Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ...

ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿ ಏಕರೂಪ ತೆರಿಗೆ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ28 Dec 2023 7:32 PM IST
share
ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಬಿಬಿಎಂಪಿ ಮಾದರಿ ಏಕರೂಪ ತೆರಿಗೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೆ ರಾಜ್ಯದಾದ್ಯಂತ ಏಕರೂಪವಾಗಿ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಗುರುವಾರ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಸಂಪುಟ ಉಪಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು. ಇನ್ನು ಮುಂದೆ ಯಾರೆ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

ನಿಯಮ ಸರಳೀಕರಣ: ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ್ ಖಂಡ್ರೆ ಸಲಹೆ ನೀಡಿದರು.

ನೂತನವಾಗಿ ಯಾವುದೆ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೆ ಇಂತಹ ಕಟ್ಟಡ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಢೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೆ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಅವರು ಸೂಚಿಸಿದರು. ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್ ಮತ್ತು ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X