Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 54 ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ;...

54 ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ; ವೈಕುಂಠ ಏಕಾದಶಿಯತ್ತ ಹೋದ ಸಿಬ್ಬಂದಿಗೆ ಲೋಕಾಯುಕ್ತ ತರಾಟೆ

ವಾರ್ತಾಭಾರತಿವಾರ್ತಾಭಾರತಿ10 Jan 2025 11:05 PM IST
share
54 ಬಿಬಿಎಂಪಿ ಕಚೇರಿಗಳ ಮೇಲೆ ದಾಳಿ; ವೈಕುಂಠ ಏಕಾದಶಿಯತ್ತ ಹೋದ ಸಿಬ್ಬಂದಿಗೆ ಲೋಕಾಯುಕ್ತ ತರಾಟೆ

ಬೆಂಗಳೂರು : ಬಿಬಿಎಂಪಿ ಕಂದಾಯ ಕಚೇರಿ ಕಾರ್ಯ ವೈಖರಿ ಕುರಿತು ದೂರುಗಳ ಸುರಿಮಳೆ ಬೆನ್ನಲ್ಲೇ 54 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ಏಕ ಕಾಲದಲ್ಲಿ ದಿಢೀರ್ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಕೆಲ ಸಿಬ್ಬಂದಿ ವೈಕುಂಠ ಏಕಾದಶಿ ಮಾಡಲು ದೇವಸ್ಥಾನಕ್ಕೆ ಹೋಗಿರುವುದನ್ನು ಗಮನಿಸಿ ಗರಂ ಆಗಿ ಮೊಬೈಲ್ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಶುಕ್ರವಾರ ಖುದ್ದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಹಾಗೂ ಇಬ್ಬರು ಉಪಲೊಕಾಯುಕ್ತರು ದಾಳಿಯಲ್ಲಿ ಭಾಗಿಯಾಗಿ ಅಧಿಕಾರಿಗಳ ಬೆವಳಿಸಿದ್ದಾರೆ. ಅಷ್ಟೇ ಮಾತ್ರವಲ್ಲದೆ ಮಧ್ಯಾಹ್ನದಿಂದ ತಪಾಸಣೆ ನಡೆಯುತ್ತಿದ್ದು, ಇನ್ನೂ ಹಲವು ಕಚೇರಿಗಳಲ್ಲಿ ತಡರಾತ್ರಿವರೆಗೆ ತಪಾಸಣೆ ಮುಂದುವರೆದಿದೆ.

ಅದರಲ್ಲೂ, ಲಾಲ್ ಬಾಗ್ ರಸ್ತೆಯ ಬಿಬಿಎಂಪಿ ಕಚೇರಿ ಭೇಟಿ ವೇಳೆ ಅಧಿಕಾರಿಗಳೇ ಇರಲಿಲ್ಲ. ಅಧಿಕಾರಿಗಳೆಲ್ಲಾ ದೇವಸ್ಥಾನಕ್ಕೆೆ ಹೋಗಿದ್ದಾರೆ ಎಂದು ಸಹಾಯಕರು ಹೇಳಿದ್ದರು. ಈ ವೇಳೆ ಉಪಲೋಕಾಯುಕ್ತ ನ್ಯಾ.ವೀರಪ್ಪ ಅವರು ವೈಕುಂಠ ಏಕಾದಶಿ ಮಾಡಲು ದೇವಸ್ಥಾನಕ್ಕೆೆ ಹೋದರೆ ಇಲ್ಲಿ ಯಾರು ಕೆಲಸ ಮಾಡುತ್ತಾರೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು.

ಇನ್ನೊಂದೆಡೆ, ನ್ಯಾ.ವೀರಪ್ಪ ಅವರು ಸೌತ್ ಆ್ಯಂಡ್ ಸರ್ಕಲ್ ಬಿಬಿಎಂಪಿ ಕಚೇರಿಗೆ ತೆರಳಿದಾಗ ಕೇಸ್ ವರ್ಕರ್ ಕವಿತಾ ಬದಲು ಅವರ ಮಗ ನವೀನ್ ಹಾಜರಾಗಿರುವುದು ಕಂಡು ಬಂದಿತ್ತು. ಮಗನ ಜೊತೆ ಸಹಾಯಕ್ಕೆೆ ನಿಯಮ ಉಲ್ಲಂಘಸಿ ಗೀತಾ ಎಂಬ ಸಹಾಯಕಿಯನ್ನು ಕವಿತಾ ನೇಮಿಸಿರುವುದು ಬೆಳಕಿಗೆ ಬಂದಿದೆ.

ಕಚೇರಿಗೆ ದಾಳಿ ನಡೆಸಿದ ವೇಳೆ ನವೀನ್ ಅವರನ್ನು ಪ್ರಶ್ನಿಸಿದಾಗ ತಾಯಿ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾನೆ. ನೇರವಾಗಿ ಕವಿತಾಗೆ ಕರೆ ಮಾಡಿಸಿದ ನ್ಯಾ.ವೀರಪ್ಪ ಗರಂ ಆಗಿದ್ದಾರೆ.

