Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಭೂಮಿ ದಾಖಲೀಕರಣ, ಡೀಮ್ಡ್ ಅರಣ್ಯ...

ಅರಣ್ಯ ಭೂಮಿ ದಾಖಲೀಕರಣ, ಡೀಮ್ಡ್ ಅರಣ್ಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಲು ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ24 Oct 2024 9:55 PM IST
share
ಅರಣ್ಯ ಭೂಮಿ ದಾಖಲೀಕರಣ, ಡೀಮ್ಡ್ ಅರಣ್ಯ ಪುನರ್ ಪರಿಶೀಲನೆಗೆ ಸಮಿತಿ ರಚಿಸಲು ತೀರ್ಮಾನ

ಬೆಂಗಳೂರು : ರಾಜ್ಯದ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಮತ್ತು ಪರಿಭಾವಿತ ಅರಣ್ಯದ ಪುನರ್ ಪರಿಶೀಲನೆಗಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಜಂಟಿ ಅಧ್ಯಕ್ಷತೆಯಲ್ಲಿ ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿಸಲಾದ ಅರಣ್ಯ ಪ್ರದೇಶದ ಸಮಗ್ರ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಪ್ರದೇಶದ ಲೋಪದೋಷ ಸರಿಪಡಿಸಲು ಪರಾಮರ್ಶಿಸಿ 6 ತಿಂಗಳೊಳಗೆ ವರದಿ ಸಲ್ಲಿಸಲಿದೆ.

ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರಕಾರಿ ಕಚೇರಿ, ಶಾಲೆ ಕಾಲೇಜುಗಳೂ ಇವೆ. ಹೀಗಾಗಿ ಇದರ ಪರಾಮರ್ಶೆ ಆಗಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಈಶ್ವರ್ ಖಂಡ್ರೆ ಮತ್ತು ಕೃಷ್ಣಬೈರೇಗೌಡ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಗೋದಾವರ್ಮನ್ ತಿರುಮಲ್ಪಾಡ್ ಹಾಗೂ ಕೇಂದ್ರ ಸರಕಾರ ಹಾಗೂ ಇತರರು ಪ್ರಕರಣದಲ್ಲಿ ಸುಪ್ರೀಂಕೋರ್ಟ್ 1996ರಲ್ಲಿ ಅರಣ್ಯ ಮತ್ತು ಅರಣ್ಯ ಭೂಮಿಯ ಬಗ್ಗೆ ವ್ಯಾಖ್ಯಾನ ನೀಡಿ, ಅರಣ್ಯ ಗುರುತಿಸಲು ತಜ್ಞರ ಸಮಿತಿ ರಚಿಸಿ ಅಫಿಡವಿಟ್ ನಲ್ಲಿ ವಾಸ್ತವ ವರದಿ ಸಲ್ಲಿಸಲು ಸೂಚಿಸಿತ್ತು.

ತಜ್ಞರ ಸಮಿತಿ-1 ಸಮೀಕ್ಷೆ ನಡೆಸಿ 9,94,881.11 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಗುರುತಿಸಿತ್ತು. ಆದರೆ ಈ ಗುರುತಿಸುವಿಕೆಯಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ತಜ್ಞರ ಸಮಿತಿ-2ನ್ನು ನೇಮಿಸಲಾಗಿತ್ತು. ಈ ಸಮಿತಿ 3,30,286.93 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಎಂದು ಗುರುತಿಸಿತ್ತು.

