ಬಿ.ಇಡಿ ಕೋರ್ಸ್ ಪ್ರವೇಶಾತಿ; ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ

ಸಾಂದರ್ಭಿಕ ಚಿತ್ರ | PC : gemini AI
ಬೆಂಗಳೂರು : 2025-26ನೆ ಸಾಲಿನ ಬಿ.ಇಡಿ ದಾಖಲಾತಿಗೆ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳಿಗೆ ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಗಳಲ್ಲಿ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು ನಡೆಯುತ್ತಿದೆ ಎಂದು ಶಿಕ್ಷಣ ಇಲಾಖೆಯು ತಿಳಿಸಿದೆ.
ಸೋಮವಾರ ಪ್ರಕಟನೆ ಹೊರಡಿಸಿದ್ದು, ನ.3ರಂದು ಬಿ.ಇಡಿ ದಾಖಲಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ತಮ್ಮ ವ್ಯಾಪ್ತಿಯ ನೋಡಲ್ ಕೇಂದ್ರಕ್ಕೆ ಮೂಲ ದಾಖಲೆಗಳೊಂದಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದಿದೆ.
ಆದರೂ ಅನೇಕ ಮಂದಿ ತಮ್ಮ ದಾಖಲೆಗಳ ಪರಿಶೀಲನೆ ಮಾಡಿಸಿರುವುದಿಲ್ಲ. ಹೀಗಾಗಿ 7 ದಿನಗಳ ಒಳಗಾಗಿ ದಾಖಲೆಗಳ ಪರಿಶೀಲನೆ ಮಾಡಿಸಿಕೊಳ್ಳದ ಅಭ್ಯರ್ಥಿಗಳನ್ನು 2025-26ನೆ ಸಾಲಿನ ಬಿ.ಇಡಿ ದಾಖಲಾತಿಗೆ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
Next Story





