Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೆ.15ರ ಒಳಗೆ ಬಿಬಿಎಂಪಿ ವಿಭಜನೆ...

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ : ಡಿಸಿಎಂ ಡಿ.ಕೆ.ಶಿವಕುಮಾರ್

► ಬೆಂಗಳೂರಿನ ಫುಟ್ ಪಾತ್ ಅಂಗಡಿಗಳು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ ► ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ24 May 2025 9:38 PM IST
share
ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಸೆಪ್ಟೆಂಬರ್ 15ರ ಒಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆಯಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರಿನಲ್ಲಿ ಮಳೆ ಹಾನಿ, ಬೆಂಗಳೂರು ಪ್ರಗತಿ ಹಾಗೂ ಗ್ರೇಟರ್ ಬೆಂಗಳೂರು ಅಧಿನಿಯಮ ಅನುಷ್ಠಾನ ಕುರಿತು ಬೆಂಗಳೂರಿನ ಶಾಸಕರು ಹಾಗೂ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ವಿರೋಧ ಪಕ್ಷದ ನಾಯಕರು ಸೇರಿದಂತೆ ಇನ್ನೂ ಮೂರ್ನಾಲ್ಕು ಶಾಸಕರ ಜತೆ ಚರ್ಚೆ ಮಾಡುತ್ತೇನೆ. ಎಲ್ಲರ ಸಲಹೆ ಪಡೆದ ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು. ಮೇ 15ರಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಜಿಎ) ಆಗಿ ಪರಿವರ್ತನೆಗೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಅವರು ಹೇಳಿದರು.

120 ದಿನಗಳಲ್ಲಿ ನಾವು ಪಾಲಿಕೆಗಳನ್ನು ರಚನೆ ಮಾಡಲೇಬೇಕು. ಹೀಗಾಗಿ ಎಷ್ಟು ಪಾಲಿಕೆ ಮಾಡಬೇಕು ಎಂದು ಬೆಂಗಳೂರಿನ ಎಲ್ಲ ಶಾಸಕರ ಬಳಿ ಸಲಹೆಗಳನ್ನು ಕೇಳಿದ್ದೇನೆ. ನಂತರ ಮುಂದೆ ಎಲ್ಲೆಲ್ಲಿ ವಿಸ್ತರಣೆ ಮಾಡಬೇಕು ಎಂದು ತೀರ್ಮಾನ ಮಾಡುತ್ತೇವೆ. ಸೆಪ್ಟೆಂಬರ್ 15ರ ಒಳಗಾಗಿ ಈ ಪಾಲಿಕೆಗಳು ರಚನೆಯಾಗಬೇಕು ಎಂದು ಶಿವಕುಮಾರ್ ತಿಳಿಸಿದರು.

ಮಳೆ ಪೀಡಿತ ಪ್ರದೇಶಗಳ ಶಾಸಕರ ಜತೆ ಚರ್ಚೆ ಮಾಡಿ ತುರ್ತು ಕೆಲಸ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ಇದಕ್ಕೆ ಅಗತ್ಯವಿರುವ ಬಜೆಟ್ ಅನ್ನು ಸರಕಾರದಿಂದ ನೀಡುತ್ತೇವೆ. ಟ್ಯಾಂಕರ್ ನೀರಿನ ವಿಚಾರವಾಗಿ ದೂರು ಬಂದಿರುವ ಪ್ರದೇಶಗಳಲ್ಲಿ ಆಯಾ ಋತುವಿಗೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ ಎಂದು ಅವರು ತಿಳಿಸಿದರು.

ಬೆಂಗಳೂರಿನ ಎಲ್ಲ ಪಾದಚಾರಿ ಮಾರ್ಗಗಳಲ್ಲಿ ಅಂಗಡಿಗಳನ್ನು ತೆರವುಗೊಳಿಸಲು ನಿರ್ಧರಿಸಿದ್ದೇವೆ. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ನಾವು ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧರಿದ್ದೇವೆ. ನಾವು ನಿಗದಿ ಮಾಡುವ ಜಾಗದಲ್ಲಿ ವಾಹನ ಇಟ್ಟುಕೊಂಡು ವ್ಯಾಪಾರ ಮಾಡಬೇಕು. 3,755 ಜನ ವ್ಯಾಪಾರಿಗಳು ವಾಹನ ಬೇಕು ಎಂದು ಕೇಳಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಸ್ತೆ ಅಗಲೀಕರಣದ ವಿಚಾರವಾಗಿ ಶಾಸಕರ ಜತೆ ಚರ್ಚೆ ಮಾಡಲಾಗಿದ್ದು, ಶಾಸಕರು ಎಲ್ಲೆಲ್ಲಿ ರಸ್ತೆ ಅಗಲೀಕರಣ ಆಗಬೇಕು ಎಂದು ಶಿಫಾರಸ್ಸು ಮಾಡುತ್ತಾರೋ ಅಲ್ಲಿ ಆಸ್ತಿ ಮಾಲಕರಿಗೆ ಟಿಡಿಆರ್ ನೀಡಲಾಗುವುದು. ಶಾಸಕರು ಆಸ್ತಿ ಮಾಲಕರ ಜತೆ ಚರ್ಚೆ ಮಾಡಬೇಕು ಎಂದು ಶಿವಕುಮಾರ್ ತಿಳಿಸಿದರು.

