Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ...

ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ : ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ13 Sept 2025 8:05 PM IST
share
ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ : ಬಸವರಾಜ ಹೊರಟ್ಟಿ
ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಿಭಾಗದ 11ನೆ ಸಮ್ಮೇಳನ

ಬೆಂಗಳೂರು, ಸೆ.13: ವಿಧಾನ ಮಂಡಲಗಳಲ್ಲಿ ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಿಭಾಗದ 11ನೆ ಸಮ್ಮೇಳನದಲ್ಲಿ ‘ವಿಧಾನಮಂಡಲದ ಚರ್ಚೆಗಳು ಜನರ ವಿಶ್ವಾಸ ಗಳಿಸುವುದರೊಂದಿಗೆ ಜನರ ಅಶೋತ್ತರಗಳನ್ನು ಈಡೆರಿಸುವಲ್ಲಿಯ ಪಾತ್ರ’ ಕುರಿತ ವಿಚಾರ ಮಂಡಿಸಿ ಅವರು ಮಾತನಾಡಿದರು.

ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಕಾಳಜಿಗಳನ್ನು ಚರ್ಚಿಸಲು, ಸರಕಾರಿ ನೀತಿಗಳನ್ನು ಪರಿಶೀಲಿಸಲು ಮತ್ತು ಕಾನೂನು ರಚನೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಧಾನ ಮಂಡಲ ಪರಿಣಾಮಕಾರಿ ವೇದಿಕೆಯಾಗಿದೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

ಸದನವು ಕ್ರಮಬದ್ಧವಾಗಿಲ್ಲದಿದ್ದಾಗ ಮತ್ತು ಅರ್ಥಪೂರ್ಣ ಚರ್ಚೆಯಿಲ್ಲದೆ ಕಾನೂನುಗಳನ್ನು ಅಂಗೀಕರಿಸಿದಾಗ ನಮ್ಮ ಮೇಲಿನ ಜನರ ನಂಬಿಕೆಗಳು ಕ್ಷೀಣಿಸುವ ಸಂದರ್ಭ ಬರಬಹುದೆನ್ನುವ ಎಚ್ಚರಿಕೆ ಜನಪ್ರತಿನಿಧಿಗಳಿಗಿರಬೇಕು ಎಂದು ಅವರು ಹೇಳಿದರು.

ಸದನ ಕಲಾಪಗಳ ಪ್ರಧಾನ ಅಂಶಗಳಾದ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಚರ್ಚೆ, ಅರ್ಧಗಂಟೆಯ ಚರ್ಚೆ, ಕಿರುಸೂಚನೆ ಪ್ರಶ್ನೆಗಳು ಮತ್ತು ಸದನದ ಗಮನ ಸೆಳೆಯುವ ಪ್ರಸ್ತಾವಗಳ ಮೂಲಕ ಪ್ರತಿಯೊಬ್ಬ ಸದಸ್ಯರು ಸದನದಲ್ಲಿನ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಮೂಲಕ ಸುಗಮ ಮತ್ತು ರಾಜತಾಂತ್ರಿಕ ಮಾರ್ಗಗಳನ್ನು ಪ್ರತಿನಿಧಿಗಳು ಯಾವಾಗಲೂ ಆಯ್ಕೆ ಮಾಡಿಕೊಳ್ಳಬೇಕು ಎಂದು ಬಸವರಾಜ ಹೊರಟ್ಟಿ ತಿಳಿಸಿದರು.

ಶಾಸಕಾಂಗ ಸದನಗಳಲ್ಲಿ ನನ್ನ 45 ವರ್ಷಗಳ ಅವಧಿಯಲ್ಲಿ ವಿಧಾನಪರಿಷತ್ತಿನ ಸಭಾಪತಿಯಾಗಿ 3ನೆ ಬಾರಿಗೆ ಪಡೆದ ಅನುಭವದ ಮೂಲಕ ಹೇಳುವುದಾದರೆ, ಸಾರ್ವಜನಿಕ ಪ್ರತಿನಿಧಿಗಳು ಜನಪರ ಮಹತ್ವದ ವಿಷಯಗಳಿಗೆ ಮಹತ್ವ ನೀಡುವುದರ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದು ಅವರು ನುಡಿದರು.

ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಕಳೆದ ಮೂರು ದಿನಗಳಿಂದ ನಡೆದ 11ನೆ ಕಾಮನ್‍ವೆಲ್ತ್ ಸಂಸದೀಯ ಸಂಘ(ಸಿಪಿಎ) ಭಾರತ ವಲಯದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸತತ 45 ವರ್ಷಗಳಿಂದ ರಾಜ್ಯ ವಿಧಾನಪರಿಷತ್ ಸದಸ್ಯರಾಗಿ ಹಾಗೂ ಹಲವು ಬಾರಿ ಸಭಾಪತಿಗಳಾಗಿ ಸೇವೆ ಸಲ್ಲಿಸಿ ಹಲವಾರು ದಾಖಲೆಗಳಿಗೆ ಭಾಜನರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X