Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ...

ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 Aug 2023 11:44 PM IST
share
ಬರಿಗಾಲಿನಲ್ಲಿ ಕಚೇರಿಗೆ ಬರುವವರ ಬಗ್ಗೆ ಕಾರಿನಲ್ಲಿ ಓಡಾಡುವ ನಿಮಗೆ ಗೌರವವಿರಲಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಮೈಸೂರು: ʼʼಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲಕರು. ಕಾರಿನಲ್ಲಿ ಓಡಾಡುವ ಅಧಿಕಾರಿಗಳು ಬರಿಗಾಲಿನಲ್ಲಿ ಬರುವವರನ್ನು ಗೌರವದಿಂದ ಕಾಣಬೇಕು. ಅವರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಿ ಕೊಡಬೇಕುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇಂದು ನಡೆದ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ʼʼಮೊದಲು ನನ್ನ ಜಿಲ್ಲೆಯಲ್ಲಿ ಜಿಲ್ಲಾಡಳಿತ ಇನ್ನಷ್ಟು ಚುರುಕಾಗಬೇಕು. ನಿಯಮಬದ್ಧವಾಗಿ, ಕಾಲ ಮಿತಿಯಲ್ಲಿ ಕೆಲಸ ಮಾಡದಿದ್ದರೆ ಅದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನ ಯಾವ ನಿರೀಕ್ಷೆ ಇಟ್ಟುಕೊಂಡು ಸರ್ಕಾರವನ್ನು ಬದಲಾಯಿಸಿದ್ದಾರೆ ಎನ್ನುವುದನ್ನು ಅರ್ಥ ಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕುʼʼ ಎಂದು ಹೇಳಿದರು.

ʼʼಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ, ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ? ಹಾಗಾದರೆ ಸ್ಥಳೀಯ ಅಧಿಕಾರಿಗಳು ಇರುವುದು ಯಾಕೆ?ʼʼ ಎಂದು ಪ್ರಶ್ನಿಸಿದರು.

ʼʼಜನರಿಗೆ ಅಧಿಕಾರಿಗಳು - ಕಚೇರಿ ಸಿಬ್ಬಂದಿ ಕೈಗೆ ಸಿಗಬೇಕು. ಖಾತೆ ಮಾಡಿಸಿಕೊಳ್ಳಲು, ಜಾತಿ ಪ್ರಮಾಣ ಪತ್ರಕ್ಕೆ ಜನ ವಿಧಾನಸೌಧಕ್ಕೆ ಬರಬೇಕಾ? ಜನರೇ ನಮ್ಮ ಮಾಲೀಕರು. ನಾವು ಜನಗಳ ಸೇವಕರು. ಜನರ ಹಣದಲ್ಲಿ ನಿಮಗೆ, ನಮಗೆ ಎಲ್ಲಾ ರೀತಿಯ ಸವಲತ್ತುಗಳು ಸಿಗುತ್ತಿವೆ. ಹೀಗಾಗಿ ಜನರನ್ನು ಸಣ್ಣ ಪುಟ್ಟ ಕೆಲಸಕ್ಕೆ ಸರ್ಕಾರಿ ಕಚೇರಿಗಳಿಗೆ ಅಲೆಸದಂತೆ ಕೆಲಸ ಮಾಡಬೇಕು. ಜನ ಸಣ್ಣ ಕೆಲಸಗಳಿಗೆ ವಿಧಾನಸೌಧಕ್ಕೆ ಬರುತ್ತಾರೆ ಎಂದರೆ, ನನ್ನನ್ನು ಹುಡುಕಿಕೊಂಡು ಬರುತ್ತಾರೆ ಎಂದರೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದೇ ಅರ್ಥ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆʼʼ ಎಂದು ಎಚ್ಚರಿಕೆ ನೀಡಿದರು.

ʼʼಮೈಸೂರು ಜಿಲ್ಲೆ ಶಿಕ್ಷಣ ಸೂಚ್ಯಂಕದಲ್ಲಿ 16ನೇ ಸ್ಥಾನದಲ್ಲಿದೆ ಎಂದರೆ ನಾಚಿಕೆಗೇಡು. ಇದನ್ನು ನಾನು ಸಹಿಸಲ್ಲ. ಶಿಕ್ಷಣ, ಆರೋಗ್ಯ ಸೂಚ್ಯಂಕ ಸೇರಿ ಎಲ್ಲಾ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಮೈಸೂರು ಮಾದರಿ ಜಿಲ್ಲೆಯಾಗಲೇಬೇಕು. ಅಧಿಕಾರಿಗಳು ಆ ರೀತಿ ದಕ್ಷತೆ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕುʼʼ ಎಂದು ಸೂಚನೆ ನೀಡಿದರು.

ʼʼಆರು ತಿಂಗಳ ಬಳಿಕ ಮತ್ತೆ ಕೆಡಿಪಿ ಸಭೆ ನಡೆಸುತ್ತೇನೆ. ಅಷ್ಟರೊಳಗೆ ಪರಿಸ್ಥಿತಿ ಸುಧಾರಿಸಬೇಕು. ಪ್ರಗತಿಯ ವೇಗ ಹೆಚ್ಚಾಗಬೇಕು. ಇಲ್ಲದಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡುತ್ತೇನೆ. ಪ್ರೀ ಮೆಚೂರ್ ಎನ್ನುವುದನ್ನೂ ನೋಡದೆ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆʼʼ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X