ಒಟ್ಟಿನಲ್ಲಿ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿಯೂ ಸಹ ಬಹುತೇಕ ಅಧಿಕಾರಿ ಮತ್ತು ಸಿಬ್ಬಂದಿಗಳು ಗೈರುಹಾಜರಿರುವುದು ಕಂಡುಬಂದಿದೆ. ಕಾರ್ಯಪಾಲಕ ಅಭಿಯಂತರರು, ಬಿಬಿಎಂಪಿ ಕೆಆರ್ ಪುರಂ ವಿಭಾಗದಲ್ಲಿ ತಪಾಸಣೆ ಸಮಯದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರ ಬಳಿ ಸುಮಾರು 50 ಸಾವಿರ ರೂ. ನಗದು ಹಾಗೂ ಸಹಾಯಕ ಅಭಿಯಂತರರ ಬಳಿ 43 ಸಾವಿರ ರೂ. ಪತ್ತೆೆಯಾಗಿದೆ. ಈ ಸಂಬಂಧ ಅವರು ನಗದು ಘೋಷಣಾ ವಹಿಯಲ್ಲಿ ತಮ್ಮ ಬಳಿ ಇರುವ ಹಣದ ಬಗ್ಗೆೆ ನಮೂದು ಮಾಡಿರುವುದಿಲ್ಲ. ಈ ನಗದಿನ ಬಗ್ಗೆೆ ಸಮಂಜಸ ಉತ್ತರ ನೀಡಿರುವುದಿಲ್ಲ. ಆನಗದನ್ನು ಮಹಜರು ಮಾಡಿ ವಶಪಡಿಸಿಕೊಳ್ಳಲಾಗಿದೆ.

ಎಲ್ಲ ಲೋಪದೋಷಗಳನ್ನು ಸರಿಪಡಿಸಿ ಲೋಕಾಯುಕ್ತ ಕಚೇರಿಗೆ ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ವರದಿ ನೀಡಲು ಲೋಕಾಯುಕ್ತರು ಸೂಚಿಸಿದ್ದಾರೆ.

ಮುಖ್ಯವಾಗಿ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಎಆರ್‌ಓ ಕಚೇರಿ ಹೆಬ್ಬಾಳ ಸಬ್ ಡಿವಿಷನ್ ಮುನಿರೆಡ್ಡಿ ಪಾಳ್ಯ ಮುಖ್ಯ ರಸ್ತೆೆಯಲ್ಲಿರುವ ಕಚೇರಿಗೆ ಖುದ್ದು ಭೇಟಿ ನೀಡಿದ್ದರು.

ಕಚೇರಿಯಲ್ಲಿ ಯಾವುದೇ ವಹಿಗಳನ್ನು ಅಂದರೆ ಹಾಜರಾತಿ ವಹಿ, ನಗದು ಘೋಷಣಾ ವಹಿ, ಚಲನಾ-ವಲನಾ ವಹಿಗಳನ್ನು ಸರಿಯಾಗಿ ನಿರ್ವಹಣೆ ಮಾಡಿರುವುದಿಲ್ಲ ಎಂಬುದು ಪತ್ತೆಯಾಗಿದೆ.

ಸಹಾಯಕ ಕಾರ್ಯಪಾಲಕ ಅಭಿಯಂತರರ ಹೆಬ್ಬಾಳ ಸಬ್ ಡಿವಿಷನ್ ಕಚೇರಿಯಲ್ಲಿ 21 ಜನ ಹಾಜರಾತಿ ವಹಿಗೆ ಸಹಿ ಮಾಡಿದ್ದು, ಕಚೇರಿಯಲ್ಲಿ ಕೇವಲ ಮೂರು ಜನ ಮಾತ್ರ ಇದ್ದರು. ಎಆರ್‌ಓ ಸಹ ಕಚೇರಿಯಲ್ಲಿ ಹಾಜರಿರಲಿಲ್ಲ. ಕರೆ ಮಾಡಿ ಕೇಳಿದಾಗ ಬೆಳಗ್ಗೆೆ ಕಚೇರಿಗೆ ಬಂದು ನಂತರ ಮುಖ್ಯ ಕಚೇರಿಗೆ ಹೋಗಿರುವುದಾಗಿ ತಿಳಿಸಿದ್ದಾರೆ.

ಆದರೆ ಆ ಬಗ್ಗೆೆ ಚಲನಾ-ವಲನಾ ವಹಿಯಲ್ಲಿ ನಮೂದು ಮಾಡಿರುವುದಿಲ್ಲ. ಎಆರ್‌ಓ ಅವರು ಬೆಳಗ್ಗೆೆ ಕಚೇರಿಗೆ ಬಂದು ಮಧ್ಯಾಹ್ನದವರೆಗೂ ಕೆಲಸ ಮಾಡಿರುತ್ತೇನೆಂದು ಹೇಳಿರುತ್ತಾರೆ. ಆದರೆ ಹಾಜರಾತಿ ವಹಿಯಲ್ಲಿ ಆಗಸ್ಟ್‌- 2023 ರ ನಂತರ ನಿರ್ವಹಣೆ ಮಾಡಿರುವುದಿಲ್ಲ. ಈ ಬಗ್ಗೆೆ ಹಾಜರಿದ್ದ ಸಿಬ್ಬಂದಿಗಳು ಯಾವುದೇ ಸಮರ್ಪಕ ಉತ್ತರ ನೀಡಿರುವುದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದಿಢೀರ್ ದಾಳಿ ಏಕೆ? :

ಬಿಬಿಎಂಪಿ ಆರ್‌ಓ ಮತ್ತು ಎಆರ್‌ಓ ಕಚೇರಿಗಳಲ್ಲಿ ಪಾಲಿಕೆಗೆ ಸಂಬಂಧಿಸಿದ ಸ್ವತ್ತುಗಳಿಗೆ ಇ-ಖಾತಾ ನೀಡುತ್ತಿದೆ. ಸದರಿ ಇ-ಖಾತಾ ಪಡೆಯುವಲ್ಲಿ ಗ್ರಾಹಕರು ಹಲವಾರು ಸಮಸ್ಯೆೆಗಳನ್ನು ಎದುರಿಸುತ್ತಿದ್ದ ಬಗ್ಗೆೆ ಅನೇಕ ದೂರುಗಳು ಲೋಕಾಯುಕ್ತಕ್ಕೆೆ ಬಂದಿದ್ದವು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X