ಬಿ.ಇಡಿ ಕೋರ್ಸ್ಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು, ಅ.4: 2025-26ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರಕಾರಿ ಕೋಟಾದ ಸೀಟುಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ನ.3ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರು ಬಿ.ಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು https://schooleducation.karnataka.gov.in ವೆಬ್ಸೈಟ್ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಕ್ರಮಬದ್ದವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
Next Story