ರಾಜಕಾಲುವೆ ಅಕ್ಕಪಕ್ಕದ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಿದ್ದು, ನಾವು 300 ಕಿ.ಮೀ ಉದ್ದದ ರಸ್ತೆ ಗುರುತಿಸಿದ್ದು, ಶಾಸಕರು ಕೂಡ ಸುಮಾರು 300 ಕಿ.ಮೀ ಉದ್ದದಷ್ಟು ರಸ್ತೆ ಮಾಡಲು ಶಿಫಾರಸ್ಸು ನೀಡಬಹುದು ಎಂದು ಹೇಳಿದ್ದೇವೆ. ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್ ಮೆಂಟ್ ಪಾರ್ಕಿಂಗ್‌ ಗೆ ಅವಕಾಶ ಇರುವುದಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ಆಪ್ಟಿಕಲ್ ಫೈಬರ್ ಕೇಬಲ್ ಗಳನ್ನು ಒಳಚರಂಡಿ ಹಾಗೂ ನೀರು ಗಾಲುವೆಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಲವು ಶಾಸಕರು ಹೇಳಿದ್ದಾರೆ. ಈ ರೀತಿ ಎಳೆದಿರುವ ಕೇಬಲ್ ಗಳನ್ನು ಕತ್ತರಿಸಿ ಹಾಕಲು ನಾನು ಹೇಳಿದ್ದೇನೆ. ಇನ್ನು ಚರಂಡಿಗಳಲ್ಲಿ ಹೂಳು ಎತ್ತಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ನಗರದ 25 ಲಕ್ಷ ಆಸ್ತಿಗಳನ್ನು ಇ-ಖಾತಾ ಮಾಡಲು ಹೇಳಿದ್ದು, ಎಲ್ಲ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡುತ್ತಿದ್ದು, ಈಗಾಗಲೇ 5 ಲಕ್ಷ ಆಸ್ತಿಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದನ್ನು ದೊಡ್ಡ ಅಭಿಯಾನವಾಗಿ ಮಾಡುತ್ತಿದ್ದೇವೆ. ಆಮೂಲಕ ತೆರಿಗೆ ಹಾಗೂ ಆಸ್ತಿ ದಾಖಲಾತಿಯಲ್ಲಿ ಪಾರದರ್ಶಕತೆ ತರಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರಕಾರದಿಂದ ರಾಷ್ಟ್ರೀಯ ಇ-ಆಡಳಿತ ಗೋಲ್ಡ್ ಪ್ರಶಸ್ತಿ ಕೂಡ ಸಿಕ್ಕಿದೆ ಎಂದು ಅವರು ಮಾಹಿತಿ ನೀಡಿದರು.

ಸ್ಕೈ ಡೆಕ್ ಅನ್ನು ಹೆಮ್ಮಿಗೆಪುರದಲ್ಲಿ ನಿರ್ಮಿಸಲು ತೀರ್ಮಾನಿಸಿದ್ದೆವು. ಆದರೆ ವಿಮಾನ ನಿಲ್ದಾಣದಿಂದ 20 ಕಿ.ಮೀ ದೂರ ಇರಬೇಕು ಎಂಬ ಕಾರಣದಿಂದ ಅಲ್ಲಿ ಸಮಸ್ಯೆ ಎದುರಾಗಿದೆ. ಹೀಗಾಗಿ ಇದನ್ನು ಕೆಂಪೇಗೌಡ ಬಡಾವಣೆಯಲ್ಲಿ ಬಿಡಿಎ ಜಾಗದಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ರಸ್ತೆಗಳಲ್ಲಿ ಹಳೆ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಿಂದ 100 ಎಕರೆ ಜಾಗ ಒದಗಿಸಿ, ಆ ಎಲ್ಲ ವಾಹನಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸಂಚಾರಿ ಪೊಲೀಸರಿಗೆ ಸೂಚಿಸಲಾಗಿದೆ. ಪಾಲಿಕೆ ಕಾನೂನಿನ ಪ್ರಕಾರ 21 ದಿನಗಳ ಕಾಲ ರಸ್ತೆಯಲ್ಲಿ ನಿಲ್ಲಿಸಿರುವ ವಾಹನ ತೆಗೆಯದಿದ್ದರೆ ಅದನ್ನು ಅನಾಥ ವಾಹನ ಎಂದು ಪರಿಗಣಿಸಿ ಹರಾಜು ಹಾಕಲು ಅವಕಾಶವಿದೆ. ಇನ್ನು ಪೊಲೀಸರು ನಿಗದಿ ಮಾಡುವ ನೋ ಪಾರ್ಕಿಂಗ್‌ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ಇನ್ನು ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ಮುಖ್ಯ ರಸ್ತೆ ಜತೆ ವಿಲೀನ ಮಾಡಿ ಸುಗಮವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ಸುಮಾರು 40-50 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಶಾಸಕರನ್ನು ವಿಶ್ವಾಸಕ್ಕೆ ಪಡೆದಿದ್ದು, ಎಲ್ಲರೂ ಒಪ್ಪಿದ್ದಾರೆ ಎಂದು ಅವರು ಹೇಳಿದರು.

ಬಿಬಿಎಂಪಿ ವಿಭಜನೆ ಬಗ್ಗೆ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ, ಅವರು ನಿಮ್ಮ ಮುಂದೆ ಏನು ಹೇಳುತ್ತಾರೋ. ಆದರೆ ನನ್ನ ಬಳಿ ಅವರು ಏನು ಹೇಳುತ್ತಾರೆ ಎಂದು ನನಗೆ ಮಾತ್ರ ಗೊತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X