ಪುನರ್ ಪರಿಶೀಲನೆಗೆ ನೇಮಿಸಲಾಗುವ ಸಮಿತಿ ಈಗಾಗಲೇ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರದಲ್ಲಿ ತಿಳಿಸಲಾಗಿರುವ 3,30,286.93 ಹೆಕ್ಟೇರ್ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಸರಕಾರಿ ಕಚೇರಿ, ಶಾಲೆ, ಪಟ್ಟಾಭೂಮಿ ಇತ್ಯಾದಿ ಇದ್ದಲ್ಲಿ, ಇದಕ್ಕೆ ಪರ್ಯಾಯವಾಗಿ ಮರಗಿಡಗಳಿಂದ ಸಮೃದ್ಧವಾದ ಇತರ ಪ್ರದೇಶವನ್ನು ಗುರುತಿಸುವ ಕಾರ್ಯ ಮಾಡಬೇಕು ಎಂದು ಈಶ್ವರ್ ಖಂಡ್ರೆ ಸಲಹೆ ನೀಡಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ಈಗಾಗಲೇ ಕಂದಾಯ ಇಲಾಖೆ ಸೂಚನೆ ನೀಡಿದ್ದು, ರಾಜ್ಯದ 20 ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ಪ್ರಗತಿಯಲ್ಲಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಒಂದೆರೆಡು ಜಿಲ್ಲೆ ಆಯ್ಕೆ ಮಾಡಿಕೊಂಡು, ಜಂಟಿ ಸರ್ವೆ ನಡೆಸಿದಲ್ಲಿ ಸಮಸ್ಯೆಗಳು, ಗೊಂದಲಗಳ ಬಗ್ಗೆ ತಿಳಿಯುತ್ತದೆ. ಇದು ನೂತನ ತಜ್ಞರ ಸಮಿತಿ ವರದಿ ಸಲ್ಲಿಕೆಗೆ ನೆರವಾಗಲಿದೆ ಎಂದು ತಿಳಿಸಿದರು.

ಅರಣ್ಯ ಇಲಾಖೆ, ಕಂದಾಯ ಇಲಾಖೆಗೆ ಎಲ್ಲ ಅಧಿಸೂಚಿತ ಮತ್ತು ಪರಿಭಾವಿತ ಅರಣ್ಯದ ಪಟ್ಟಿಯನ್ನು ತಮ್ಮ ಬಳಿ ಇರುವ ನಕ್ಷೆಯೊಂದಿಗೆ ನೀಡಿದಲ್ಲಿ, ತಾಳೆ ಮಾಡಿ ಪರಾಮರ್ಶಿಸಲು ಅನುಕೂಲವಾಗುತ್ತದೆ ಎಂದು ಅವರು ಸಲಹೆ ನೀಡಿದರು.

ಜಂಟಿ ಸರ್ವೆ: ಅದೇ ರೀತಿ ಪರಿಭಾವಿತ ಅರಣ್ಯಕ್ಕೆ ಸಂಬಂಧಿಸಿದಂತೆ ಎಲ್ಲೆಲ್ಲಿ ಗೊಂದಲ ಇದೆಯೋ ಆ ಜಿಲ್ಲೆಗಳಲ್ಲಿ ಮತ್ತು ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಎರಡೂ ಇರುವ ಭೂಮಿಯ ಜಂಟಿ ಸರ್ವೆ ನಡೆಸಲು ಉಳಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ಮುಂದೆ ಯಾವುದೇ ಲೋಪದೋಷಕ್ಕೆ ಆಸ್ಪದ ಇಲ್ಲದಂತೆ ಪರಿಭಾವಿತ ಅರಣ್ಯದ ವಾಸ್ತವ ವರದಿ ಸಲ್ಲಿಸಲು ಸೂಚಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ತಂತ್ರಜ್ಞಾನದ ನೆರವು: ಹೊಸದಾಗಿ ರಚಿಸಲಾಗುವ ತಜ್ಞರ ಸಮಿತಿಗೆ ಅರಣ್ಯ ಇಲಾಖೆ ಈಗಾಗಲೇ ಸಿದ್ಧಪಡಿಸಿರುವ ಅರಣ್ಯ ದತ್ತಾಂಶವನ್ನು ನೀಡಲು ಮತ್ತು ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದಂತೆ ಜಿಐಎಸ್ ಮತ್ತು ದೂರಸಂವೇದಿ ನೆರವನ್ನು ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದಿಂದ ಪಡೆಯಲೂ ನಿರ್ಧರಿಸಲಾಯಿತು. ಈ ಸಮಿತಿಯ ರಚನೆಯಿಂದ ಪರಿಭಾವಿತ ಮತ್ತು ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದಂತೆ ಇರುವ ಗೊಂದಲ ಪರಿಹಾರವಾಗುವ ವಿಶ್ವಾಸವನ್ನು ಸಭೆ ವ್ಯಕ್ತಪಡಿಸಿತು.

ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ಮತ್ತು ಎರಡೂ ಇಲಾಖೆಗಳ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X