸದಲ್ಲೇ ಅತ್ಯಂತ ಹಿರಿಯ ನಾಯಕರಾಗಿದ್ದು, ಅವರು ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ. ಆ.13 ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದ್ದ ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಅಧ್ಯಕ್ಷ, ಉಪಾಧ್ಯಕ್ಷರನ್ನ ಆಯ್ಕೆ ಮಾಡಿ ನಂತರ ನಮ್ಮ ಸದಸ್ಯರೆಲ್ಲರಿಗೂ ಕೃತಜ್ಞತೆ ಸಲ್ಲಿಸುವ ಆಸೆಯನ್ನು ಬಸವರಾಜ ಹೊರಟ್ಟಿಯವರು ಇಟ್ಟುಕೊಂಡಿದ್ದಾರೆ. ಅವರ ಭಾವನೆಗಳನ್ನು ನಾವು ಒಪ್ಪಿಕೊಂಡಿದ್ದೇವೆ, ಗೌರವಿಸುತ್ತೇವೆ ಎಂದರು.

Tags

Basavaraj HorattiResignationKarnataka Legislative Council
share
ವಾರ್ತಾಭಾರತಿ
ವಾರ್ತಾಭಾರತಿ
Next Story
X