Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Belagavi | ಬಹುಕೋಟಿ ಹಣ ದುರುಪಯೋಗ...

Belagavi | ಬಹುಕೋಟಿ ಹಣ ದುರುಪಯೋಗ ಪ್ರಕರಣ: ಶಿವಾನಂದ ನೀಲಣ್ಣವರ 10 ದಿನ ಸಿಐಡಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ18 May 2026 7:37 PM IST
share
Belagavi | ಬಹುಕೋಟಿ ಹಣ ದುರುಪಯೋಗ ಪ್ರಕರಣ: ಶಿವಾನಂದ ನೀಲಣ್ಣವರ 10 ದಿನ ಸಿಐಡಿ ವಶಕ್ಕೆ

ಬೆಳಗಾವಿ : ನಗರದಲ್ಲಿ ಸಂಚಲನ ಮೂಡಿಸಿರುವ ಬಹುಕೋಟಿ ಹಣ ದುರಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಕಳೆದ ಕೆಲವು ದಿನಗಳಿಂದ ಮಾಳಮಾರುತಿ ಠಾಣೆ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದ್ದು, ಸಿಐಡಿ ಡಿಜಿಪಿ ಭೀಮಾಶಂಕರ ಗುಳೇದ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದರು.

ಸೋಮವಾರ ಬೆಳಿಗ್ಗೆ ಆರೋಪಿಯನ್ನು ಪೊಲೀಸರು ಬೆಳಗಾವಿಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ಸಿಐಡಿ ಅಧಿಕಾರಿಗಳು, “ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಹಣದ ವ್ಯವಹಾರ ನಡೆದಿರುವ ಶಂಕೆ ಇದೆ. ಸುಮಾರು 35 ಸಾವಿರ ಹೂಡಿಕೆದಾರರ ಮಾಹಿತಿಯನ್ನು ಪರಿಶೀಲಿಸಬೇಕಿದ್ದು, ಹೆಚ್ಚಿನ ತನಿಖೆಗಾಗಿ 10 ದಿನಗಳ ಕಸ್ಟಡಿ ಅಗತ್ಯವಿದೆ” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ನ್ಯಾಯಾಲಯದ ಆದೇಶದಂತೆ ಶಿವಾನಂದ ನೀಲಣ್ಣವರರನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಲಾಗಿದೆ. ಸಿಐಡಿ ಅಧಿಕಾರಿಗಳು ಇನ್ನೂ ಎರಡು ದಿನ ಬೆಳಗಾವಿಯಲ್ಲೇ ವಿಚಾರಣೆ ನಡೆಸಿ, ಬಳಿಕ ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 35 ಸಾವಿರಕ್ಕೂ ಹೆಚ್ಚು ಹೂಡಿಕೆದಾರರ ಮಾಹಿತಿಯನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದು, ಎಲ್ಲ ದಾಖಲೆಗಳನ್ನು ಸಿಐಡಿಗೆ ಹಸ್ತಾಂತರಿಸಲಾಗುತ್ತಿದೆ.

ಇದೇ ಪ್ರಕರಣದಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪದಡಿ ಮಹಾರಾಷ್ಟ್ರ ಮೂಲದ ಓಂಕಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆ್ಯಪ್‌ನ ತಾಂತ್ರಿಕ ವಿಭಾಗದ ಜವಾಬ್ದಾರಿ ನೋಡಿಕೊಳ್ಳುತ್ತಿದ್ದ ಆತ, ಆ್ಯಪ್‌ನಲ್ಲಿದ್ದ ಮಾಹಿತಿಯನ್ನು ಅಳಿಸಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಆರೋಪಿ ಪರ ವಕೀಲರು ಮಾಧ್ಯಮಗಳೊಂದಿಗೆ ಮಾತನಾಡಿ, “ಪ್ರಕರಣದಲ್ಲಿ 35 ಸಾವಿರ ಜನ ಠೇವಣಿದಾರರು ಇದ್ದಾರೆ. ಆದರೆ ದಾಖಲೆಗಳಲ್ಲಿ ಎಲ್ಲಿಯೂ ಹೆಚ್ಚಿನ ಬಡ್ಡಿ ನೀಡುವ ಕುರಿತು ಉಲ್ಲೇಖವಿಲ್ಲ. ಆರ್‌ಬಿಐ ನಿಯಮ ಉಲ್ಲಂಘನೆ ನಡೆದಿದೆ ಎನ್ನುವುದು ಪೊಲೀಸರ ವಾದ. ಆದರೆ ಇದುವರೆಗೆ ಯಾರೂ ನೇರವಾಗಿ ದೂರು ನೀಡಿಲ್ಲ. ಶೀಘ್ರದಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಲಾಗುವುದು” ಎಂದು ಹೇಳಿದರು.

Tags

BelagaviCID custody
share
ವಾರ್ತಾಭಾರತಿ
ವಾರ್ತಾಭಾರತಿ
Next Story
X