Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಐ, ಕ್ವಾಂಟಂ ತಂತ್ರಜ್ಞಾನ, ಸೈಬರ್...

ಎಐ, ಕ್ವಾಂಟಂ ತಂತ್ರಜ್ಞಾನ, ಸೈಬರ್ ಸೆಕ್ಯೂರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ವಾರ್ತಾಭಾರತಿವಾರ್ತಾಭಾರತಿ15 April 2025 6:32 PM IST
share
ಎಐ, ಕ್ವಾಂಟಂ ತಂತ್ರಜ್ಞಾನ, ಸೈಬರ್ ಸೆಕ್ಯೂರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಬೆಂಗಳೂರು : ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ಮಂಗಳವಾರ ವಿಧಾನಸೌಧದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದವು.

ರಾಜ್ಯ ಸರಕಾರದ ಪರವಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಬವೇರಿಯಾ ಪರವಾಗಿ ಅಲ್ಲಿಯ ಚಾನ್ಸಲರಿ ಮುಖ್ಯಸ್ಥ ಡಾ.ಪ್ಲೋರಿಯನ್ ಹರ್ಮನ್ ಸಹಿ ಹಾಕಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಈ ಒಡಂಬಡಿಕೆಯು ಮುಂದಿನ 5 ವರ್ಷಗಳ ಕಾಲ ಚಾಲ್ತಿಯಲ್ಲಿರುತ್ತದೆ. ಇದರ ಅನ್ವಯ ಇಂಡಸ್ಟ್ರೀ 4.0, ವೈಮಾಂತರಿಕ್ಷ, ವೈದ್ಯಕೀಯ ತಂತ್ರಜ್ಞಾನ, ಪರಿಸರ ತಂತ್ರಜ್ಞಾನ, ನಗರ ಮೂಲಸೌಕರ್ಯ, ಕೌಶಲ್ಯಾಭಿವೃದ್ಧಿ ಮತ್ತು ನೇಮಕ, ಉದ್ಯಮಶೀಲತೆ, ಸೈಬರ್ ಸೆಕ್ಯೂರಿಟಿ ಕ್ಷೇತ್ರಗಳಲ್ಲೂ ಪರಸ್ಪರ ಸಹಕಾರ ಸ್ಥಾಪನೆಯಾಗಲಿದೆ ಎಂದರು.

ಬವೇರಿಯಾದ ಸಚಿವರಿಗೆ ರಾಜ್ಯದ ಕೈಗಾರಿಕಾ ಕಾರ್ಯಪರಿಸರದ ಬಗ್ಗೆ ತಿಳಿಸಿ, ಹೂಡಿಕೆಗೆ ಅವಕಾಶವಿರುವ ಕ್ಷೇತ್ರಗಳತ್ತ ಗಮನ ಸೆಳೆಯಲಾಯಿತು. ಜತೆಗೆ ಕೌಶಲ್ಯಾಭಿವೃದ್ಧಿಯಂಥ ನಿರ್ದಿಷ್ಟ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವರ್ಕಿಂಗ್ ಗ್ರೂಪ್ ರಚಿಸುವ ಬಗ್ಗೆ ತೀರ್ಮಾನಿಸಲಾಯಿತು. ಬವೇರಿಯಾ ಪ್ರಾಂತ್ಯವು 2007ರಿಂದಲೂ ರಾಜ್ಯದೊಂದಿಗೆ ವಾಣಿಜ್ಯ ಸಂಬಂಧವನ್ನು ಹೊಂದಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

ರಾಜ್ಯದಲ್ಲಿ ಬವೇರಿಯಾ ಪ್ರಾಂತೀಯ ಸರಕಾರದ ಪ್ರತಿನಿಧಿ ಮಟ್ಟದ ಕಚೇರಿ 2001ರಿಂದಲೂ ಕಾರ್ಯ ನಿರ್ವಹಿಸುತ್ತಿದೆ. ಈಗಿನ ಹೊಸ ಒಡಂಬಡಿಕೆಯಿಂದ ರಾಜ್ಯ ಮತ್ತು ಬವೇರಿಯಾ ನಡುವಿನ ಬಾಂಧವ್ಯ ಮತ್ತೊಂದು ಮಜಲನ್ನು ಕಾಣಲಿದೆ. ವಿಜ್ಞಾನ ಮತ್ತು ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ 2013ರಿಂದಲೂ ದ್ವಿಪಕ್ಷೀಯ ಸಹಕಾರವಿದೆ. ಇನ್ನು ಮುಂದೆ ಬಾಹ್ಯಾಕಾಶ, ಎಲೆಕ್ಟ್ರಾನಿಕ್ಸ್ ಮತ್ತು ರಕ್ಷಣಾ ವಲಯಗಳ ಬಗ್ಗೆ ಗಮನ ಹರಿಸಲು ಹೆಚ್ಚಿನ ಅವಕಾಶವಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಜ್ಯದ ಐಟಿ-ಬಿಟಿ ಇಲಾಖೆಯು ನವೋದ್ಯಮ ಕ್ಷೇತ್ರದಲ್ಲಿ ಜರ್ಮನಿಯೊಂದಿಗೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಸಂಶೋಧನೆ, ಯೂನಿಕಾರ್ನ್ ಶ್ರೇಣಿಯ ನವೋದ್ಯಮಗಳು ಸಮೃದ್ಧವಾಗಿವೆ. ಯಾವುದಾದರೂ ವಲಯದಲ್ಲಿ ರಾಜ್ಯದ ಯುವಜನರು ಜರ್ಮನ್ ಭಾಷೆ ಕಲಿಯುವುದು ಅಗತ್ಯವೆನಿಸಿದರೆ ಅದಕ್ಕೂ ವ್ಯವಸ್ಥೆ ಮಾಡಲಾಗುವುದು. ಬವೇರಿಯಾ ಪ್ರಾಂತೀಯ ಸರಕಾರವು ಈ ಬಗ್ಗೆ ನಮ್ಮ ಗಮನಕ್ಕೆ ತರಬಹುದು ಎಂದಿದರು.

ಈ ವೇಳೆಯಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸತ್ಯವತಿ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

Tags

Bavariaquantum technologycybersecurity
share
ವಾರ್ತಾಭಾರತಿ
ವಾರ್ತಾಭಾರತಿ
Next Story
X