Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರಕಾರ ಎಸ್‌ಸಿ-ಎಸ್‌ಟಿ ಮೀಸಲಾತಿ...

ರಾಜ್ಯ ಸರಕಾರ ಎಸ್‌ಸಿ-ಎಸ್‌ಟಿ ಮೀಸಲಾತಿ ಕಡಿತಗೊಳಿಸಿರುವುದರ ವಿರುದ್ದ ಜನಜಾಗೃತಿ ಮೂಡಿಸಲು ತೀರ್ಮಾನ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ12 May 2026 3:07 PM IST
share
ರಾಜ್ಯ ಸರಕಾರ ಎಸ್‌ಸಿ-ಎಸ್‌ಟಿ ಮೀಸಲಾತಿ ಕಡಿತಗೊಳಿಸಿರುವುದರ ವಿರುದ್ದ ಜನಜಾಗೃತಿ ಮೂಡಿಸಲು ತೀರ್ಮಾನ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಹೆಚ್ಚಳ ಮಾಡಿದ್ದ ಮೀಸಲಾತಿಯನ್ನು ರಾಜ್ಯ ಕಾಂಗ್ರೆಸ್ ಸರಕಾರ ರದ್ದು ಮಾಡಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ನಿವಾಸದಲ್ಲಿ ನಡೆದ ಬಿಜೆಪಿಯ ಎಸ್‌ಸಿ-ಎಸ್‌ಟಿ ಮುಖಂಡರ ಜೊತೆಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಎಸ್‌ಸಿ-ಎಸ್‌ಟಿ ಮತ್ತು ಒಬಿಸಿ ಜನಾಂಗಕ್ಕೆ ಬಹಳ ದೊಡ್ಡ ಅನ್ಯಾಯ ಮಾಡುತ್ತಿದೆ. ಅಹಿಂದ ಹೆಸರಲ್ಲಿ ರಾಜಕಾರಣ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಯಾವ ವರ್ಗದಿಂದ ಬೆಂಬಲ ಪಡೆದಿದ್ದಾರೆ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ.

ಎಸ್‌ಸಿ-ಎಸ್‌ಟಿ ಒಳಮೀಸಲಾತಿ ಗೊಂದಲದ ಬಗ್ಗೆ ಸಂವಿಧಾನ ಪೀಠ ರಾಜ್ಯ ಸರಕಾರಗಳಿಗೆ ಅಧಿಕಾರ ಕೊಟ್ಟಿದೆ ಅದನ್ನು ತೆಲಂಗಾಣ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳು ಜಾರಿ ಮಾಡಿವೆ. ಒಳಮೀಸಲಾತಿ ಜಾರಿ ಮಾಡಲು ರಾಜ್ಯ ಕಾಂಗ್ರೆಸ್ ಗೆ ಹಾಗೂ ಅಲ್ಲಿನ ದಲಿತ ನಾಯಕರಿಗೆ ಅಸಕ್ತಿ ಇಲ್ಲ ಎಂದು ಆರೋಪಿಸಿದರು.

ಬಿಜೆಪಿ ಅವಧಿಯಲ್ಲಿ ಹೆಚ್ಚಳ :

ಮೀಸಲಾತಿ ಹೆಚ್ಚಳದ ಕುರಿತು ಸಮ್ಮಿಶ್ರ ಸರಕಾರದ ಅವಧಿಯಲ್ಲಿ ನಾಗಮೋಹನ್ ದಾಸ್ ವರದಿ ಬಂದಿದೆ. ನಾನು ಸಿಎಂ ಆಗಿದ್ದಾಗ ಎಸ್ಸಿ ಸಮುದಾಯಕ್ಕೆ ಶೇ 15% ರಿಂದ 17% ಹಾಗೂ ಎಸ್ಟಿ ಸಮುದಾಯಕ್ಕೆ ಶೇ 3% ರಿಂದ ಶೇ 7% ಮೀಸಲಾತಿ ಹೆಚ್ಚಿಗೆ ಮಾಡಿದ್ದೇನೆ. ಇದರಿಂದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಸುಮಾರು ನಾಲ್ಕು ಸಾವಿರ ಎಂಜನೀಯರಿಂಗ್ ಹಾಗೂ ಸುಮಾರು ನಾಲ್ಕು ನೂರು ವೈದ್ಯಕೀಯ ಸೀಟುಗಳು ಹೆಚ್ಚಿಗೆ ಲಭ್ಯವಾಗಿವೆ. ಈ ಆದೇಶ ಜಾರಿಯಾಗಿ ನಾಲ್ಕು ವರ್ಷ ಆಗಿದೆ ಎಂದು ಹೇಳಿದರು.

ಗೊಂದಲ ಸೃಷ್ಟಿ :

ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರಿಂ ಕೋರ್ಟ್ ಆದೇಶ, ನಾಗಮೋಹನ ದಾಸ್ ವರದಿ, ಜೆ.ಸಿ.ಮಾಧುಸ್ವಾಮಿ ಸಮಿತಿ ವರದಿ ಯಾವುದನ್ನೂ ಜಾರಿ ಮಾಡದೇ ಗೊಂದಲ ಸೃಷ್ಟಿ ಮಾಡಿದ್ದಾರೆ. ಈಗ ಕೋರ್ಟ್ ನಲ್ಲಿ ಶೇ 15% ರಷ್ಟು ಮೀಸಲಾತಿ ಜಾರಿ ಮಾಡುತ್ತೇವೆ ಎಂದು ತಾವೇ ಬರೆದು ಕೊಟ್ಟಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಎಸ್‌ಸಿ-ಎಸ್‌ಟಿ ಮೀಸಲಾತಿ ಪ್ರಮಾಣ 17% ಮತ್ತು 7% ಅಂತ ಕಾನೂನು ಮಾಡಿದ್ದಾರೆ. ಇನ್ನೊಂದು ಕಡೆ ಶೇ 15% ಮತ್ತು ಶೇ 3% ರಷ್ಟು ಮೀಸಲಾತಿ ಜಾರಿ ಮಾಡಿತ್ತಾರೆ. ಇದನ್ನು ದಲಿತ ಸಮುದಾಯಗಳು ಅರ್ಥ ಮಾಡಿಕೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ಪಕ್ಷದ ನಾಯಕರು ತೀರ್ಮಾನ ಮಾಡಿದ್ದಾರೆ‌. ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಪ್ರತಿಪಕ್ಷದ ನಾಯಕರು, ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಎಲ್ಲರೂ ಜಾಗೃತಿ ಮೂಡಿಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.

ತಪ್ಪು ಮುಚ್ಚಿಕೊಳ್ಳಲು ಒತ್ತಡ :

ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸುವ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಶೆಡ್ಯೂಲ್ 9 ನಲ್ಲಿ ಸೇರಿಸಿದರೂ ಅದನ್ನು ಪ್ರಶ್ನೆ ಮಾಡಲು ಅವಕಾಶ ಇದೆ. ರಾಜ್ಯ ಸರಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಶೆಡ್ಯೂಲ್ 9 ಗೆ ಸೇರಿಸುವಂತೆ ಒತ್ತಡ ಹೇರುವ ಹುನ್ನಾರ ಮಾಡಿದ್ದಾರೆ. ಇದರ ವಿರುದ್ದ ಜಾಗೃತಿ ಮೂಡಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಮಾಜಿ ಸಚಿವ ಎನ್. ಮಹೇಶ್ ಹಾಜರಿದ್ದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X