ಬೆಂಗಳೂರು: ಯುವತಿಯರೊಂದಿಗೆ ಅಸಹ್ಯವಾಗಿ ವರ್ತಿಸುತ್ತಿದ್ದ ಆರೋಪಿ ಸೆರೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ. 2: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಗುರಿಯಾಗಿಸಿ ಯುವತಿಯರ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಪರಾರಿಯಾಗುತ್ತಿದ್ದ ಯುವಕನನ್ನು ಇಲ್ಲಿನ ಹೈಗ್ರೌಂಡ್ಸ್ ಪೊಲೀಸರು ರವಿವಾರ ಬಂಧಿಸಿರುವುದಾಗಿ ವರದಿಯಾಗಿದೆ.
ವೈಯ್ಯಾಲಿ ಕಾವಲ್ನ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಈತ ಒಂಟಿಯಾಗಿ ಓಡಾಡುವ ಯುವತಿಯರನ್ನು ಹಿಂಬಾಲಿಸಿ ಯಾರು ಇಲ್ಲದ ಸಮಯ ನೋಡಿಕೊಂಡು ಅವರನ್ನು ಅಪ್ಪಿ ಖಾಸಗಿ ಅಂಗಗಳನ್ನು ಸ್ಪರ್ಶಿಸಿ ಅಸಹ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಓರ್ವ ಸಂತ್ರಸ್ತ ಯುವತಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story





